ಬಂಗಾಳ ರಾಮನವಮಿ ಹಿಂಸಾಚಾರ: ಕೇಂದ್ರೀಯ ಏಜೆನ್ಸಿ ಎನ್‌ಐಎಯಿಂದ ತನಿಖೆಗೆ ಹೈಕೋರ್ಟ್ ಆದೇಶ
ಕೋಲ್ಕತ್ತಾ ಏಪ್ರಿಲ್ 27: ಪಶ್ಚಿಮ ಬಂಗಾಳದಲ್ಲಿ ನಡೆದ ರಾಮನವಮಿ ಹಿಂಸಾಚಾರದ ಬಗ್ಗೆ ಕೇಂದ್ರೀಯ ಸಂಸ್ಥೆ ಎನ್‌ಐಎ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ರಾಮನವಮಿ ಮೆರವಣಿಗೆ ನಡೆಸುವಾಗ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಅಂಗಡಿಗಳನ್ನು ಧ್ವಂಸ ಮಾಡಲಾಗಿತ್ತು. ರಾಮನವಮಿ ಮೆರವಣಿಗೆ ಕಾಜಿಪಾರಾ ಪ್ರದೇಶವನ್ನು ದಾಟುತ್ತಿದ್ದಾಗ ಈ ಹಿಂಸಾಚಾರ ಸಂಭವಿಸಿತ್ತು. ಹಿಂಸಾಚಾರದ ಸಮಯದಲ್ಲಿ ಕೆಲವು ಪೊಲೀಸ್ ವಾಹನಗಳು ಸೇರಿದಂತೆ ಹಲವಾರು ಕಾರುಗಳು ಹಾನಿಗೊಳಗಾಗಿವೆ. ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದರು.

ಈ ಸಂಬಂಧ ಹಲವರನ್ನು ಬಂಧಿಸಲಾಗಿದೆ. ಹಿಂಸಾಚಾರದ ಸಂದರ್ಭದಲ್ಲಿ ಹಲವಾರು ಅಂಗಡಿಗಳು ಮತ್ತು ಆಟೋ-ರಿಕ್ಷಾಗಳನ್ನು ಸುಟ್ಟಿದ್ದು, ಕೆಲವು ಪೊಲೀಸ್ ವಾಹನಗಳು ಸೇರಿದಂತೆ ಹಲವಾರು ಕಾರುಗಳಿಗೆ ಬೆಂಕಿ ಹಚ್ಚಲಾಯಿತು. ಬೆಂಕಿಯನ್ನು ನಂದಿಸಲು ನಾಲ್ಕು ಅಗ್ನಿಶಾಮಕದಳ ಕರೆಸಬೇಕಾಗಿತ್ತು. ಇನ್ನೂ ಎರಡು ಗುಂಪು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದರು.

ಹೌರಾದಲ್ಲಿ ನಡೆದ ರಾಮನವಮಿ ಮೆರವಣಿಗೆಯಲ್ಲಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ ಎಂದು ಹೇಳಿದ್ದರು.












Click it and Unblock the Notifications