Bank Holidays in August 2024: ಆಗಸ್ಟ್ ತಿಂಗಳಲ್ಲಿ ಇರುವ ಬ್ಯಾಂಕ್ ರಜಾದಿನಗಳ ಪಟ್ಟಿ ಇಲ್ಲಿದೆ
ನವದೆಹಲಿ, ಜುಲೈ. 29: ಭಾರತೀಯ ರಿಸರ್ವ್ ಬ್ಯಾಂಕ್ ಆಗಸ್ಟ್ ತಿಂಗಳ ಬ್ಯಾಂಕ್ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಜೆ ಕ್ಯಾಲೆಂಡರ್ ಪ್ರಕಾರ ಈ ತಿಂಗಳು ಒಟ್ಟು 13 ದಿನಗಳ ಕಾಲ ಬ್ಯಾಂಕ್‌ಗಳು ಮುಚ್ಚಿರುತ್ತವೆ. ಸಾಮಾನ್ಯವಾಗಿ, ಬ್ಯಾಂಕ್ ಶಾಖೆಗಳನ್ನು ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಎಲ್ಲಾ ಭಾನುವಾರ ಮುಚ್ಚಲಾಗುತ್ತದೆ.
ರಾಜ್ಯದ ನಿರ್ದಿಷ್ಟ ಹಬ್ಬಗಳ ಸಂದರ್ಭದಲ್ಲಿ, ಆ ರಾಜ್ಯಗಳಲ್ಲಿ ಮಾತ್ರ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಆದರೆ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ, ದೇಶಾದ್ಯಂತ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಈ ತಿಂಗಳ ರಜಾದಿನಗಳನ್ನು ನೋಡಿಕೊಂಡು ಬ್ಯಾಂಕ್‌ಗಳಿಗೆ ಭೇಟಿ ನೀಡುವುದು ಉತ್ತಮವಾದದ್ದು.

ಭಾರತೀಯ ರಿಸರ್ವ್ ಬ್ಯಾಂಕ್ ದೇಶದ ಎಲ್ಲಾ ಬ್ಯಾಂಕ್‌ಗಳಿಗೆ ರಜಾದಿನಗಳನ್ನು ಮೂರು ವಿಭಾಗಗಳ ಅಡಿಯಲ್ಲಿ ವಿಂಗಡಿಸುತ್ತದೆ. ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್ ರಜಾದಿನಗಳು, ರಿಯಲ್-ಟೈಮ್ ಗ್ರಾಸ್ ಸೆಟಲ್‌ಮೆಂಟ್ ರಜಾದಿನಗಳು ಮತ್ತು ಬ್ಯಾಂಕ್‌ಗಳ ಖಾತೆಗಳನ್ನು ಮುಚ್ಚುವುದು ಎಂದು ವಿಂಗಡಿಸಿದೆ.
ಆಗಸ್ಟ್ 2024 ರ ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ:
ಆಗಸ್ಟ್ 3 (ಶನಿವಾರ): ಕೇರ್ ಪೂಜೆಯ ಸಂದರ್ಭದಲ್ಲಿ ಅಗರ್ತಲಾದಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ.
ಆಗಸ್ಟ್ 4 (ಭಾನುವಾರ): ವಾರಾಂತ್ಯದ ಕಾರಣ ಎಲ್ಲಾ ರಾಜ್ಯಗಳಲ್ಲಿ ಬ್ಯಾಂಕ್‌ಗಳು ಕ್ಲೋಸ್.
ಆಗಸ್ಟ್ 8 (ಸೋಮವಾರ): ಗ್ಯಾಂಗ್ಟಾಕ್‌ನಲ್ಲಿ, ಟೆಂಡಾಂಗ್ ಲ್ಹೋ ರಮ್ ಫಾತ್ ಸಂದರ್ಭದಲ್ಲಿ ಬ್ಯಾಂಕ್‌ಗಳನ್ನು ಮುಚ್ಚಲಾಗುತ್ತದೆ.
ಆಗಸ್ಟ್ 10 (ಶನಿವಾರ): ಎರಡನೇ ಶನಿವಾರದ ಕಾರಣ ದೇಶದಾದ್ಯಂತ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.
ಆಗಸ್ಟ್ 11 (ಭಾನುವಾರ): ವಾರಾಂತ್ಯದ ಕಾರಣ ಎಲ್ಲಾ ರಾಜ್ಯಗಳಲ್ಲಿ ಬ್ಯಾಂಕ್‌ಗಳು ಕ್ಲೋಸ್.
ಆಗಸ್ಟ್ 13 (ಮಂಗಳವಾರ): ದೇಶಪ್ರೇಮಿಗಳ ದಿನದ ಸಂದರ್ಭದಲ್ಲಿ ಇಂಫಾಲ್‌ನಲ್ಲಿ ಬ್ಯಾಂಕುಗಳನ್ನು ಮುಚ್ಚಲಾಗುವುದು.
ಆಗಸ್ಟ್ 15 (ಗುರುವಾರ): ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ದೇಶಾದ್ಯಂತ ಎಲ್ಲಾ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.
ಆಗಸ್ಟ್ 18 (ಭಾನುವಾರ): ವಾರಾಂತ್ಯದ ಕಾರಣ ಎಲ್ಲಾ ರಾಜ್ಯಗಳಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.
ಆಗಸ್ಟ್ 19 (ಸೋಮವಾರ): ರಕ್ಷಾ ಬಂಧನದ ಸಂದರ್ಭದಲ್ಲಿ ತ್ರಿಪುರಾ, ಗುಜರಾತ್, ಒಡಿಶಾ, ಉತ್ತರಾಖಂಡ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.

ಆಗಸ್ಟ್ 20 (ಮಂಗಳವಾರ): ಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಕೊಚ್ಚಿಯಲ್ಲಿ ಬ್ಯಾಂಕ್‌ಗಳು ಕ್ಲೋಸ್.
ಆಗಸ್ಟ್ 24 (ಶನಿವಾರ): ನಾಲ್ಕನೇ ಶನಿವಾರದ ಕಾರಣ ದೇಶದಾದ್ಯಂತ ಬ್ಯಾಂಕುಗಳು ಕ್ಲೋಸ್ ಆಗಲಿವೆ.
ಆಗಸ್ಟ್ 25 (ಭಾನುವಾರ): ವಾರಾಂತ್ಯದ ಕಾರಣ ಎಲ್ಲಾ ರಾಜ್ಯಗಳಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.
ಆಗಸ್ಟ್ 26 (ಸೋಮವಾರ): ಗುಜರಾತ್, ಒಡಿಶಾ, ಚಂಡೀಗಢ, ತಮಿಳುನಾಡು, ಉತ್ತರಾಖಂಡ, ಸಿಕ್ಕಿಂ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಜಮ್ಮು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಮೇಘಾಲಯ, ಹಿಮಾಚಲ ಪ್ರದೇಶ ಮತ್ತು ಶ್ರೀನಗರದಲ್ಲಿ ಕೃಷ್ಣ ಜನ್ಮಾಷ್ಟಮಿಗಾಗಿ ಬ್ಯಾಂಕ್‌ಗಳು ಮುಚ್ಚಲಿವೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications