Bengaluru 2nd Airport: ಹೊಸೂರು ವಿಮಾನ ನಿಲ್ದಾಣ ನಿರ್ಮಾಣ: ಕೈಗಾರಿಕೆಗಳ ಹೊಸ ಡಿಮ್ಯಾಂಡ್!

Bengaluru 2nd Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆಮೆ ವೇಗದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದೆ. ಆದರೆ ಇದೇ ಸಂದರ್ಭದಲ್ಲಿ ತಮಿಳುನಾಡು ಸರ್ಕಾರವು ಮೊಲದಂತೆ ಓಡುತ್ತಿದೆ. ಹೌದು ತಮಿಳುನಾಡು ಸರ್ಕಾರವು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಹಾಗೂ ರಾಜ್ಯದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಪ್ಲ್ಯಾನ್‌ಗಿಂತ ವೇಗವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದೆ.

ಈ ರೀತಿ ಇರುವಾಗಲೇ ಇನ್ನಷ್ಟು ವೇಗವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಹಾಗೂ ಹೊಸೂರಿನಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಅಲ್ಲಿನ ಕೈಗಾರಿಕಾ ಸಂಸ್ಥೆಗಳು ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿವೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸುವುದಕ್ಕೆ ಉದ್ದೇಶಿಸಲಾಗಿದೆ. ಆದರೆ ಕರ್ನಾಟಕ ಸರ್ಕಾರವು ತಮಿಳುನಾಡು ಸರ್ಕಾರಕ್ಕೆ ಹೋಲಿಕೆ ಮಾಡಿದರೆ ಈ ವಿಚಾರದಲ್ಲಿ ನಿಧಾನವಾಗಿ ಸಾಗುತ್ತಿದೆ.

Bengaluru 2 Airport Construction of Hosur Airport New Demand from Industries

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಪೈಪೋಟಿಯಾಗಿ ತಮಿಳುನಾಡು ಸರ್ಕಾರವು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಮುಂದಾಗಿದೆ. ಬೆಂಗಳೂರಿನಿಂದ 40 ಕಿ.ಮೀ ದೂರದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಮಾಡಿದೆ. ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ವೇಗವನ್ನು ಹೆಚ್ಚಳ ಮಾಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

ಕರ್ನಾಟಕ ಸರ್ಕಾರವು ಐದು ಜಾಗಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಪ್ರಾಥಮಿಕ ಹಂತದ ಚರ್ಚೆಯನ್ನು ಮಾತ್ರ ಮಾಡಿದೆ. ಇದೀಗ ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 2 ಸ್ಥಳಗಳನ್ನು ಶಾರ್ಟ್‌ ಲಿಸ್ಟ್‌ ಮಾಡಲಾಗಿದೆ. ಇಲ್ಲಿ ವಿವರವಾದ ಅಧ್ಯಯನ ನಡೆಸುವುದಕ್ಕೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)ಕ್ಕೆ ಪತ್ರ ಸಹ ಬರೆಯಲಾಗಿದೆ.

ಈ ವೇಗ ಸಾಲುತ್ತಿಲ್ಲ ಎಂದು ಹೊಸೂರು ಕೈಗಾರಿಕಾ ಸಂಘ ಮತ್ತು ಹೊಸೂರು ಸಣ್ಣ ಮತ್ತು ಸಣ್ಣ ಕೈಗಾರಿಕೆಗಳ ಸಂಘ ಅಲ್ಲಿನ ಸರ್ಕಾರವನ್ನು ಒತ್ತಾಯಿಸಿವೆ. ಇಲ್ಲಿನ ಖಾಸಗಿ ಒಡೆತನದ ತನೇಜಾ ಏರೋ ಸ್ಪೇಸ್ ಹಾಗೂ ವಿಮಾನಯಾನ ವಿಮಾನ ನಿಲ್ದಾಣದ ಸಮೀಪದ ಹಳ್ಳಿಗಳಲ್ಲಿ ಜಾಗ ಗುರುತಿಸಲಾಗಿದೆ.

ಹೊಸ ವಿಮಾನ ನಿಲ್ದಾಣಕ್ಕೆ ಸೂಕ್ತ ಜಾಗವನ್ನು ಆಯ್ಕೆ ಮಾಡಲಾಗಿದೆ. ಆದರೆ ತಮಿಳುನಾಡು ಸರ್ಕಾರ ಸಹ ಈ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ. ವೇಗ ಹೆಚ್ಚಾಗಬೇಕು ಎಂದು ಅಲ್ಲಿನ ಕೈಗಾರಿಕ ಸಂಸ್ಥೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ ಎಂದು DH ವರದಿ ಮಾಡಿದೆ.

ಭೂಸ್ವಾದೀನ ವಿಳಂಬ ಬೇಡ: ಇನ್ನು ವಿಮಾನ ನಿಲ್ದಾಣಕ್ಕೆ ಜಾಗವನ್ನು ಅಂತಿಮ ಮಾಡಿದ ಮೇಲೆ ಭೂಸ್ವಾಧೀನ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬೇಡಿ ಅಂತ ಮನವಿ ಮಾಡಿವೆ. ಇದೀಗ ಹೊಸೂರಿನ ಕೈಗಾರಿಕೆಗಳು ಸರಕುಗಳ ಸಾಗಾಣಿಕೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅವಲಂಬಿಸಿವೆ.

ಆದರೆ ಹೊಸೂರಿನಿಂದ ಈ ವಿಮಾನ ನಿಲ್ದಾಣಕ್ಕೆ 80ರಿಂದ 85 ಕಿ.ಮೀ ದೂರವಿದ್ದು. ಸರಕು ಹಾಗೂ ಸಾಗಾಣಿಕೆಗೆ ಹೆಚ್ಚು ದುಡ್ಡು ಖರ್ಚಾಗುತ್ತಿದೆ. ಅಲ್ಲದೆ ಸಮಯ ಸಹ ವ್ಯರ್ಥವಾಗುತ್ತಿದೆ. ಅದೇ ಹೊಸೂರಿನಲ್ಲೇ ವಿಮಾನ ನಿಲ್ದಾಣ ನಿರ್ಮಾಣವಾದರೆ ಭಾರೀ ಲಾಭವಾಗಲಿದೆ ಎನ್ನುವ ಲೆಕ್ಕಾಚಾರ ಅಲ್ಲಿನ ಕೈಗಾರಿಕ ಸಂಸ್ಥೆಗಳದ್ದಾಗಿದೆ.

ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ಜೋರಾಗಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಾಲ್ಕರಿಂದ ಐದು ಜಾಗಗಳನ್ನು ಗುರುತಿಸಲಾಗಿದೆ. ಆದರೆ ಯಾವುದೇ ಜಾಗವನ್ನು ಇಲ್ಲಿಯ ವರೆಗೆ ಅಂತಿಮ ಮಾಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+