Bengaluru Second airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಭಾರೀ ಮುಖಭಂಗ, ಆಂಧ್ರಪ್ರದೇಶಕ್ಕೆ ಲಾಭ
Bengaluru Second airport: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಭಾರೀ ಹಿನ್ನಡೆ ಆಗಿದೆ. ಅದೇ ರೀತಿ ಇದೀಗ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಹಾಗೂ ಕರ್ನಾಟಕಕ್ಕೆ ಪೈಪೋಟಿ ನೀಡುವುದಕ್ಕೆ ಮುಂದೆ ಬಂದಿದ್ದ ತಮಿಳುನಾಡಿಗೂ ಮುಖಭಂಗವಾಗಿದೆ.
ಹೊಸೂರಿನಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಕನಸು ಕಾಣುತ್ತಿದ್ದ ತಮಿಳುನಾಡು ಸರ್ಕಾರಕ್ಕೆ ಭಾರೀ ಹಿನ್ನಡೆ ಆಗಿದೆ. ತಮಿಳುನಾಡಿನ ವಿಧಾನಸಭೆ ಚುನಾವಣೆಯು ಇರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇರಿಸಲು ನಿರ್ಧರಿಸಿದೆ.

ತಮಿಳುನಾಡಿನ ಹೊಸೂರಿನಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವುದು ತಮಿಳುನಾಡು ಸರ್ಕಾರದ ಹಲವು ದಿನಗಳ ಕನಸಾಗಿದೆ. ಇದರಿಂದ ತಮಿಳುನಾಡಿನ ಕೈಗಾರಿಕೆಗೆ ಬೂಸ್ಟ್ ಸಿಗುವುದರೊಂದಿಗೆ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂವನ್ನು ಸಹ ಬಳಸಿಕೊಳ್ಳಬಹುದು ಎನ್ನುವ ಲೆಕ್ಕಾಚಾರದಲ್ಲಿ ತಮಿಳುನಾಡು ಇತ್ತು. ಆದರೆ ಈ ವಿಚಾರದಲ್ಲಿ ಭಾರೀ ಹಿನ್ನಡೆ ಆಗಿದೆ. ಇದೀಗ ಕರ್ನಾಟಕದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಹಾಗೂ ಹೊಸೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಪ್ರಕ್ರಿಯೆ ವಿಳಂಬವಾಗುತ್ತಿರುವುದರ ನಡುವೆಯೇ ನೆರೆಯ ಆಂಧ್ರಪ್ರದೇಶವು ಕುಪ್ಪಂನಲ್ಲಿ ತನ್ನದೇ ವಾಯುಯಾನ ಯೋಜನೆಗಳು ಚುರುಕು ಪಡೆದುಕೊಂಡಿವೆ.
ಈ ಮೂಲಕ ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಭಾರೀ ಪೈಪೋಟಿ ಎದುರಾಗಿತ್ತು. ಇದೀಗ ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ ಎನ್ನುವಂತೆ ಆಂಧ್ರಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಗಳು ಚುರುಕು ಪಡೆದುಕೊಳ್ಳುತ್ತಿರುವುದು ವರದಿಯಾಗಿದೆ. ಕರ್ನಾಟಕ ಹಾಗೂ ತಮಿಳುನಾಡಿನ ನಷ್ಟವು ಆಂಧ್ರಪ್ರದೇಶಕ್ಕೆ ಲಾಭ ಮಾಡಿಕೊಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.
ಸೋಮವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮಮೋಹನ್ ನಾಯ್ಡು ಅವರು ರಾಜ್ಯಸಭೆಯಲ್ಲಿ ಮಾತನಾಡಿದ್ದು, ಈ ಸಂದರ್ಭದಲ್ಲಿ ತಮಿಳುನಾಡು ಸರ್ಕಾರ ಕಳುಹಿಸಿರುವ ಹೊಸೂರು ವಿಮಾನ ನಿಲ್ದಾಣದ ಪ್ರಸ್ತಾವನೆಯನ್ನು ರಾಷ್ಟ್ರೀಯ ರಕ್ಷಣಾ ಆದ್ಯತೆಗಳನ್ನು ಉಲ್ಲೇಖಿಸಿ ಶಿಫಾರಸು ಮಾಡಿಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ದಿ ಹಿಂದೂ ವರದಿ ಮಾಡಿದೆ.
ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ತಮಿಳುನಾಡಿನ ಯೋಜನೆಯನ್ನು ಭದ್ರತಾ ಕಾರಣಗಳಿಗಾಗಿ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಆದರೆ ಆಂಧ್ರಪ್ರದೇಶ ಕುಪ್ಪಂನಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೊಸೂರು ಯೋಜನೆಯು ಬೆಂಗಳೂರಿನ ಸಾಮೀಪದಲ್ಲಿರುವುದರಿಂದ ಕೈಗಾರಿಕಾವಾಗಿ ಪ್ರಮುಖವಾದ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ವಿಳಂಬವಾಗಿದೆ. ಅಲ್ಲದೇ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲೂ ಭಾರೀ ಹಿನ್ನಡೆ ಆಗಿದೆ.
ಕೇಂದ್ರ ಸರ್ಕಾರದ ಪ್ರಕಾರ, ಹೊಸೂರಿನಲ್ಲಿ ನಾಗರಿಕ ವಿಮಾನ ಕಾರ್ಯಾಚರಣೆಗಳು ಪ್ರಸ್ತುತ ಕಾರ್ಯಸಾಧ್ಯವಿಲ್ಲ. ಏಕೆಂದರೆ ಈ ಪ್ರದೇಶವು HAL-ನಿಯಂತ್ರಿತ ವಾಯುಪ್ರದೇಶದ ಅಡಿಯಲ್ಲಿ ಬರುತ್ತದೆ. ಇದನ್ನು ಮಿಲಿಟರಿ ಕಾರ್ಯಾಚರಣೆಗಳು ಮತ್ತು ಪರೀಕ್ಷಾ ಹಾರಾಟಗಳಿಗೆ ವ್ಯಾಪಕವಾಗಿ ಬಳಸಲಾಗುತ್ತದೆ. ರಕ್ಷಣಾ ಸಚಿವಾಲಯವು ಹಲವು ಬಾರಿ ಈ ನಿಲುವನ್ನು ಪುನರುಚ್ಚರಿಸಿದೆ, ಇದು ತಮಿಳುನಾಡಿನ ಪ್ರಸ್ತಾವನೆಗೆ ಹೊಸ ಹೊಡೆತ ಕೊಟ್ಟಿದೆ.
ಹೊಸೂರು ವಿಮಾನ ನಿಲ್ದಾಣ ಹಿನ್ನೆಲೆ
ಇನ್ನು ತಮಿಳುನಾಡಿನ ಸರ್ಕಾರವು ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭಾರೀ ಸರ್ಕಸ್ ನಡೆಸಿತ್ತು. ಹೊಸೂರು ವಿಮಾನ ನಿಲ್ದಾಣವನ್ನು ಬೆರಿಗೈ - ಬಾಗಲೂರು - ಶೂಲಗಿರಿ ಪ್ರದೇಶದಲ್ಲಿ ಸುಮಾರು 2,979 ಎಕರೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಹೊಸೂರು ಮತ್ತು ಶೂಲಗಿರಿ ತಾಲ್ಲೂಕುಗಳ 12 ಹಳ್ಳಿಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. 500ಕ್ಕೂ ಹೆಚ್ಚು ದೊಡ್ಡ ಕೈಗಾರಿಕೆಗಳು ಮತ್ತು ಸುಮಾರು 3,000 MSME ಘಟಕಗಳನ್ನು ಹೊಂದಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ಕೇಂದ್ರ ಪ್ರದೇಶವಾದ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಉದ್ದೇಶಿಸಲಾಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications