ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ವಿತರಣೆಯಲ್ಲಿ ಅಮೆರಿಕಾವನ್ನು ಹಿಂದಿಕ್ಕಿದ ಭಾರತ

|
Google Oneindia Kannada News

ನವದೆಹಲಿ, ಏಪ್ರಿಲ್ 07: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಜಗತ್ತಿನ ಬಲಿಷ್ಠ ರಾಷ್ಟ್ರಗಳೇ ತತ್ತರಿಸಿ ಹೋಗಿದೆ. ಕೊವಿಡ್-19 ಸೋಂಕು ನಿಯಂತ್ರಿಸುವುದಕ್ಕೆ ಎರಡು ಮಾದರಿ ಲಸಿಕೆ ವಿತರಣೆ ಮಾಡುತ್ತಿರುವ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದೆ.

ಅತ್ಯಂತ ಕಡಿಮೆ ಅವಧಿಯಲ್ಲಿ ಅತಿಹೆಚ್ಚು ಜನರಿಗೆ ಕೊರೊನಾವೈರಸ್ ಲಸಿಕೆ ನೀಡಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೆ ಏರಿದೆ. ದೇಶದಲ್ಲಿ ಪ್ರತಿನಿತ್ಯ ಸರಾಸರಿ 30,93,861 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು: ಕೇಂದ್ರದಿಂದ ಅಧ್ಯಯನಲಸಿಕೆ ಪಡೆದ ಬಳಿಕ ಕೊರೊನಾ ಸೋಂಕು: ಕೇಂದ್ರದಿಂದ ಅಧ್ಯಯನ

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 81 ದಿನ ಕಳೆದಿದೆ. ಈ ಅವಧಿಯಲ್ಲಿ 8,70,77,474 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಭಾರತದಲ್ಲಿ ಮೊದಲು, ಎರಡನೇ ಹಂತದ ಅಭಿಯಾನ

ಭಾರತದಲ್ಲಿ ಮೊದಲು, ಎರಡನೇ ಹಂತದ ಅಭಿಯಾನ

ದೇಶದಲ್ಲಿ ಮೊದಲ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನದಲ್ಲಿ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗಿತ್ತು. ಈ ಹಂತದಲ್ಲಿ 89,60,966 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 53,77,011 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. ಎರಡನೇ ಹಂತದಲ್ಲಿ 97,30,304 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 42,68,788 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

45 ಮತ್ತು 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ

45 ಮತ್ತು 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 2,00,51,197 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 3,96,769 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 3,44,18,802 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 8,61,520 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ವಿತರಣೆ

ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ

ಕೊರೊನಾವೈರಸ್ ಸೋಂಕಿತ ಪ್ರಕರಣ ಸಂಖ್ಯೆ ಮತ್ತೊಂದು ದಾಖಲೆ ಬರೆದಿದೆ. ದೇಶದಲ್ಲಿ ಒಂದೇ ದಿನ 1,15,736 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 59,856 ಸೋಂಕಿತರು ಗುಣಮುಖರಾಗಿದ್ದು, 630 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. ಈವರೆಗೂ 1,17,92,135 ಸೋಂಕಿತರು ಗುಣಮುಖರಾಗಿದ್ದು, ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 8,43,473 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
India Beats United States Of America In Fastest Covid-19 Vaccination In World.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X