Bengaluru-Chennai expressway: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ; ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ

ಬೆಂಗಳೂರು, ಜುಲೈ. 05: ಬೆಂಗಳೂರು - ಚೆನ್ನೈ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗಾಗಿ ಎರಡು ರಾಜ್ಯಗಳ ಜನ ಕಾತುರದಿಂದ ಕಾಯುತ್ತಿದ್ದಾರೆ. ಇದೆ ವೇಳೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೊಸ ಅಪ್‌ಡೇಟ್ ಒಂದನ್ನು ಘೋಷಿಸಿದ್ದಾರೆ. ಹೆದ್ದಾರಿ ಉದ್ಘಾಟನೆಗಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ಇದು ಸಕತ್ ಖುಷಿ ನೀಡಿದೆ.

ಈ ವರ್ಷದ ಡಿಸೆಂಬರ್‌ಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು - ಚೆನ್ನೈ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ. ನಗರದಲ್ಲಿ ನಡೆದ ಬಿಜೆಪಿ ಮುಖಂಡರ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸಚಿವರು ಈ ಘೋಷಣೆ ಮಾಡಿದ್ದಾರೆ.

Bengaluru-Chennai expressway to be inaugurated by PM Modi before December Nitin Gadkari

ಮಾರ್ಚ್ 2024 ರ ವೇಳೆಗೆ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಪೂರ್ಣಗೊಳ್ಳುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಹಿಂದೆ ಘೋಷಿಸಿದ್ದರು. 262 ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕೇವಲ ಎರಡು ಗಂಟೆಗಳವರೆಗೆ ಕಡಿಮೆ ಮಾಡುವ ನಿರೀಕ್ಷೆಯಿದೆ.

ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಮೂಲಕ ಹಾದುಹೋಗುವ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಯ ಕಾಮಗಾರಿ ನಡೆಯುತ್ತಲೇ ಇದೆ. ಇಷ್ಟು ಹೊತ್ತಿಗಾಗಲೇ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಈ ಹೆದ್ದಾರಿಯ ಉದ್ಘಾಟನೆ ಮುಂದಕ್ಕೆ ಹೋಗುತ್ತಲೇ ಇದೆ. ಆದರೆ, ಡಿಸೆಂಬರ್‌ನಲ್ಲಿ ಉದ್ಘಾಟನೆ ಆಗಲಿದೆ ಎಂದು ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಡಿಸೆಂಬರ್ ಅಂತ್ಯದೊಳಗೆ ಕರ್ನಾಟಕದಲ್ಲಿ 17,000 ಕೋಟಿ ರೂಪಾಯಿ ವೆಚ್ಚದ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (ಎಸ್‌ಟಿಆರ್‌ಆರ್) ಯೋಜನೆಯನ್ನು ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಕೂಡ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೀಗಾಗಿ ಮತ್ತಷ್ಟು ನಿರೀಕ್ಷೆಯಲ್ಲಿ ಪ್ರಯಾಣಿಕರು ಕಾಯುವಂತಾಗಿದೆ.

Bengaluru-Chennai expressway to be inaugurated by PM Modi before December Nitin Gadkari

ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ತ್ವರಿತಗೊಳಿಸಲು ರಾಜ್ಯದಲ್ಲಿ ಸುಗಮ ಪರಿಸರ ಅನುಮತಿ ಮತ್ತು ಭೂಸ್ವಾಧೀನವನ್ನು ಖಚಿತಪಡಿಸಿಕೊಳ್ಳಲು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದೇನೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

'ಹೊಸ ಜೋಡಣೆ' (New Alignment) ಬೆಂಗಳೂರು - ಚೆನ್ನೈ ಹೆದ್ದಾರಿಯು ಹೊಸಕೋಟೆಯನ್ನು (ಬೆಂಗಳೂರಿನಲ್ಲಿ) ಕಾಂಚೀಪುರಂ ಜಿಲ್ಲೆಯ ಶ್ರೀಪೆರಂಬದೂರ್‌ಗೆ (ಚೆನ್ನೈನಿಂದ 40 ಕಿಮೀ) ಸಂಪರ್ಕಿಸುತ್ತದೆ. ಎಕ್ಸ್‌ಪ್ರೆಸ್‌ವೇ ಎನ್‌ಎಚ್‌ಎಐ ಅಭಿವೃದ್ಧಿಪಡಿಸುತ್ತಿರುವ 36 ಹೊಸ ಎಕ್ಸ್‌ಪ್ರೆಸ್‌ವೇಗಳಲ್ಲಿ ಒಂದಾಗಿದೆ.

ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಮೇ 2022 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕಿದ್ದರು. 262 ಕಿಮೀ ಉದ್ದದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ 17,930 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳ ಮೂಲಕ ಹಾದು ಹೋಗಲಿದೆ. ಹೆದ್ದಾರಿಯು 240 ಕಿಮೀ ದೂರಕ್ಕೆ ಎಂಟು ಲೇನ್‌ಗಳಾಗಿದ್ದು, ಉಳಿದವು 22 ಕಿಮೀ ವಿಸ್ತರಣೆಯಾಗಿದೆ. ಯೋಜನೆಗಾಗಿ ಸುಮಾರು 2,650 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಮೂರು ಹಂತಗಳಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ಮೊದಲ ಹಂತದಲ್ಲಿ ಕರ್ನಾಟಕದ ಹೊಸಕೋಟೆ ಮತ್ತು ಬೇತಮಂಗಲ ನಡುವೆ 62.6 ಕಿ.ಮೀ. ಇದೆ. ಎರಡನೇ ಹಂತವು ಬೇತಮಂಗಲದಿಂದ ಆಂಧ್ರಪ್ರದೇಶದ ಗುಡಿಪಾಲದವರೆಗೆ 85 ಕಿ.ಮೀ. ಮೂರನೇ ಹಂತವು 106 ಕಿ.ಮೀ. ಗುಡಿಪಾಲವನ್ನು ತಮಿಳುನಾಡಿನ ಶ್ರೀಪೆರಂಬದೂರ್‌ಗೆ ಸಂಪರ್ಕಿಸುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+