ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ ತಿಂಗಳಲ್ಲಿ ಎರಡು ದಿನ ಬ್ಯಾಂಕ್ ಮುಷ್ಕರ

|
Google Oneindia Kannada News

ನವದೆಹಲಿ, ಸೆ. 12: ದೇಶದ 10 ಪ್ರಮುಖ ಬ್ಯಾಂಕ್ ಗಳನ್ನು ವಿಲೀನ ಪ್ರಕ್ರಿಯೆಗೆ ಒಳಪಡಿಸಲಾಗುತ್ತಿದ್ದು, ನಾಲ್ಕು ಬ್ಯಾಂಕ್ ಗಳಾಗಲಿವೆ. ಈ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ದೇಶದಲ್ಲಿ 12 ಸಾರ್ವಜನಿಕ ವಲಯದ ಬ್ಯಾಂಕ್ ಗಳು ಮಾತ್ರ ಕಾರ್ಯನಿರ್ವಹಿಸಲಿವೆ. 2017ರಲ್ಲಿ 27 ಸಾರ್ವಜನಿಕ ವಲಯ ಬ್ಯಾಂಕ್ ಗಳಿದ್ದವು. ಆದರೆ, ವಿಲೀನ ವಿರೋಧಿಸಿ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿವೆ.

ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಎರಡು ದಿನ ಬ್ಯಾಂಕ್ ಮುಷ್ಕರಕ್ಕೆ ಮುಂದಾಗಿವೆ. ಸೆಪ್ಟೆಂಬರ್ 25ರ ಮಧ್ಯರಾತ್ರಿಯಿಂದ ಅಥವಾ ಸೆ. 26, 27 ರಂದು ಮುಷ್ಕರ ನಡೆಯಲಿದೆ.

Bank unions threaten 2-day strike in September

ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ(AIBOC), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ(AIIBOA), ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್(INBOC), ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆ(NOBO)ಯ ವತಿಯಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಬ್ಯಾಂಕಿಗೆ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ರಜೆಬ್ಯಾಂಕಿಗೆ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ರಜೆ

ಬ್ಯಾಂಕ್ ವಿಲೀನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಕೇಂದ್ರ ಸರ್ಕಾರವು ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ ಎರಡನೇ ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ದೀಪಲ್ ಕುಮಾರ್ ಶರ್ಮಾ ಘೋಷಿಸಿದ್ದಾರೆ.

ವಿಲೀನದ ಬಳಿಕ ಯಾವ ಬ್ಯಾಂಕಿನ ಮಾರುಕಟ್ಟೆ ಮೌಲ್ಯ ಎಷ್ಟಾಗಲಿದೆ?ವಿಲೀನದ ಬಳಿಕ ಯಾವ ಬ್ಯಾಂಕಿನ ಮಾರುಕಟ್ಟೆ ಮೌಲ್ಯ ಎಷ್ಟಾಗಲಿದೆ?

"ಈ ಹಿಂದೆ ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ವಿಲೀನವಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ವಿಲೀನದ ಬಳಿಕ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಿಲ್ಲ, ಹೀಗಾಗಿ, ಈಗ 10 ಬ್ಯಾಂಕ್ ವಿಲೀನದ ಬಳಿಕ ಹೊರ ಹೊಮ್ಮುವ 4 ಬ್ಯಾಂಕ್ ಗಳ ಉದ್ಯೋಗಿಗಳು ಸೇರಿದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಕಡಿತದ ಭೀತಿ ಬೇಡ" ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Four bank employee unions have given a call for a two-day strike from the midnight of September 25.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X