ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೇಡಪ್ಪಾ ಬೇಡ ಲಸಿಕೆ: ಕೊವ್ಯಾಕ್ಸಿನ್ ಬಗ್ಗೆ ಜನರಲ್ಲಿ ಭಯವೇಕೆ?

|
Google Oneindia Kannada News

ನವದೆಹಲಿ, ಜನವರಿ.18: ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ಕೇಂದ್ರ ಸರ್ಕಾರ ಲಸಿಕೆ ಅಭಿಯಾನ ಶುರು ಮಾಡಿದೆ. ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎಂಬ ಎರಡು ದೇಶೀಯ ಲಸಿಕೆಗಳನ್ನು ನೀಡಲು ಮುಂದಾಗಿದ್ದು, ಈ ಪೈಕಿ ಕೊವ್ಯಾಕ್ಸಿನ್ ಲಸಿಕೆ ಪಡೆಯುವುದಕ್ಕೆ ಜನರು ಹಿಂಜರಿಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸಿರುವ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವ ಪ್ರತಿಯೊಬ್ಬರಿಂದಲೂ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳಲಾಗುತ್ತಿದೆ. ಕೊವ್ಯಾಕ್ಸಿನ್ ಲಸಿಕೆ ಪಡೆದ ನಂತರದಲ್ಲಿ ಅಂಥವರ ಆರೋಗ್ಯದಲ್ಲಿ ವ್ಯತ್ಯಾಸವಾದರೆ ಅವರಿಗೆ ಪರಿಹಾರ ಮತ್ತು ಚಿಕಿತ್ಸೆ ವೆಚ್ಚವನ್ನು ಸಂಪೂರ್ಣವಾಗಿ ಸಂಸ್ಥೆಯು ಭರಿಸಲಿದೆ.

ಕೊರೊನಾ ಲಸಿಕೆ ಪಡೆದವರಲ್ಲಿ ಕಾಣಿಸಿಕೊಳ್ಳುತ್ತಾ ಅಡ್ಡಪರಿಣಾಮ?ಕೊರೊನಾ ಲಸಿಕೆ ಪಡೆದವರಲ್ಲಿ ಕಾಣಿಸಿಕೊಳ್ಳುತ್ತಾ ಅಡ್ಡಪರಿಣಾಮ?

ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವ ಮುನ್ನ ನೀಡುವ ಒಪ್ಪಿಗೆ ಪತ್ರಕ್ಕೆ ಸಹಿ ಹಾಕುವುದಕ್ಕೆ ವೈದ್ಯಕೀಯ ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ತಮಿಳುನಾಡು, ಬಿಹಾರ ಮತ್ತು ತೆಲಂಗಾಣದಲ್ಲಿ ಲಸಿಕೆ ಪಡೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ದೇಶದಲ್ಲಿ ಶೇ.50ರಷ್ಟು ಪ್ರಮಾಣದಲ್ಲಿ ಕೊವ್ಯಾಕ್ಸಿನ್ ಲಸಿಕೆ ಪಡೆಯಲು ಜನರು ಹಿಂಜರಿಯುತ್ತಿದ್ದಾರೆ ಎಂದು ಪ್ರಸ್ತಾಪಿಸಲಾಗಿದೆ.

ತಮಿಳುನಾಡಲ್ಲಿ ಕೊವ್ಯಾಕ್ಸಿನ್ ಲಸಿಕೆ ಪಡೆದವರ ಸಂಖ್ಯೆ

ತಮಿಳುನಾಡಲ್ಲಿ ಕೊವ್ಯಾಕ್ಸಿನ್ ಲಸಿಕೆ ಪಡೆದವರ ಸಂಖ್ಯೆ

ದೇಶಾದ್ಯಂತ ಕೊರೊನಾವೈರಸ್ ಸೋಂಕಿನ ಅಭಿಯಾನ ಆರಂಭವಾದ ಮೊದಲ ದಿನ ತಮಿಳುನಾಡಿನಲ್ಲಿ 600 ಜನರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆದರೆ ಜನವರಿ.16ರ ಮೊದಲ ದಿನ ರಾಜ್ಯದಲ್ಲಿ ಕೇವಲ 99 ಜನರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿತ್ತು. ಎರಡನೇ ದಿನ ಮಧ್ಯಾಹ್ನ 2 ಗಂಟೆವರೆಗೂ ಕೇವಲ 90 ಜನರಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗಿದೆ ಎಂದು ಮಾಹಿತಿ ಸಿಕ್ಕಿದೆ.

ರಾಜಸ್ಥಾನದಲ್ಲಿ ಕೊವ್ಯಾಕ್ಸಿಲ್ ಲಸಿಕೆ ಪಡೆದವರ ಸಂಖ್ಯೆ

ರಾಜಸ್ಥಾನದಲ್ಲಿ ಕೊವ್ಯಾಕ್ಸಿಲ್ ಲಸಿಕೆ ಪಡೆದವರ ಸಂಖ್ಯೆ

ಕೊವ್ಯಾಕ್ಸಿಲ್ ಲಸಿಕೆ ಪಡೆದವರ ಸಂಖ್ಯೆಯು ತಮಿಳುನಾಡಿಗೆ ಹೋಲಿಸಿದ್ದಲ್ಲಿ ರಾಜಸ್ಥಾನದಲ್ಲಿ ಉತ್ತಮವಾಗಿದೆ. ಮೊದಲ ದಿನ ರಾಜ್ಯದಲ್ಲಿ 600 ಕೊರೊನಾ ಯೋಧರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಈ ಪೈಕಿ 314 ಜನರಿಗೆ ಲಸಿಕೆ ನೀಡಲಾಗಿತ್ತು. ರಾಜ್ಯದಲ್ಲಿ ಲಸಿಕೆ ಪಡೆದವರ ಆರೋಗ್ಯದಲ್ಲಿ ಯಾವುದೇ ಅಡ್ಡಪರಿಣಾಮ ಬೀರಿರಲಿಲ್ಲ. ಆದರೆ ವೈದ್ಯಕೀಯ ತಜ್ಞರು ಮತ್ತು ರಾಜಕಾರಣಿಗಳು ಕೊವ್ಯಾಕ್ಸಿನ್ ಲಸಿಕೆಯ ಸುರಕ್ಷತೆಯನ್ನು ಪ್ರಶ್ನಿಸಿದರು. ಇದರಿಂದಾಗಿ ಜನರು ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಹಿಂಜರಿಯುತ್ತಿದ್ದಾರೆ ಎಂದು ರಾಜಸ್ಥಾನದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನರೇಶ್ ಠಾಕ್ರಲ್ ತಿಳಿಸಿದ್ದಾರೆ.

ವೈದ್ಯಕೀಯ ಪರೀಕ್ಷೆ ಹಂತದಲ್ಲಿರುವ ಕೊವ್ಯಾಕ್ಸಿನ್ ಲಸಿಕೆ

ವೈದ್ಯಕೀಯ ಪರೀಕ್ಷೆ ಹಂತದಲ್ಲಿರುವ ಕೊವ್ಯಾಕ್ಸಿನ್ ಲಸಿಕೆ

ಭಾರತದಲ್ಲಿ ಅನುಮೋದನೆ ಪಡೆದಿರುವ ಕೊರೊನಾ ಲಸಿಕೆಗಳ ಪಟ್ಟಿಗೆ ಕೊವ್ಯಾಕ್ಸಿನ್ ಲಸಿಕೆ ಕೂಡಾ ಸೇರ್ಪಡೆಯಾಗಿದೆ. ಪ್ರಸ್ತುತ ಮೂರನೇ ಹಂತದಲ್ಲಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಬಳಸಲು ಅನುಮೋದನೆ ನೀಡಲಾಗಿದೆ. ಭಾರತ್ ಬಯೋಟೆಕ್ ಸಂಸ್ಥೆಯು 55 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆ ನೀಡುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದು, 16.5 ಲಕ್ಷ ಕೊವ್ಯಾಕ್ಸಿನ್ ಲಸಿಕೆಯನ್ನು ಉಚಿತವಾಗಿ ನೀಡಲಾಗಿದೆ. ಆದರೆ, ಪ್ರಯೋಗ ಹಂತದಲ್ಲಿರುವ ಕೊವ್ಯಾಕ್ಸಿನ್ ಲಸಿಕೆ ಸ್ವೀಕರಿಸಿದ ನಂತರ ಆರೋಗ್ಯದಲ್ಲಿ ಏರುಪೇರಾದರೆ ಯಾರು ಹೊಣೆ ಎಂಬ ಗೊಂದಲಕ್ಕೆ ಭಾರತ್ ಬಯೋಟೆಕ್ ಸಂಸ್ಥೆ ಉತ್ತರ ಕೊಟ್ಟಿದೆ.

ಕೊವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಆರೋಗ್ಯ ಸುರಕ್ಷತೆ

ಕೊವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಆರೋಗ್ಯ ಸುರಕ್ಷತೆ

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಆರೋಗ್ಯ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಒಪ್ಪಿಗೆ ಪತ್ರ ಸಿದ್ಧಪಡಿಸಲಾಗಿದೆ. ಲಸಿಕೆ ಪಡೆದವರ ಆರೋಗ್ಯದಲ್ಲಿ ವ್ಯತ್ಯಾಸವಾದಲ್ಲಿ ಅವರಿಗೆ ಸರ್ಕಾರ ನಿಗದಿಪಡಿಸಿರುವ ಅಧಿಕೃತ ಕೇಂದ್ರ ಮತ್ತು ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುತ್ತದೆ. ಒಂದು ವೇಳೆ ಕೊವ್ಯಾಕ್ಸಿನ್ ಲಸಿಕೆ ಪಡೆದವರಲ್ಲಿ ಗಂಭೀರ ಪ್ರಮಾಣದ ಅಡ್ಡ ಪರಿಣಾಮಗಳು ಕಂಡು ಬಂದಲ್ಲಿ ಅವರಿಗೆ ಭಾರತ್ ಬಯೋಟೆಡ್ ಸಂಸ್ಥೆಯಿಂದ ಪರಿಹಾರ ನೀಡಲಾಗುವುದು ಎಂದು ಒಪ್ಪಿಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

English summary
Beneficiaries Hesitant To Sign Bharat Biotech’s Covaxin Consent Form: Here Read The Reason Why Its Happened.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X