ಬ್ಯಾಂಕ್ ಉದ್ಯೋಗಿಗಳಿಗೆ ಸಿಹಿ ಸುದ್ದಿ, ಸಂಬಳ ಏರಿಕೆ
ನವದೆಹಲಿ, ಜುಲೈ 23: ಬ್ಯಾಂಕ್ ಉದ್ಯೋಗಿಗಳ ವಾರ್ಷಿಕ ಸಂಬಳ ಏರಿಕೆ ಕುರಿತಂತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ(AIBEA) ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ವೆಂಕಟಾಚಲಂ ಹೇಳಿದ್ದಾರೆ.
Recommended Video
Sonu Sood : ವಲಸೆ ಕಾರ್ಮಿಕರಿಗಾಗಿ ಹೊಸ ಯೋಜನೆ ರೂಪಿಸಿದ ಬಾಲಿವುಡ್ ಸ್ಟಾರ್ | Oneindia Kannada
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ(AIBEA) ಹಾಗೂ ಭಾರತೀಯ ಬ್ಯಾಂಕ್ ಗಳ ಸಂಘ(IBA) ಒಪ್ಪಂದಕ್ಕೆ ಸಹಿ ಹಾಕಿದ್ದು, ಬ್ಯಾಂಕ್ ನೌಕರರ ವೇತನ ಶೇ 15 ರಷ್ಟು ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಲಾಗಿದೆ.
ಈ ಹೊಸ ವೇತನ ಪರಿಷ್ಕರಣೆ ನವೆಂಬರ್ 1, 2017 ರಿಂದಲೇ ಅನ್ವಯವಾಗುವಂತೆ ಜಾರಿಗೆ ಬರಲಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್, ಖಾಸಗಿ ಬ್ಯಾಂಕ್, ವಿದೇಶಿ ಬ್ಯಾಂಕ್ ಸೇರಿದಂತೆ ಸುಮಾರು 37ಕ್ಕೂ ಅಧಿಕ ಬ್ಯಾಂಕುಗಳು ಸುಮಾರು 10 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

ಹಬ್ಬಗಳ ಸಂದರ್ಭದಲ್ಲಿ ವಾರ್ಷಿಕ 7 ದಿನ ರಜೆ, 5 ದಿನಗಳ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ ಬ್ಯಾಂಕಿನ ಕೊಡುಗೆಯನ್ನು ಶೇಕಡ 10 ರಿಂದ 14 ಕ್ಕೆ ಏರಿಕೆ ಮಾಡಲಾಗಿದೆ.












Click it and Unblock the Notifications