Bengaluru 2nd Airport: ಕೇಂದ್ರದಿಂದ ತಮಿಳುನಾಡಿಗೆ ಶಾಕ್: ಹೊಸೂರಲ್ಲಿ ವಿಮಾನ ನಿಲ್ದಾಣ ಕಷ್ಟ!
Bengaluru 2nd Airport: ಬೆಂಗಳೂರಿಗೆ ಟಕ್ಕರ್ ಕೊಡುವುದಕ್ಕೆ ಬಂದ ತಮಿಳುನಾಡಿಗೆ ಶಾಕ್ ಎದುರಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಳವಾಗುತ್ತಿದ್ದು ಇದಕ್ಕೆ ಪರ್ಯಾಯವಾಗಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎನ್ನುವ ವಿಷಯ ಚರ್ಚೆಯಲ್ಲಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಟಕ್ಕರ್ ಕೊಡುವುದಕ್ಕೆ ತಮಿಳುನಾಡು ಸರ್ಕಾರದ ಮುಂದಾಗಿತ್ತು.
ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಮುಂದಾಗಿತ್ತು. ಈ ಸಂಬಂಧ ಎರಡು ಸ್ಥಳಗಳನ್ನು ಶಾರ್ಟ್ ಲಿಸ್ಟ್ ಮಾಡಿ ಕೇಂದ್ರ ಸರ್ಕಾರಕ್ಕೂ ಕಳುಹಿಸಿತ್ತು. ಆದರೆ, ಇದೀಗ ತಮಿಳುನಾಡಿನ ಲೆಕ್ಕಾಚಾರಗಳು ತಲೆಕೆಳಗಾಗಿದ್ದು, ತಮಿಳುನಾಡಿಗೆ ಕೇಂದ್ರ ಸರ್ಕಾರ ಶಾಕ್ ಕೊಟ್ಟಿದೆ. ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು ಎನ್ನುವ ಕನಸನ್ನು ತಮಿಳುನಾಡು ಸರ್ಕಾರ ಕಂಡಿತ್ತು. ಆದರೆ ಅದು ಈಡೇರುವ ಲಕ್ಷಣಗಳು ಕಾಣಿಸುತ್ತಿಲ್ಲ. ಅದಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಆದರೆ ಕರ್ನಾಟಕಕ್ಕೆ ಟಕ್ಕರ್ ಕೊಡಲು ನೆರೆಯ ತಮಿಳುನಾಡು ಸರ್ಕಾರ ಮುಂದಾಗಿದೆ. ಇದೊಂದು ವ್ಯವಹಾರಿಕ ಪೈಪೋಟಿಯಾಗಿತ್ತು. ತಮಿಳುನಾಡಿನ ಹೊಸೂರಿಗೆ ನಮ್ಮ ಬೆಂಗಳೂರು ಮೆಟ್ರೋ ಸೇವೆ ವಿಸ್ತರಣೆ ಮಾಡಬೇಕು ಎಂದು ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.
ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿ ಹೊಸೂರು ಇದೆ. ಇದು ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿಗೆ ಮೆಟ್ರೋ ಸೇವೆ ವಿಸ್ತರಿಸಿದರೆ ಅನುಕೂಲವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಈ ಪ್ರಸ್ತಾವನೆಗೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾದ ಮೇಲೆ ಈ ಪ್ರಸ್ತಾವನೆಯ ಬಗ್ಗೆ ಹೆಚ್ಚು ಚರ್ಚೆಯಾಗಿರಲಿಲ್ಲ. ಇದಾದ ಕೆಲವೇ ತಿಂಗಳಲ್ಲಿ ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಮುಂದಾಗಿತ್ತು. ಆದರೆ ಇದೀಗ ತಮಿಳುನಾಡಿಗೆ ಕೇಂದ್ರದಿಂದ ಶಾಕ್ ಎದುರಾಗಿದೆ. ಅದೇನು ಎನ್ನುವುದನ್ನು ನೋಡೋಣ..
ಸದ್ಯದ ಪರಿಸ್ಥಿತಿಯಲ್ಲಿ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಸವಾಲಿನ ಕೆಲಸ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರು ಅಭಿಪ್ರಾಯಟ್ಟಿದ್ದಾರೆ. ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ 25 ವರ್ಷಗಳ ನಿಯಮ ಅಡ್ಡಿಯಾಗುತ್ತಿದೆ. ಇದರಿಂದ ವಿನಾಯಿತಿ ಬೇಕು ಎಂದು ತಮಿಳುನಾಡಿನ ಸಂಸದರು ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಈಗಾಗಲೇ ಇರುವ ಹಿನ್ನೆಲೆಯಲ್ಲಿ ಈ ವಿಮಾನ ನಿಲ್ದಾಣದಿಂದ 150 ಕಿ.ಮೀ ವ್ಯಾಪ್ತಿಯಲ್ಲಿ 25 ವರ್ಷಗಳ ವರೆಗೆ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣವಾಗಬಾರದು ಎನ್ನುವ ಒಪ್ಪಂದ ಇದೆ.
ಇದು ತಮಿಳುನಾಡಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಾದರೆ ತಮಿಳುನಾಡು ಸರ್ಕಾರ, ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿ. ಹಾಗೂ ಕೇಂದ್ರ ಸರ್ಕಾರ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಸಚಿವ ರಾಮಮೋಹನ್ ನಾಯ್ಡು ಅವರು ಹೇಳಿದ್ದಾರೆ. ಇದರಿಂದ ತಮಿಳುನಾಡು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವುದು ಸವಾಲಾಗಿ ಪರಿಣಮಿಸಿದೆ.
ತಮಿಳುನಾಡಿನ ಮುಂದಿರುವ ಆಯ್ಕೆ: ತಮಿಳುನಾಡಿನ ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸುದೀರ್ಘ ಚರ್ಚೆ ನಡೆಯಬೇಕಿದೆ. ಇಲ್ಲದಿದ್ದರೆ ಹೊಸೂರು ಬಿಟ್ಟು ಬೇರೆ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಾಗುತ್ತದೆ.
ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಸುಲಭವಾಗಿ ವಿಮಾನ ನಿಲ್ದಾಣ ನಿರ್ಮಾಣ ಮಾಡಿಬಿಡಬಹುದು ಎನ್ನುವ ಲೆಕ್ಕಾಚಾರದಲ್ಲಿ ಇತ್ತು. ಆದರೆ, ತಮಿಳುನಾಡಿನ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿದೆ. ಕೇಂದ್ರ ಸರ್ಕಾರವು ಈ ವಿಚಾರದಲ್ಲಿ ಕರ್ನಾಟಕಕ್ಕೆ ಬೆಂಬಲ ನೀಡಿದೆ. ಇದಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ನ ಮುಖಂಡರಾದ ಎಚ್.ಡಿ ದೇವೇಗೌಡ ಅವರೂ ಸಹ ಕಾರಣ. ರಾಜ್ಯಸಭೆಯಲ್ಲಿ ಈ ವಿಷಯದ ಬಗ್ಗೆ ಎಚ್.ಡಿ ದೇವೇಗೌಡ ಅವರು ಮಾತನಾಡಿದ್ದರು.












Click it and Unblock the Notifications