ಬಾಂದ್ರಾ- ಡೆಹ್ರಾಡೂನ್ ರೈಲಿಗೆ ಬೆಂಕಿ, 9 ಸಾವು

ಥಾಣೆ, ಜ.8 : ಪುಟ್ಟಪರ್ತಿ ರೈಲು ದುರಂತದ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ರೈಲಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಹಾರಾಷ್ಟ್ರದ ಥಾಣೆ ಬಳಿ ಬಾಂದ್ರಾ- ಡೆಹ್ರಾಡೂನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, 9 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಥಾಣೆ ನಿಲ್ದಾಣದ ಸಮೀಪ ಬುಧವಾರ ಮುಂಜಾನೆ 2.30ರ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಬಾಂದ್ರಾ ರೈಲು ನಿಲ್ದಾಣದಿಂದ ಹೊರಟಿದ್ದ ರೈಲಿನ ಮೂರು ಸ್ಲೀಪರ್ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಂಭತ್ತು ಜನರು ಮೃತಪಟ್ಟಿದ್ದಾರೆ.

Dehradun Express

ಬಾಂದ್ರಾ- ಡೆಹ್ರಾಡೂನ್ ರೈಲಿನ ಎಸ್2, ಎಸ್3 ಮತ್ತು ಎಸ್ 4 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿಂದೆ. ಮೂರು ಬೋಗಿಗಳ ಪೈಕಿ 9 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪ್ರಯಾಣಿಕರು ನಿದ್ದೆಯಲ್ಲಿದ್ದಾಗ ಈ ದುರಂತ ನಡೆದಿದ್ದು, ಬೋಗಿಯಿಂದ ಹೊರಬರಲಾರದೆ ಒಬ್ಬರು ಮಹಿಳೆ ಸೇರಿದಂತೆ ಒಂಭತ್ತು ಮಂದಿ ಸಜೀವವಾಗಿ ದಹನವಾಗಿದ್ದಾರೆ. ರೈಲಿನ ಬೋಗಿಗಳಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ನಂದಿಸಿದ್ದಾರೆ. [ಪುಟ್ಟಪರ್ತಿ ರೈಲು ದುರಂತ]

ಬಾಂದ್ರಾ- ಡೆಹ್ರಾಡೂನ್ ರೈಲು ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರೈಲು ದುರಂತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ದುರಂತದಲ್ಲಿ ಸಾವನ್ನಪ್ಪಿದವರ ಗುರುತು ಪತ್ತೆ ಕಾರ್ಯವನ್ನು ಆರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+