Bengaluru 2nd Airport: ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಕೊಟ್ಟ ತಮಿಳುನಾಡು!
ಬೆಂಗಳೂರು ಹಾಗೂ ಕರ್ನಾಟಕಕ್ಕೆ ಟಕ್ಕರ್ ಕೊಡುವ ರೀತಿಯಲ್ಲಿ ತಮಿಳುನಾಡು ಸರ್ಕಾರವು ತಮಿಳುನಾಡಿನ ಹೊಸೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಮುಂದಿನ ದಿನಗಳಲ್ಲಿ ಒತ್ತಡ ಜಾಸ್ತಿ ಆಗುತ್ತದೆ ಎನ್ನುವ ವಿಷಯ ತಿಳಿಯುತ್ತಿದ್ದಂತೆಯೇ ತಮಿಳುನಾಡು ಅಲರ್ಟ್ ಆಗಿದ್ದು. ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದಲ್ಲಿ ಇರುವ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇದೀಗ ತಮಿಳುನಾಡು ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು. ಇಲ್ಲಿ ಎರಡು ರನ್‌ವೇಗಳು ನಿರ್ಮಾಣವಾಗಲಿವೆ. ಅಂದಾಜು 2,000 ಎಕರೆಗಳಿಗೂ ಹೆಚ್ಚು ವಿಸ್ತೀರ್ಣವನ್ನು ಹೊಸ ವಿಮಾನ ನಿಲ್ದಾಣ ಇರಲಿದ್ದು. ವಿಮಾನ ನಿಲ್ದಾಣದ ನಿರ್ಮಾಣ ಪ್ರಕ್ರಿಯಿಯೆಯು ಇದೀಗ ಎರಡನೇ ಹಂತದ ಸೈಟ್ ಅಧ್ಯಯನಕ್ಕೆ ತಲುಪಿದೆ ಎಂದು ಹೇಳಲಾಗಿದೆ.
ತಮಿಳುನಾಡು ಸರ್ಕಾರವು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಕರ್ನಾಟಕವು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಇನ್ನೂ ಆಮೆ ವೇಗದಲ್ಲಿಯೇ ಇದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ಬಗ್ಗೆ ಇನ್ನೂ ಪ್ರಾಥಮಿಕ ಚರ್ಚೆಗಳು ನಡೆಯುತ್ತಿರುವಾಗಲೇ ತಮಿಳುನಾಡು ಸರ್ಕಾರವು ವಿಮಾನ ನಿಲ್ದಾಣದ ಚರ್ಚೆಗಳನ್ನು ದಾಟಿಕೊಂಡು ಅನುಷ್ಠಾನದ ಕಡೆ ದಾಪುಗಾಲಿರಿಸಿದೆ. ತಮಿಳುನಾಡು ಸರ್ಕಾರವು ಹಲವು ಸ್ಥಳಗಳನ್ನು ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಫೈನಲ್ ಲಿಸ್ಟ್ ಮಾಡಿದೆ. ಅದರಲ್ಲಿ ಒಂದು ತನೇಜಾ ಏರೋಸ್ಪೇಸ್ ಹಾಗೂ ಮತ್ತೊಂದು ಏವಿಯೇಷನ್ ಲಿ.ನ ಪ್ರದೇಶವಾದಿಂದ 1.5 ಕಿ. ಮೀ ದೂರದಲ್ಲಿದೆ. ಇನ್ನೊಂದು ಹೊಸೂರಿನ ಪೂರ್ವ ಭಾಗ ಹಾಗೂ ಶೂಲಗಿರಿಯ ಉತ್ತರ ಭಾಗದ ಉಲಗಂ ಎನ್ನುವ ಪ್ರದೇಶಗಳನ್ನು ಗುರುತಿಸಿರುವುದಾಗಿ ಹೇಳಲಾಗಿದೆ.

ಮುನ್ನುಗುತ್ತಿದೆ ತಮಿಳುನಾಡು: ಇನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ವಿಚಾರದಲ್ಲಿ ತಮಿಳುನಾಡು ಸರ್ಕಾರವು ಭರ್ಜರಿಯಾಗಿ ಮುನ್ನುಗುತ್ತಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ತಮಿಳುನಾಡಿನ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಐದು ಸಂಭವನೀಯ ಜಾಗಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯಸಾಧ್ಯತಾ ಅಧ್ಯಯನಗಳನ್ನು ಈಗಾಗಲೇ ನಡೆಸಲಾಗಿದೆ.
ಇನ್ನು ತಮಿಳುನಾಡು ಸರ್ಕಾರವು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಫೈನಲ್ ಮಾಡಿದ ಜಾಗಗಳಲ್ಲಿ ಅಧ್ಯಯನ ಸಹ ನಡೆಸಲಾಗಿದೆ. ಇನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ತಮಿಳುನಾಡು ಸರ್ಕಾರವು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಫೈನಲ್ ಮಾಡಿದ ಪ್ರದೇಶಗ ಅಧ್ಯಯನವನ್ನು ಮಾಡಿದೆ. ಪ್ರತಿಯೊಂದು ಜಾಗದ ಅನುಕೂಲಗಳು ಹಾಗೂ ಸವಾಲುಗಳನ್ನು ವಿವರಿಸುವುದಕ್ಕೆ ಸಂಬಂಧಿಸಿದಂತೆ ಕರಡು ವರದಿಯನ್ನು ಸಹ ಸಲ್ಲಿಸಲಾಗಿದೆ. ಈ ಅಧ್ಯಯನ ವರದಿಯ ಆಧಾರದ ಮೇಲೆ ತಮಿಳುನಾಡು ಸರ್ಕಾರವು ಎರಡು ಪ್ರಮುಖ ಪ್ರದೇಶಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ.

ಇದೀಗ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ತಮಿಳುನಾಡು ಶಾರ್ಟ್ ಲಿಸ್ಟ್ ಮಾಡಿರುವ ಎರಡು ಪ್ರದೇಶಗಳಲ್ಲಿ ವಿಸ್ತೃತವಾದ ಪರೀಕ್ಷೆಗಳನ್ನು ನಡೆಸಲಿದೆ. ಈ ವರದಿ ಇನ್ನೊಂದು ಎರಡು ತಿಂಗಳಿನಲ್ಲಿ ಬರುವ ಸಾಧ್ಯತೆ ಇದೆ. ಅಂತಿಮವಾಗಿ ಜಾಗ ನಿಗದಿಯಾದ ಮೇಲೆ ಯೋಜನೆಯ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಯೋಜನೆ ಅನುಷ್ಠಾನಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ ಹಾಗೂ ರಕ್ಷಣಾ ಸಚಿವಾಲಯದ ಅನುಮೋದನೆ ಪಡೆದುಕೊಳ್ಳಬೇಕಾಗಿದೆ.
ಹಿಂದುಳಿದ ಕರ್ನಾಟಕ: ಇನ್ನು ಕರ್ನಾಟಕ ಸರ್ಕಾರವು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಸಾಕಷ್ಟು ಹಿಂದುಳಿದಿದೆ ಎಂದೇ ಹೇಳಲಾಗುತ್ತಿದೆ. ಯಾಕೆಂದರೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವಾಗಿ ಸರ್ಕಾರವು ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲೇ ಇದೆ. ಆದರೆ ತಮಿಳುನಾಡು ಸರ್ಕಾರವು ಭಾರತೀಯ ವಿಮಾನ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಹಂತಕ್ಕೆ ತಲುಪಿದೆ.












Click it and Unblock the Notifications