Narayanan Vaghul Death: ಬ್ಯಾಂಕರ್ ನಾರಾಯಣನ್ ವಘುಲ್ ನಿಧನ
Narayanan Vaghul Death: ಭಾರತದಲ್ಲಿ ದೈತ್ಯ ಐಸಿಐಸಿಐ ಅನ್ನು ಸ್ಥಾಪನೆ ಮಾಡಿದ ಬ್ಯಾಂಕರ್ ನಾರಾಯಣನ್ ವಘುಲ್ (88) ಅವರು ಇಂದು (ಮೇ 18) ಚೆನ್ನೈನಲ್ಲಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದರು. ಬಿದ್ದು ಪ್ರಜ್ಞಾಹೀನರಾಗಿದ್ದ ನಂತರ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ನಾರಾಯಣನ್ ವಘುಲ್ ಅವರು ಪತ್ನಿ ಪದ್ಮಾ ವಘುಲ್, ಮಕ್ಕಳಾದ ಮೋಹನ್ ಮತ್ತು ಸುಧಾ ಹಾಗೂ ಮೊಮ್ಮಕ್ಕಳಾದ ಸಂಜಯ್, ಕಾವ್ಯ, ಅನುವ್ ಮತ್ತು ಸಂತೋಷ್ ಅವರನ್ನು ಅಗಲಿದ್ದಾರೆ. ಇನ್ನು ಇವರಿಗೆ 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಅಲ್ಲದೆ, ಐಸಿಐಸಿಐ ಬ್ಯಾಂಕ್ ನಿರ್ಮಿಸಲು ಮುಖ್ಯ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.
ನಾರಾಯಣನ್ ವಘುಲ್ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಅಂದರೆ 1936ರಲ್ಲಿ ದಕ್ಷಿಣ ಭಾರತದ ಗ್ರಾಮೀಣ ಪ್ರದೇಶವೊಂದರಲ್ಲಿ ಜನಿಸಿದರು. ಅವರ ಕುಟುಂಬವು ಚೆನ್ನೈಗೆ ಸ್ಥಳಾಂತರಗೊಂಡಿತು, ಅಲ್ಲಿ ಅವರು ಪ್ರಸಿದ್ಧ ಲೊಯೊಲಾ ಕಾಲೇಜಿನಲ್ಲಿ ಅಧ್ಯಯನ ಮಾಡಿದ್ದು, ವೃತ್ತಿಯಲ್ಲಿ ವಘುಲ್ ಅವರ ಮೊದಲ ಆಯ್ಕೆ ಬ್ಯಾಂಕಿಂಗ್ ಆಗಿರಲಿಲ್ಲ. ಅವರು ಆರಂಭದಲ್ಲಿ ನಾಗರಿಕ ಸೇವೆಗಳಿಗೆ ಸೇರಲು ಬಯಸಿದ್ದರು.
ಆದರೂ, ಅವರು ಆಗ ಹೊಸದಾಗಿ ಸ್ಥಾಪನೆಯಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಪ್ರವೇಶ ಪಡೆಯಲು ಪರೀಕ್ಷೆಯಲ್ಲಿ ತೇರ್ಗಡೆಯಾದರು. ನಂತರ ಅವರ ತಂದೆ ಎಸ್‌ಬಿಐ ಕೆಲಸಕ್ಕೆ ಸೇರುವಂತೆ ಒತ್ತಾಯಿಸಿದ್ದು, ಅವರು 1955ರಲ್ಲಿ ಬ್ಯಾಂಕ್‌ಗೆ ಕೆಲಸಕ್ಕೆ ಸೇರಿದರು. ನಂತರ ತೀವ್ರ ಒತ್ತಡದಿಂದಾಗಿ ಅವರು ಎಸ್‌ಬಿಐ ತೊರೆದರು ಎನ್ನಲಾಗಿದೆ.
ಎಸ್‌ಬಿಐ ನಂತರ ಅವರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್‌ಗೆ ಸೇರಿ ಅದರ ನಿರ್ದೇಶಕರಾದರು. 39ನೇ ವಯಸ್ಸಿನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯನ್ನು ನೀಡಲಾಯಿತು. ಆಗ ಅವರು ವೃತ್ತಿಯಲ್ಲಿ ಸಾಧನೆ ಮಾಡುತ್ತಾ ಎತ್ತರಕ್ಕೆ ಬೆಳೆದರು.
1981ರಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಆಯ್ಕೆಯಾದರು. 44ನೇ ವಯಸ್ಸಿನಲ್ಲಿ ಅವರು ಸಾರ್ವಜನಿಕ ವಲಯದ ಬ್ಯಾಂಕ್‌ನ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದರು.
1981 ಮತ್ತು 1985ರ ನಡುವೆ ಅವರು ಡೆವಲಪ್‌ಮೆಂಟ್ ಬ್ಯಾಂಕ್ ICICI Ltdನ ಮುಖ್ಯಸ್ಥರಾಗಿದ್ದರು. ಅವರ ನೇತೃತ್ವದಲ್ಲಿ ಐಸಿಐಸಿಐ ಬ್ಯಾಂಕ್ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಾ ಹೋಯಿತು. ನಂತರ ಭಾರತದ ಎರಡನೇ ಅತಿದೊಡ್ಡ ಖಾಸಗಿ ವಲಯದ ವಾಣಿಜ್ಯ ಬ್ಯಾಂಕ್ ಎಂಬ ಹೆಗ್ಗಳಿಕೆಯನ್ನು ಪಡೆಯಿತು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications