ಬಂಡಾರು ದತ್ತಾತ್ರೇಯ ಅವರ ಪುತ್ರ ಹೃದಯಾಘಾತದಿಂದ ನಿಧನ
ಹೈದರಾಬಾದ್, ಮೇ 23: ಮಾಜಿ ಕೇಂದ್ರ ಸಚಿವ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಂಡಾರು ದತ್ತಾತ್ರೇಯ ಅವರ ಪುತ್ರ ವೈಷ್ಣವ್(21) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಿನ್ನೆ(ಮೇ 23) ರಾತ್ರಿ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಸಿಖಂದರಾಬಾದಿನ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

ವೈಷ್ಣವ್ ತೃತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಪುತ್ರನ ಅಕಾಲಿಕ ಮರಣಕ್ಕೆ ಸಂಸದ ಬಂಡಾರು ದತ್ತಾತ್ರೇಯ, ಮತ್ತು ಕುಟುಂಬಸ್ಥರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವರ ಪುತ್ರನ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.












Click it and Unblock the Notifications