Get Updates
Get notified of breaking news, exclusive insights, and must-see stories!

ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್‌ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ

ಕರ್ನಾಟಕದ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕದ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಕಳೆದ ಎರಡು ವರ್ಷಗಳಿಂದಲೂ ಚರ್ಚೆ ನಡೆಯುತ್ತಿದೆ. ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಮೇಲೆ ಆಗುತ್ತಿರುವ ಒತ್ತಡ ಲಾಭ ಹಾಗೂ ತಮಿಳುನಾಡಿನ ಹೊಸೂರಿನ ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ ಎನ್ನುವ ಎಲ್ಲ ಅಂಶಗಳನ್ನು ಇರಿಸಿಕೊಂಡು ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಮುಂದಾಗಿದೆ.

ಇನ್ನು ಕರ್ನಾಟಕ ಸರ್ಕಾರವು ಬೆಂಗಳೂರಿನ ಈಗ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದೆ. ಇನ್ನು ತಮಿಳುನಾಡಿಗೆ ಹೋಲಿಕೆ ಮಾಡಿದರೆ ಕರ್ನಾಟಕ ಸರ್ಕಾರವು ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ತುಸು ಹಿಂದುಳಿದಿದೆ. ಈ ಎರಡೂ ವಿಮಾನ ನಿಲ್ದಾಣಗಳ ಸ್ಥಿತಿ - ಗತಿ ಹೇಗಿದೆ, ಕರ್ನಾಟಕ - ತಮಿಳುನಾಡು ಸರ್ಕಾರ ಹೇಳುವುದೇನು, ಎರಡೂ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಷ್ಟು ಭೂಮಿ ಸ್ವಾಧೀನಪಡಿಸಿಕೊಳ್ಳುವ ಅವಶ್ಯಕತೆ ಇದೆ ಎನ್ನುವ ಸಂಪೂರ್ಣ ವಿವರ ಈ ಲೇಖನದಲ್ಲಿದೆ.

Airport

ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಕಗ್ಗಂಟಾಗಿ ಉಳಿದಿದೆ. ಇದೇ ಸಂದರ್ಭದಲ್ಲಿ ತಮಿಳುನಾಡು ಸರ್ಕಾರವು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ವೇಗ ನೀಡಿದೆ. ಹೊಸೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತಮಿಳುನಾಡು ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರ ಪ್ರಸ್ತಾಪ ಆದಾಗಿನಿಂದಲೂ ಹಲವು ಬಗೆಯ ಚರ್ಚೆಗಳು ನಡೆದಿವೆ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆಯನ್ನು ಕಡಿಮೆ ಮಾಡಲು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಕಡಿಮೆ ಮಾಡುವುದು ಹಾಗೂ ಭವಿಷ್ಯದ ದೃಷ್ಟಿಯಿಂದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ಸರ್ಕಾರವು ಯೋಜನೆ ರೂಪಿಸಿದೆ. ಆದರೆ ಇದು ಇನ್ನೂ ಆಮೆವೇಗದಲ್ಲೇ ಇದೆ. ಆದರೆ ಇದೇ ಸಂದರ್ಭದಲ್ಲಿ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ವೇಗ ನೀಡಿದೆ.

Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ

ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕರ್ನಾಟಕ ಸರ್ಕಾರ ಹೇಳಿದ್ದೇನು

ಕರ್ನಾಟಕ ಸರ್ಕಾರವು 2026 - 2027ನೇ ಸಾಲಿನ ಬಜೆಟ್‌ನಲ್ಲೂ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ವಿಚಾರವನ್ನು ಪ್ರಸ್ತಾಪಿಸಿದೆ. ಬಜೆಟ್‌ ಮಂಡನೆಯ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದ್ದಾರೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಅಭಿಪ್ರಾಯಪಡೆದು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಎರಡನೇ ವಿಮಾನ ನಿಲ್ದಾಣಕ್ಕೆ ಗುರುತಿಸಲಾಗಿರುವ ಪ್ರದೇಶಗಳು

ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದೆ. ಕನಕಪುರ ರಸ್ತೆ (ಕಗ್ಗಲಿಪುರ/ಹರೋಹಳ್ಳಿ), ನೆಲಮಂಗಲ - ಕುಣಿಗಲ್ ರಸ್ತೆಯಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಜಾಗಗಳನ್ನು ಗುರುತಿಸಲಾಗಿದೆ.

2033ರವರೆಗೆ ಹೊಸ ವಿಮಾನ ನಿಲ್ದಾಣಕ್ಕೆ ನಿರ್ಬಂಧವಿದೆ. ಆದರೆ 2030ರ ಒಳಗೆ ಕಾಮಗಾರಿ ಆರಂಭಿಸಲು ಮುಂದಾಗಿದೆ. ಅಲ್ಲದೆ ತಮಿಳುನಾಡಿನ ಹೊಸೂರು ವಿಮಾನ ನಿಲ್ದಾಣದ ಪ್ರಸ್ತಾವನೆಗೆ ಟಕ್ಕರ್ ಕೊಡುವುದಕ್ಕೂ ಸಹ ಕರ್ನಾಟಕ ಸರ್ಕಾರ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನಿಸಿದೆ. ಆದರೆ ಈ ವಿಮಾನ ನಿಲ್ದಾಣದ ವಿಚಾರದಲ್ಲಿ ಈಗಾಗಲೇ ತಮಿಳುನಾಡು ಸರ್ಕಾರವು ಹೊಸೂರು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿದೆ.

2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎದುರಾಗಿರುವ ಸಮಸ್ಯೆಗಳು

ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹಲವು ಸವಾಲುಗಳು ಎದುರಾಗಿವೆ. ಇದರಲ್ಲಿ ಮುಖ್ಯವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಿರ್ದಿಷ್ಟವಾಗಿ ಜಾಗ ಗುರುತಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕರ್ನಾಟಕದಲ್ಲೇ ಲಾಬಿ, ಪೈಪೋಟಿ ಶುರುವಾಗಿದೆ. ಎರಡನೆಯದಾಗಿ ವಾಯುಪ್ರದೇಶ ಸವಾಲಾಗಿದೆ. ಈಗ ಗುರುತಿಸಲಾಗಿರುವ ಪ್ರದೇಶಗಳು ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. ವ್ಯಾಪ್ತಿಗೆ ಬರುತ್ತವೆ. ಅಲ್ಲದೆ ಈಗಾಗಲೇ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 150 ಕಿ.ಮೀ ವ್ಯಾಪ್ತಿಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಅವಕಾಶ ಇಲ್ಲ. ಬಿಐಎಎಲ್ (BIAL) ಒಪ್ಪಂದದ ಅನುಸಾರ , ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ 150 ಕಿ.ಮೀ ವ್ಯಾಪ್ತಿಯಲ್ಲಿ 2033 ರವರೆಗೆ ಬೇರೆ ಯಾವುದೇ ಹೊಸ ವಿಮಾನ ನಿಲ್ದಾಣ ನಿರ್ಮಿಸುವುದಕ್ಕೆ ಅವಕಾಶ ಇರುವುದಿಲ್ಲ. ಈ ಒಪ್ಪಂದದ ಅವಧಿ ಮುಗಿಯುವವರೆಗೆ (ಮುಂದಿನ 8-9 ವರ್ಷಗಳ ಕಾಲ) ಈ ನಿರ್ಬಂಧ ಜಾರಿಯಲ್ಲಿರಲಿದೆ.

ಕರ್ನಾಟಕ ಸರ್ಕಾರವು ಪ್ರಸ್ತಾಪಿಸಿರುವ ನೆಲಮಂಗಲ, ಚುಡಹಳ್ಳಿ ಹಾಗೂ ಸೋಮನಹಳ್ಳಿ ಪ್ರದೇಶಗಳು ಸಮತಟ್ಟಾಗಿಲ್ಲ. ಹೀಗಾಗಿ, ಭಾಗದಲ್ಲಿ ವಿಮಾನ ನಿಲ್ದಾಣಕ್ಕೆ ಸಮತಟ್ಟಾಗಿಸಲು ಹೆಚ್ಚು ನಿರ್ಮಾಣ ವೆಚ್ಚ ಆಗಲಿದೆ.

Airport

Airport ಎಷ್ಟು ಭೂಸ್ವಾಧೀನ ?

ಇನ್ನು ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕನಕಪುರ ರಸ್ತೆ (ರಾಮನಗರ ಜಿಲ್ಲೆ) ಅಥವಾ ತುಮಕೂರು ರಸ್ತೆಯ ಸೊಲೂರು ಪ್ರದೇಶದಲ್ಲಿ 4,500 ರಿಂದ 5,000 ಎಕರೆ ಭೂಸ್ವಾಧೀನ ಮಾಡಿಕೊಳ್ಳುವ ಅವಶ್ಯಕತೆ ಇದೆ. ಆದರೆ ಭೂಸ್ವಾಧೀನ ಪ್ರಕ್ರಿಯೆಯು ಸುದೀರ್ಘವಾಗಿದೆ.

ಕರ್ನಾಟಕದಲ್ಲೇ ಪೈಪೋಟಿ

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕರ್ನಾಟಕದಲ್ಲೇ ಪೈಪೋಟಿ ಶುರುವಾಗಿದೆ. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ಭಾಗದಲ್ಲಿ ನಿರ್ಮಾಣ ಮಾಡುವುದಕ್ಕೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರವು ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡುತ್ತಿಲ್ಲ. ಕೇವಲ ದಕ್ಷಿಣ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎನ್ನುವ ವಾದವೂ ಇದೆ. ಇನ್ನು ಇದೇ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ - ನೆಲಮಂಗಲ ಹಾಗೂ ತುಮಕೂರು ಜಿಲ್ಲೆಯ ಭಾಗದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆಯೂ ಇದೆ. ಬೆಂಗಳೂರಿನಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಅದರಿಂದ ತಮಿಳುನಾಡು ಅಥವಾ ಆಂಧ್ರಪ್ರದೇಶದ ಜನರಿಗೆ ಅನುಕೂಲವಾಗಲಿದೆ. ಇದರ ಬದಲಿಗೆ ಮಧ್ಯ ಕರ್ನಾಟಕ ಅಥವಾ ಉತ್ತರ ಕರ್ನಾಟಕ ಭಾಗದಲ್ಲಿ ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆಯೂ ಇದೆ.

ತಮಿಳುನಾಡಿನ ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆ

ಇನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಚರ್ಚೆಯ ಮುನ್ನೆಲೆಗೆ ಬಂತು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರವು ಹೊಸೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿತ್ತು. ಈಗಾಗಲೇ ತಮಿಳುನಾಡಿನ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ಆದರೆ ಈ ಭಾಗದಲ್ಲಿ ಭೂಸ್ವಾಧೀನಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿರುವ ತಮಿಳುನಾಡು ಸರ್ಕಾರವು ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇರಿಸುತ್ತಿದೆ.

ತಮಿಳುನಾಡಿನ ಹೊಸೂರು ತಾಲ್ಲೂಕಿನ 10 ಗ್ರಾಮಗಳು, ಶೂಲಗಿರಿ ತಾಲ್ಲೂಕಿನ 2 ಸೇರಿ ಒಟ್ಟು 12 ಕಂದಾಯ ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಹೊಸೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಬಾಳವನಪಲ್ಲಿ, ಮುತ್ತಾಲಿ, ಅದವನಪಲ್ಲಿ, ದಾಸಪಲ್ಲಿ, ಅತ್ತೂರು, ಅಳೇನಾಥಂ, ಕಾರುಪಲ್ಲಿ ಹಾಗೂ ನಂದಿಮಂಗಲಂ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ತಮಿಳುನಾಡು ಸರ್ಕಾರವು ಭೂಮಿಸ್ವಾಧೀನ ಮಾಡಿಕೊಳ್ಳುವ ಸಾಧ್ಯತೆ ಇದೆ. ಇನ್ನು ವಿಮಾನ ನಿಲ್ದಾಣಕ್ಕಾಗಿ ಸುಮಾರು 2,979 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಆದರೆ, ಈ ಭಾಗದಲ್ಲಿ ಭೂಸ್ವಾಧೀನವನ್ನು ವಿರೋಧಿಸಿ ರೈತರು ಬೀದಿಗೆ ಇಳಿದಿದ್ದು, ತಮಿಳುನಾಡು ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ.

ಮೆಟ್ರೋ ನಂತರ - ವಿಮಾನ ನಿಲ್ದಾಣಕ್ಕೆ ಆದ್ಯತೆ

ಇನ್ನು ತಮಿಳುನಾಡು ಸರ್ಕಾರವು ಮೊದಲಿಗೆ ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಯನ್ನು ತಮಿಳುನಾಡಿನ ಹೊಸೂರಿಗೆ ವಿಸ್ತರಿಸಲು ಮನವಿ ಮಾಡಿತ್ತು. ಆದರೆ ಈ ಪ್ರಸ್ತಾವನೆಗೆ ಕನ್ನಡಿಗರಿಂದ ತೀವ್ರವಾದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬೆಂಗಳೂರು - ಹೊಸೂರು ವಿಮಾನ ನಿಲ್ದಾಣ ನಿರ್ಮಾಣ ಯೋಜನೆ ಪ್ರಸ್ತಾವನೆಯನ್ನು ಕೈಬಿಡಲಾಗಿತ್ತು. ಮೆಟ್ರೋ ಪ್ರಸ್ತಾವನೆಗೆ ವಿರೋಧ ವ್ಯಕ್ತವಾದ ನಂತರ, ಈಗ ವಿಮಾನ ನಿಲ್ದಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಈ ಮೂಲಕ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಬಳಸಿಕೊಂಡು ಬೆಂಗಳೂರಿಗೇ ಪೈಪೋಟಿ ಕೊಡುವುದಕ್ಕೆ ತಮಿಳುನಾಡು ಸರ್ಕಾರ ಮುಂದಾಗಿದೆ.

ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ

ಬೆಂಗಳೂರು - ಹೊಸೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜನ ಹೆಚ್ಚಾಗಿ ಕೇಳುವ ಪ್ರಶ್ನೆಗಳು

1. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ನಿರ್ಮಿಸುವ ಉದ್ದೇಶಿಸಲಾಗಿದೆ ?

ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ (ಕಗ್ಗಲಿಪುರ/ಹರೋಹಳ್ಳಿ), ನೆಲಮಂಗಲ - ಕುಣಿಗಲ್ ರಸ್ತೆ ಹಾಗೂ ಸೊಲೂರು ಭಾಗಗಳಲ್ಲಿ ನಿರ್ಮಿಸುವ ಸಾಧ್ಯತೆಯ ಬಗ್ಗೆ ಕರ್ನಾಟಕ ಸರ್ಕಾರ ಪರಿಶೀಲನೆ ನಡೆಸುತ್ತಿದೆ.

2. ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯಾಕೆ ಅವಶ್ಯ ?

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆ ಹಾಗೂ ಭವಿಷ್ಯದ ವಿಮಾನಯಾನ ಬೇಡಿಕೆಯನ್ನು ಗಮನದಲ್ಲಿ ಇರಿಸಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದೆ.

3. ಬೆಂಗಳೂರಿನಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಇರುವ ನಿರ್ಬಂಧವೇನು

ಬಿಐಎಎಲ್ (BIAL) ಒಪ್ಪಂದದ ಪ್ರಕಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 150 ಕಿ.ಮೀ ವ್ಯಾಪ್ತಿಯಲ್ಲಿ 2033ರವರೆಗೆ ಹೊಸ ವಿಮಾನ ನಿಲ್ದಾಣ ನಿರ್ಮಿಸಲು ನಿರ್ಬಂಧವಿದೆ.

4. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಷ್ಟು ಎಕರೆ ಭೂಸ್ವಾಧೀನ ಅವಶ್ಯವಿದೆ ?

ಇನ್ನು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಂದಾಜು 4,500 ರಿಂದ 5,000 ಎಕರೆ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಅಗತ್ಯವಿದೆ.

5. ತಮಿಳುನಾಡಿನ ಹೊಸೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆ ಯಾವ ಹಂತದಲ್ಲಿದೆ ?

ಇನ್ನು ತಮಿಳುನಾಡು ಸರ್ಕಾರವು ಹೊಸೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

6. ಹೊಸೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಷ್ಟು ಭೂಮಿ ಅವಶ್ಯವಿದೆ ?

ಹೊಸೂರು ವಿಮಾನ ನಿಲ್ದಾಣ ಯೋಜನೆಗಾಗಿ ಸುಮಾರು 2,979 ಎಕರೆ ಭೂಮಿಯನ್ನು ಗುರುತಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+