Bengaluru Second Airport: ಬೆಂಗಳೂರು - ಹೊಸೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರದಿಂದ ಗುಡ್‌ನ್ಯೂಸ್

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆ ವಿಳಂಬವಾಗುತ್ತಿರುವುದರ ನಡುವೆ ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ಚುರುಕು ಪಡೆದುಕೊಂಡಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಇನ್ನೂ ಜಾಗ ಅಂತಿಮವಾಗಿಲ್ಲ. ಈ ರೀತಿ ಇರುವಾಗಲೇ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಗ್ರೀನ್‌ಫೀಲ್ಡ್ ಯೋಜನೆ ಜಾರಿಗೆ ಮಹತ್ವದ ಹೆಜ್ಜೆಯನ್ನು ಇರಿಸಿದೆ.

ವಿಮಾನ ನಿಲ್ದಾಣಗಳ ನಡುವೆ 150 ಕಿ.ಮೀ ಅಂತರ ನೀತಿಯ ಕುರಿತು ಕೇಂದ್ರ ಸರ್ಕಾರದ ಇತ್ತೀಚಿನ ಸ್ಪಷ್ಟೀಕರಣವು ಹೊಸೂರಿಗೆ ಸದ್ದಿಲ್ಲದೆ ಸುವರ್ಣ ಅವಕಾಶವನ್ನು ಮಾಡಿಕೊಟ್ಟಿದೆ. ನಿಯಂತ್ರಕ ಅಡಚಣೆಯಂತೆ ಕಾಣುತ್ತಿದ್ದರೂ ಉತ್ತರ ತಮಿಳುನಾಡಿಗೆ ಈ ನಿರ್ಧಾರವು ವರವಾಗಿ ಬದಲಾಗಿದೆ. ಈಗಾಗಲೇ ಇರುವ ವಿಮಾನ ನಿಲ್ದಾಣವು ಸಾಮರ್ಥ್ಯವನ್ನು ತಲುಪಿದ ನಂತರ 150 ಕಿ.ಮೀ ವಿಮಾನ ನಿಲ್ದಾಣ ನೀತಿಯು ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳ ಬಳಿ ಹೊಸ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಅಡ್ಡಿಯಾಗುವುದಿಲ್ಲ ಎಂದು ಹೇಳಲಾಗಿದೆ.

Bengaluru Second Airport Centre Gives Green Signal for Bengaluru Hosur International Airport Project

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಹೊಸೂರು ವಿಮಾನ ನಿಲ್ದಾಣದ ನಡುವೆ 150 ಕಿ.ಮೀ ಅಂತರ ಇಲ್ಲದೆ ಇರುವುದು ಈ ಅಡಚಣೆಗೆ ಕಾರಣವಾಗಿತ್ತು. ಇದೀಗ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದು 2024-25ರಲ್ಲಿ ಸುಮಾರು 41 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರತಾಗಿಯೂ ತಮಿಳುನಾಡಿನ ಪ್ರಸ್ತಾವಿತ ಹೊಸ ವಿಮಾನ ನಿಲ್ದಾಣಕ್ಕೆ ಅವಕಾಶವನ್ನು ಮಾಡಿಕೊಡುತ್ತದೆ.

150 ಕಿ.ಮೀ ವೈಮಾನಿಕ ದೂರ ನಿಯಮವು ಅಸ್ತಿತ್ವದಲ್ಲಿತ್ತು. ಆದರೆ ಇದು ವಿಮಾನ ನಿಲ್ದಾಣಗಳ ಬಳಿ ಹೊಸ ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ಶಾಶ್ವತವಾಗಿ ನಿರ್ಬಂಧಿಸುವ ಉದ್ದೇಶವನ್ನು ಎಂದಿಗೂ ಹೊಂದಿರಲಿಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಸ್ಪಷ್ಟಪಡಿಸಿದ್ದಾರೆ. ಬದಲಾಗಿ, ಅದರ ಬೆಳವಣಿಗೆಯ ಹಂತದಲ್ಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಕಾರ್ಯಸಾಧ್ಯತೆಯನ್ನು ಸುಗಮಗೊಳಿಸುವುದು ಈ ಮಾರ್ಗಸೂಚಿಯ ಮುಖ್ಯ ಉದ್ದೇಶವಾಗಿತ್ತು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಕರ್ನಾಟಕಕ್ಕೂ ವರದಾನ

ಇನ್ನು ವಿಮಾನ ನಿಲ್ದಾಣಗಳ ನಡುವೆ 150 ಕಿ.ಮೀ ಅಂತರ ಇರಬೇಕು ಎನ್ನುವ ನಿಯಮವು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೂ ಸಮಸ್ಯೆ ಆಗಿತ್ತು. ಈಗಾಗಲೇ ದೇವನಹಳ್ಳಿಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಅಲ್ಲದೇ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಗೊಂದಲ ಸೃಷ್ಟಿ ಮಾಡಿತ್ತು. ಇದೀಗ ನಿಯಮ ಸಡಿಲಿಕೆಯು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೂ ವರದಾನವಾಗುವ ಸಾಧ್ಯತೆ ಇದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಈಗ ವೇಗವಾಗಿ ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿ ಎರಡನೇ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲು ರಾಜ್ಯಗಳನ್ನು ಪ್ರೋತ್ಸಾಹಿಸುತ್ತಿದೆ. 150 ಕಿ.ಮೀ ತ್ರಿಜ್ಯದ ನೀತಿಯ ವಿಷಯಕ್ಕೆ ಬಂದಾಗ, ಇದು ವಿಮಾನ ನಿಲ್ದಾಣ ಅಭಿವೃದ್ಧಿಯ ಪ್ರಾರಂಭವನ್ನು ಮಾರ್ಗದರ್ಶಿಸುವ ನೀತಿಯಾಗಿದೆ. ಸಾಮರ್ಥ್ಯ ಸ್ಥಿರವಾದಾಗ ಷರತ್ತು ಇನ್ನು ಮುಂದೆ ಅನ್ವಯಿಸುವುದಿಲ್ಲ. ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯಗಳಿಗೆ ಅವಕಾಶವಿದೆ ಎಂದು ಸಚಿವ ರಾಮ್ ಮೋಹನ್ ನಾಯ್ಡು ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+