West Bengal Assembly Election 2021 assam assembly election 2021 kerala assembly election 2021 tamil nadu assembly election 2021 tmc bjp congress india new delhi ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021 ಅಸ್ಸಾಂ ವಿಧಾನಸಭೆ ಚುನಾವಣೆ 2021 ಕೇರಳ ವಿಧಾನಸಭೆ ಚುನಾವಣೆ 2021 ತಮಿಳುನಾಡು ವಿಧಾನಸಭೆ ಚುನಾವಣೆ 2021 ಬಿಜೆಪಿ ಕಾಂಗ್ರೆಸ್ ಟಿಎಂಸಿ ಭಾರತ ನವದೆಹಲಿ politics
ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ, ಪುದುಚೇರಿ ಚುನಾವಣೆಗೆ ಮುಹೂರ್ತ
ನವದೆಹಲಿ, ಫೆಬ್ರವರಿ.26: ಭಾರತದ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರ ಚುನಾವಣಾ ಆಯೋಗವು ಸುದ್ದಿಗೋಷ್ಠಿ ನಡೆಸಲಿದ್ದು ದಿನಾಂಕ ಘೋಷಿಸುವ ಸಾಧ್ಯತೆಯಿದೆ.
ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸುವ ನಿರೀಕ್ಷೆಯಿದೆ. ನವದೆಹಲಿಯಲ್ಲಿ ಸಂಜೆ 4.30ಕ್ಕೆ ಕೇಂದ್ರ ಚುನಾವಣಾ ಆಯೋಗವು ಸುದ್ದಿಗೋಷ್ಠಿ ನಡೆಸಲಿದೆ.
ಟ್ರಂಪ್ಗಿಂತ ಅತಿ ಕೆಟ್ಟ ಗತಿ ಮೋದಿಗೆ ಕಾದಿದೆ; ಮಮತಾ ಬ್ಯಾನರ್ಜಿ
ಏಪ್ರಿಲ್ ತಿಂಗಳಿನಲ್ಲಿ ನಾಲ್ಕು ರಾಜ್ಯ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ತಮಿಳುನಾಡು ಮತ್ತು ಕೇರಳ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಸ್ಸಾಂನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪಶ್ಚಿಮ ಬಂಗಾಳದಲ್ಲಿ ಆರು ಹಂತಗಳಲ್ಲಿ ಚುನಾವಣೆ:
ದೇಶದಲ್ಲೇ ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ವಿಧಾನಸಭೆಗೆ 6-7 ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು ತಿಳಿದು ಬಂದಿದೆ. ಕಳೆದ ಬಾರಿ 2016ರಲ್ಲಿ ನಡೆದ 294 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ 44, ಎಡಪಕ್ಷ 33, ಟಿಎಂಸಿ 211 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರೆ, ಬಿಜೆಪಿ 3 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಆದರೆ ಇತ್ತೀಚಿಗೆ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ 18 ಅಭ್ಯರ್ಥಿಗಳು ಜಯ ಸಾಧಿಸಿದ್ದರು. ಈ ಹಿನ್ನೆಲೆ ರಣರೋಚಕ ಕದನಕ್ಕೆ ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ಮುಹೂರ್ತ ನಿಗದಿಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.