ಎಲ್ಲೆಲ್ಲಿ ಹಾದು ಹೋಗಲಿದೆ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್ ವೇ?; ಉತ್ತರ ಕರ್ನಾಟಕದ ಯಾವ ಜಿಲ್ಲೆಗಳಿಗೆ ಉಪಯೋಗ
Expressway: ಭಾರದತಲ್ಲಿ ಹೆದ್ದಾರಿ ವಿಚಾರಕ್ಕೆ ಬಂದರೆ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಯುತ್ತಿವೆ. ಅದರಲ್ಲೂ ಬಹುನಿರೀಕ್ಷಿತ ಬೆಂಗಳೂರು, ಪುಣೆ ಮತ್ತು ಮುಂಬೈ ನಡುವಿನ ಹೊಸ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಆದರೆ ಉತ್ತರ ಕರ್ನಾಟಕದ ಯಾವೆಲ್ಲ ಜಿಲ್ಲೆಗಳಿಗೆ ಉಪಯೋಗ ಆಗಲಿದೆ ಹಾಗೂ ಇದಕ್ಕೆ ತಗಲುವ ವೆಚ್ಚ ಎಷ್ಟು ಎನ್ನುವ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.
ಈ ಹೊಸ ಎಕ್ಸ್‌ಪ್ರೆಸ್ ವೇ ನಿರ್ಮಾಣವಾದರೆ, ಬೆಂಗಳೂರು, ಪುಣೆ ಮತ್ತು ಮುಂಬೈ ನಗರಗಳ ನಡುವಿನ ಪ್ರಯಾಣದ ಸಮಯ ಕಡಿಮೆಯಾಗಲಿದ್ದು, ಕೇವಲ 7 ಗಂಟೆ ಆಗುತ್ತದೆ. ಈ ಮೂಲಕ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಸುವವರಿಗೆ ಇದು ತುಂಬಾ ಸಹಕಾರಿಯಾದಂತಾಗಲಿದೆ.

ಮಹಾರಾಷ್ಟ್ರದ ಎರಡು ಪ್ರಮುಖ ನಗರಗಳಾದ ಮುಂಬೈ, ಪುಣೆ ಹಾಗೂ ಕರ್ನಾಟಕದ ಬೆಂಗಳೂರು ನಡುವಿನ ಸಂಪರ್ಕ ಕಲ್ಪಿಸುವಲ್ಲಿ ಈ ಹೊಸ ಎಕ್ಸ್‌ಪ್ರೆಸ್‌ವೇ ಪ್ರಮುಖ ಪಾತ್ರ ವಹಿಸಲಿದೆ. ಪುಣೆ- ಬೆಂಗಳೂರು ಎಕ್ಸ್‌ಪ್ರೆಸ್‌ವೇ 3 ನಗರಗಳ ನಡುವಿನ ಪ್ರಯಾಣದ ದೂರವನ್ನು 95 ಕಿಲೋ ಮೀಟರ್‌ಗಳಷ್ಟು ಕಡಿಮೆ ಮಾಡುತ್ತದೆ. ಈ ನಗರಗಳ ನಡುವಿನ ಪ್ರಯಾಣದ ಸಮಯ 7 ಗಂಟೆ ಆಗಲಿದೆ.
ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ 699 ಕಿಲೋ ಮೀಟರ್‌ಗಳಷ್ಟು ವಿಸ್ತರಿಸಲಿದ್ದು, ಇದರ ನಿರ್ಮಾಣಲ್ಲೆ ಸುಮಾರು ₹50,000 ಕೋಟಿ ವೆಚ್ಚ ಆಗಲಿದೆ ಎಂದ ಎಂದು ಅಂದಾಜಿಸಲಾಗಿದೆ. ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಅಧಿಕಾರಿಗಳು ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಎಕ್ಸ್‌ಪ್ರೆಸ್‌ವೇ ನಿರ್ಮಿಸುವ ಅಂತಿಮ ಪ್ರಸ್ತಾವನೆಯನ್ನು ಸಲ್ಲಿಸುವ ನಿರೀಕ್ಷೆಯಿದೆ.
ಪ್ರಸ್ತಾವನೆ ಸಲ್ಲಿಕೆ ಬಳಿಕ ಭೂಸ್ವಾಧೀನ ಮತ್ತು ನಿರ್ಮಾಣ ಕಾರ್ಯ ಪ್ರಾರಂಭ ಆಗಲಿದೆ. ಇವೆಲ್ಲ ಪೂರ್ಣಗೊಂಡರೆ, ಎಕ್ಸ್‌ಪ್ರೆಸ್‌ವೇ 2028ರಲ್ಲಿ ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆ ತೆರೆಯುವ ನಿರೀಕ್ಷೆಯಿದೆ. ಈ ಎಕ್ಸ್‌ಪ್ರೆಸ್‌ವೇ ಒಟ್ಟು 12 ಜಿಲ್ಲೆಗಳ ಮೂಲಕ ಹಾದುಹೋಗಲಿದೆ. ಈ ಪೈಕಿ 9 ಕರ್ನಾಟಕದಲ್ಲಿ ಮತ್ತು ಮೂರು ಮಹಾರಾಷ್ಟ್ರದಲ್ಲಿವೆ.
ಮಧ್ಯ, ಕಲ್ಯಾಣ ಹಾಗೂ ಉತ್ತರ ಕರ್ನಾಟಕದ 9, ಮಹಾರಾಷ್ಟ್ರದ ಮೂರು ಜಿಲ್ಲೆಗಳು ಸೇರಿದಂತೆ ಒಟ್ಟು 12 ಜಿಲ್ಲೆಗಳ ಮೂಲಕ ಈ ಹೆದ್ದಾರಿ ಹಾದು ಹೋಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಚಿತ್ರದುರ್ಗ, ದಾವಣಗೆರೆಯ ಜಗಳೂರು, ವಿಜಯನಗರದ ಕೂಡ್ಲಿಗಿ, ಕೊಪ್ಪಳದ ಯಲಬುರ್ಗಾ, ಗದಗ ಜಿಲ್ಲೆಯ ರೋಣ, ನರಗುಂದ, ಬಾಗಲಕೋಟೆಯ ಬಾದಾಮಿ, ಮುಧೋಳ, ಜಮಖಂಡಿ, ಬೆಳಗಾವಿ ಜಿಲ್ಲೆಯ ಅಥಣಿ ಮೂಲಕ ಹಾಯ್ದು ಮಹಾರಾಷ್ಟ್ರದ ಸತಾರಾ, ಸಾಂಗ್ಲಿ ಮಾರ್ಗವಾಗಿ ಪುಣೆಗೆ ತಲುಪಲಿದೆ.
ಈ ಕಾರಿಡಾರ್ ಪುಣೆ ರಿಂಗ್ ರಸ್ತೆಯ ಕಂಜಾಲೆಯಿಂದ ಪ್ರಾರಂಭವಾಗಿ ಬೆಂಗಳೂರು ಮಹಾನಗರ ವ್ಯಾಪ್ತಿಯ ಸ್ಯಾಟಲೈಟ್ ರಿಂಗ್ ರಸ್ತೆಯ ಮುತಗಡಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ. ಈ ಹೆದ್ದಾರಿ ನಿರ್ಮಾಣವಾದರೆ ದಟ್ಟಣೆ ಕಡಿಮೆಯಾದಂತಾಗಲಿದೆ. ಅಲ್ಲದೆ, ಹಲವು ಯೋಜನೆಗಳ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಿದಂತಾಗಲಿದೆ. ಎಕ್ಸ್‌ಪ್ರೆಸ್‌ವೇ 55 ಫ್ಲೈಓವರ್‌ಗಳನ್ನು ಒಳಗೊಂಡಿರಲಿದೆ. ಅಲ್ಲದೆ, ಎರಡೂ ಬದಿಗಳಲ್ಲಿ ಗಿಡಗಳನ್ನು ನೆಡಲಾಗುತ್ತದೆ. ಕೃಷ್ಣಾ, ತುಂಗಭದ್ರಾ ಸೇರಿದಂತೆ ದಾಟಿ 10 ನದಿಗಳ ಮೇಳೆ ಹೆದ್ದಾರಿ ಹಾದುಹೋಗಲಿದೆ ಎಂದು ತಿಳಿದುಬಂದಿದೆ.
ಪುಣೆ ಹಾಗೂ ಬೆಂಗಳೂರು ಎಕ್ಸ್‌ಪ್ರೆಸ್‌ವೇ ಅನ್ನು ಭಾರತಮಾಲಾ ಪರಿಯೋಜನಾ ಅಡಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತದೆ. ಈ ರಾಷ್ಟ್ರೀಯ ಹೆದ್ದಾರಿಯು ಭಾರತದ ಮೂರು ಮಹಾನಗರಗಳ ನಡುವಿನ ಅಂತರವನ್ನು ಕಡಿಮೆ ಮಾಡಲಿದೆ. ಪ್ರಯಾಣದ ವೇಗವನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಈ ವರ್ಷದ ಮೇ ತಿಂಗಳಲ್ಲಿ ಹೇಳಿದ್ದರು.












Click it and Unblock the Notifications