ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BBC Documentary Screening: ದೆಹಲಿಯಲ್ಲಿ ಪ್ರತಿಭಟನೆಯ ಬೆನ್ನಲ್ಲೆ ಸಮಿತಿ ರಚನೆ!

ದೆಹಲಿ ವಿಶ್ವವಿದ್ಯಾನಿಲಯ 'ಶಿಸ್ತು ಜಾರಿಗೊಳಿಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು' ಸಮಿತಿಯನ್ನು ರಚಿಸಿದೆ.

|
Google Oneindia Kannada News

ಕಳೆದ ದಿನ ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರಧಾನಿ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ತಡೆಯಲು ಗುಂಪೊಂದು ಪ್ರಯತ್ನಿಸಿದೆ. ಇದರಿಂದಾಗಿ ಭದ್ರತಾ ಸಿಬ್ಬಂದಿ, ಪೊಲೀಸ್ ಹಾಗೂ ವಿದ್ಯಾರ್ಥಿಗಳ ನಡುವೆ ಜಟಾಪಟಿ ನಡೆದಿದೆ. ಇದರ ಬೆನ್ನಲ್ಲೆ ದೆಹಲಿ ವಿಶ್ವವಿದ್ಯಾನಿಲಯ 'ಶಿಸ್ತು ಜಾರಿಗೊಳಿಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು' ಸಮಿತಿಯನ್ನು ರಚಿಸಿದೆ. ಸಮಿತಿಯು ಶುಕ್ರವಾರದ ಘಟನೆಯನ್ನು ಪರಿಶೀಲಿಸಬಹುದು ಮತ್ತು ಸೋಮವಾರ ಸಂಜೆ 5 ಗಂಟೆಯೊಳಗೆ ಉಪಕುಲಪತಿಗಳಿಗೆ ವರದಿಯನ್ನು ಸಲ್ಲಿಸಬಹುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.

Screening War: ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಇಂದು ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ!Screening War: ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಇಂದು ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ!

ಇದೇ ವೇಳೆ ಗುಜರಾತ್ ಗಲಭೆ ಕುರಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯತ್ನಿಸಿದ್ದು ಹೊರಗಿನವರು ಎಂದು ರಿಜಿಸ್ಟ್ರಾರ್ ವಿಕಾಸ್ ಗುಪ್ತಾ ಆರೋಪಿಸಿದ್ದಾರೆ. ಹೀಗಾಗಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ನೊಂದಿಗೆ ಸಂಯೋಜಿತವಾಗಿರುವ ವಿದ್ಯಾರ್ಥಿಗಳನ್ನು ನಂತರ ದೆಹಲಿ ಪೊಲೀಸರು ಬಿಡುಗಡೆ ಮಾಡಿದರು. ದೆಹಲಿ ವಿಶ್ವವಿದ್ಯಾನಿಲಯದಲ್ಲಿ, ಕಾಂಗ್ರೆಸ್‌ನ ವಿದ್ಯಾರ್ಥಿಗಳ ವಿಭಾಗವಾದ ಎನ್‌ಎಸ್‌ಯುಐ ಸ್ಕ್ರೀನಿಂಗ್ ಅನ್ನು ಆಯೋಜಿಸಿದೆ.

 BBC Documentary Screening on Prime Minister Modi: Forming a Committee to Maintain Peace from Protests in Delhi!

ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಸುಮಾರು 20 ಜನರು ಆರ್ಟ್ಸ್ ಫ್ಯಾಕಲ್ಟಿ ಗೇಟ್‌ನ ಹೊರಗೆ ಬಂದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಅಲ್ಲಿಂದ ಚದುರುವಂತೆ ಸೂಚಿಸಲಾಯಿತು. ಅವರು ಸೂಚನೆಯಂತೆ ನಡೆದುಕೊಳ್ಳದಿದ್ದಾಗ ಅವರನ್ನು ಶಾಂತಿಯುತವಾಗಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಸಾಕ್ಷ್ಯಚಿತ್ರದ ಪ್ರದರ್ಶನದ ಕುರಿತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಇದೇ ರೀತಿಯ ಗದ್ದಲಗಳು ನಡೆದಿವೆ.

ಕಳೆದ ವಾರ ಮೋದಿ ಕುರಿತ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ನಿರ್ಬಂಧಿಸುವಂತೆ ಕೇಂದ್ರವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಟ್ವಿಟರ್ ಮತ್ತು ಯೂಟ್ಯೂಬ್‌ಗೆ ನಿರ್ದೇಶಿಸಿತು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಾಕ್ಷ್ಯಚಿತ್ರವನ್ನು ವಸ್ತುನಿಷ್ಠತೆಯ ಕೊರತೆಯಿರುವ ಮತ್ತು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುವ 'ಪ್ರಚಾರದ ತುಣುಕು' ಎಂದು ಹೇಳಿ ಅದನ್ನು ಪ್ರದರ್ಶಿಸದಂತೆ ಸೂಚಿಸಿದೆ. ಎರಡು ಭಾಗಗಳ ಸಾಕ್ಷ್ಯಚಿತ್ರ 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೆಲವು ಅಂಶಗಳ ಬಗ್ಗೆ ಪ್ರಸ್ತುತಪಡಿಸುತ್ತದೆ.

English summary
A committee has been formed to maintain peace in Delhi following protests over the screening of a BBC documentary on PM Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X