Bengaluru Second Airport: ಹೊಸೂರು ವಿಮಾನ ನಿಲ್ದಾಣ ಪ್ರಕ್ರಿಯೆ ಜೋರು: ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭ!
Bengaluru Second Airport: ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರವು ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆಯು ವೇಗ ಪಡೆದುಕೊಳ್ಳುತ್ತಿಲ್ಲ. ಆದರೆ, ಇದರ ನಡುವೆ ಪ್ರತಿ ಹಂತದಲ್ಲೂ ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ಟಾಂಗ್ ಕೊಡುತ್ತಿದೆ. ಇದೀಗ ಬೆಂಗಳೂರಿನಿಂದ ಕೆಲವೇ ಕಿ. ಮೀ ದೂರದಲ್ಲಿರುವ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಇನ್ನೂ ಕ್ಲಿಯರೆನ್ಸ್ ಸಿಕ್ಕಿಲ್ಲ. ಈ ರೀತಿ ಇರುವಾಗ ತಮಿಳುನಾಡು ಶರವೇಗದಲ್ಲಿ ಸಾಗಿದೆ.
ಪ್ರಸ್ತಾವಿತ ಹೊಸೂರು ವಿಮಾನ ನಿಲ್ದಾಣಕ್ಕಾಗಿ ತಮಿಳುನಾಡು ಮುಂದಿನ ಮೂರು ತಿಂಗಳ ಅವಧಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು ಹೇಳಲಾಗಿದೆ. ಹೊಸೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಎರಡು ಸ್ಥಳಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಅಡಚಣೆ ಮಿತಿ ಮೇಲ್ಮೈಗೆ ಸಮೀಕ್ಷೆಯನ್ನು ಸಲ್ಲಿಸಿದ್ದಾರೆ. ಇದು ಇನ್ನೊಂದುವಾರೆ ತಿಂಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆದರೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರಂಭದ ಹಂತವೇ ಪೂರ್ಣಗೊಂಡಿಲ್ಲ.

ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ಲಿಮಿಟೆಡ್ (TAAL) ಭಾಗದಲ್ಲಿ ತಮಿಳುನಾಡು ಸರ್ಕಾರವು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಆದರೆ ಇದರಲ್ಲಿ ಯಾವುದನ್ನು ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ ಎನ್ನುವ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಕೇಂದ್ರ ಸರ್ಕಾರದ ವರದಿಯ ಪ್ರಕಾರ ಎರಡೂ ಜಾಗವೂ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಗ್ಯವಾಗಿದೆ ಎಂದು ಈಗಾಗಲೇ ಹೇಳಿದೆ. ಹೊಸೂರು ಭಾಗದಲ್ಲಿ ಮೊದಲನೆಯದು TAAL ವಿಮಾನ ನಿಲ್ದಾಣದಿಂದ ಸುಮಾರು 1.5 ಕಿಮೀ ದೂರದಲ್ಲಿದ್ದರೆ. ಎರಡನೆಯದು ಹೊಸೂರಿನ ಪೂರ್ವಕ್ಕೆ ಮತ್ತು ಶೂಲಗಿರಿಯ ಉತ್ತರದಿಂದ ಸುಮಾರು 15.5 ಕಿಮೀ ದೂರದಲ್ಲಿದೆ. ಎರಡೂ ಪ್ರದೇಶಗಳನ್ನು ಅಂತಿಮ ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.
ಈ ಪ್ರದೇಶಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸುವುದಕ್ಕೆ ತಮಿಳುನಾಡು ಸರ್ಕಾರ ಮುಂದಾಗುತ್ತಿದೆ. ಆದರೆ, ಇದರ ನಡುವೆ ಈ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ರೈತರಿಂದ ವಿರೋಧವೂ ವ್ಯಕ್ತವಾಗುತ್ತಿದೆ. ಭೂಸ್ವಾಧೀನ ಪ್ರಕ್ರಿಯೆಯೇ ಸವಾಲಿನಿಂದ ಕೂಡಿದೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಹೆಚ್ಚು ವಿವಾದ ಒಳಗಾಗದಂತೆ ಸೂಕ್ಷ್ಮ ಹೆಜ್ಜೆಗಳನ್ನು ಇರಿಸುತ್ತಿದೆ.
ಇದರ ನಡುವೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರತ್ಯೇಕ ವಾಯು ನಿಯಂತ್ರಣ ವಲಯ ರಚನೆಯ ಕುರಿತು ರಕ್ಷಣಾ ಸಚಿವಾಲಯಕ್ಕೆ ಪತ್ರ ಬರೆದಿರುವ ರಾಜ್ಯ ಸರ್ಕಾರವು ಎರಡು ತಿಂಗಳೊಳಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸರ್ಕಾರವು ಶೀಘ್ರದಲ್ಲೇ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನೊಂದಿಗೆ ಸಭೆ ನಡೆಸಲಿದೆ ಎಂದು ಹೇಳಲಾಗಿದೆ.
ಹೊಸೂರು ಕೈಗಾರಿಕಾ ಕೇಂದ್ರವಾಗಿದೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಬೆಂಗಳೂರಿನ ಕೈಗಾರಿಕೆಗಳನ್ನು ಹಾಗೂ ವಿಮಾನದ ಪ್ರಯಾಣಿಕರನ್ನೂ ಸೆಳೆಯಬಹುದು ಎನ್ನುವ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ. ಆದರೆ, ಇದಕ್ಕೆ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕ್ರಿಯೆಯು ಟಕ್ಕರ್ ಕೊಡಬೇಕಿತ್ತು. ಆದರೆ, ಆ ಪ್ರಕ್ರಿಯೆ ನಡೆಯುತ್ತಿಲ್ಲ ಎಂದೇ ಹೇಳಲಾಗುತ್ತಿದೆ.












Click it and Unblock the Notifications