ಜಿಲ್ಲಾ ಹಾಗು ತಾಲೂಕು ಪಂಚಾಯಿತಿ ಚುನಾವಣೆ: ಮಾಜಿ ಸಿಎಂ ಏನಂದ್ರು?
ದೆಹಲಿ, ಡಿಸೆಂಬರ್ 04: ಜಿಲ್ಲಾ ಹಾಗು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಕರ್ನಾಟಕ ಸರ್ಕಾರ ಸಿದ್ದತೆ ನಡೆಸಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಿಕ್ಕ ಗೆಲುವು ಹಾಗೂ ಇತ್ತೀಚೆಗೆ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಗಿರುವ ಹಿನ್ನಡೆಯನ್ನು ಮೆಟ್ಟಿ ನಿಂತು, ಎಲ್ಲರೂ ಒಗ್ಗಟ್ಟಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಚರ್ಚೆ ಆಯಿತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ರಾಜ್ಯ ಬಿಜೆಪಿ ಸಂಸದರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಹಾಗೂ ಸಂಘಟನೆಯ ಬಗ್ಗೆ ರಾಜ್ಯದ ಸಂಸದರ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ವಾಡಿಕೆಯಂತೆ ಈ ಬಾರಿ ಬಿಜೆಪಿ ಸಂಸದ ಸಭೆ ಆಗಿದೆ. ರಾಜ್ಯದಲ್ಲಿ ಸದಸ್ಯತ್ವ ಅಭಿಯಾನ ಹಾಗೂ ಪಕ್ಷ ಸಂಘಟನೆಯ ಏನೇನು ಕೆಲಸ ಅಗಿದೆ. ಏನು ಬದಲಾವಣೆ ಮಾಡಬೇಕು ಎನ್ನುವ ಕುರಿತು ಚರ್ಚೆ ಆಗಿದೆ ಎಂದರು.

ಇನ್ನು ಲೋಕಸಭಾ ಅಧಿವೇಶನದಲ್ಲಿ ಕರ್ನಾಟಕದ ವಿಚಾರಗಳನ್ನು ಪರಿಣಾಮಕಾರಿಯಾಗಿ ಯಾವ ರೀತಿ ಪ್ರಸ್ತಾಪಿಸಬೇಕು ಎನ್ನುವ ಕುರಿತು ಚರ್ಚೆಯಾಗಿದೆ ಎಂದು ತಿಳಿಸಿದರು. ಇನ್ನೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಂಡಾಯ ವಿಚಾರ ಈಗಾಗಲೇ ಹೈಕಮಾಂಡ್ ಮುಂದೆ ಇದೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಸ್ಮಶಾನ ಕಾರ್ಮಿಕರು ಹಾಗೂ ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಆದೇಶ ಮಾಡಿರುವುದು ನೆಮ್ಮದಿ ತಂದ ತೀರ್ಮಾನ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಪ್ರಗತಿ ಪರ ತೀರ್ಮಾನಗಳನ್ನು ಮಾಡಿದ್ದೇನೆ. ಕಟ್ಟೆ ನಿರ್ಮಾಣ, ರಸ್ತೆ ನಿರ್ಮಾಣ, ಸೇತುವೆ ನಿರ್ಮಾಣ, ರಾಜ್ಯ ಕಟ್ಟುವಲ್ಲಿ ಹಲವಾರು ಆಡಳಿತಾತ್ಮಕ ನಿರ್ಣಯಗಳನ್ನು ತೆಗೆದುಕೊಂಡಿದ್ದೇನೆ. ಅದರಲ್ಲಿ ನನಗೆ ಎರಡು ಮೂರು ನಿರ್ಣಯಗಳು ಅತ್ಯಂತ ಪ್ರೀಯವಾದ, ಮನಸಿಗೆ ನೆಮ್ಮದಿ ತರುವ ನಿರ್ಣಯಗಳು. ಸ್ಮಶಾನ ಹಾಗೂ ಚಿತಾಗಾರದಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಹಿಂದಿನ ಯಾವುದೇ ಸರ್ಕಾರಗಳು ಗುರುತಿಸಿರಲಿಲ್ಲ, ಅವರು ಇದ್ದಾರೆ ಎನ್ನುವುದನ್ನೂ ಯಾರೂ ಗಮನಿಸಿರಲಿಲ್ಲ.
ಸ್ಮಶಾನವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ ಸ್ಮಶಾನಕ್ಕೆ ಬರುವ ಶವಗಳ ಬಂಧುಗಳ ಜೊತೆ ಅವರ ಬಂಧುಗಳಾಗಿ ಅಂತ್ಯ ಸಂಸ್ಕಾರ ಮಾಡುವ ದೊಡ್ಡ ಕೆಲಸ ಮಾಡುತ್ತಿದ್ದಾರೆ. ಇವರು ಒಂದು ರೀತಿಯಲ್ಲಿ ರಾಜಾ ಸತ್ಯ ಹರಿಶ್ಚಂದ್ರರ ವಂಶಾವಳಿ ಎಂದು ಹೇಳಿದರು. ಬಿಬಿಎಂಪಿ ಸೇರಿದಂತೆ ಇತರ ಮಹಾನಗರಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇವರನ್ನು ಕಾಯಂಗೊಳಿಸಲು ತೀರ್ಮಾನ ಮಾಡಿದ್ದು, ಇಂದು ಫಲಪ್ರದವಾಗಿದ್ದು, ಅವರ ಬ್ಯಾಂಕ್ ಖಾತೆಗೆ ನೇರವಾಗಿ ಸಂಬಳ ದೊತೆಯುವ ವ್ಯವಸ್ಥೆಯಾಗಿದೆ. ಇದರಿಂದ ಸ್ಮಶಾನ ಕಾರ್ಮಿಕರೂ ಸಂತೋಷವಾಗಿದ್ದು, ನನಗೂ ಅವರಿಗಿಂತ ಹೆಚ್ಚು ಸಂತಸವಾಗಿದೆ ಎಂದು ತಿಳಿಸಿದರು.












Click it and Unblock the Notifications