ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲ್ವೆಯಲ್ಲಿ ಮಾಸ್ಕ್ ಧರಿಸದ 2,200 ಪ್ರಯಾಣಿಕರಿಗೆ 3,21,000 ರೂ. ದಂಡ

|
Google Oneindia Kannada News

ನವದೆಹಲಿ, ಫೆಬ್ರವರಿ.22: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕದ ನಡುವೆ ಪಶ್ಚಿಮ ವಿಭಾಗದಲ್ಲಿ ರೈಲ್ವೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರೈಲ್ವೆಯಲ್ಲಿ ಸಂಚರಿಸುವ ಪ್ರಯಾಣಿಕರು ನಿಯಮ ಪಾಲಿಸದಿದ್ದಕ್ಕೆ ದಂಡ ವಿಧಿಸಲಾಗುತ್ತದೆ.
ದೇಶಾದ್ಯಂತ ಒಂದು ಕಡೆ ಕೊವಿಡ್-19 ಸೋಂಕಿತ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳುತ್ತಿಲ್ಲ. ಸರ್ಕಾರದ ಮಾರ್ಗಸೂಚಿ ಮತ್ತು ಕೊರೊನಾವೈರಸ್ ಶಿಷ್ಟಾಚಾರ ಪಾಲನೆ ಮಾಡದೇ ಸಾಮಾಜಿಕ ಅಂತರವನ್ನು ತೊರೆದು ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಜನರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಯಮ ಉಲ್ಲಂಘಿಸಿದರೆ 200ರೂ ದಂಡದ ಜೊತೆ ಮಾಸ್ಕ್ ಉಚಿತ!ಮಹಾರಾಷ್ಟ್ರದಲ್ಲಿ ನಿಯಮ ಉಲ್ಲಂಘಿಸಿದರೆ 200ರೂ ದಂಡದ ಜೊತೆ ಮಾಸ್ಕ್ ಉಚಿತ!

ದೇಶದ ಪಶ್ಚಿಮ ವಿಭಾಗದ ರೈಲ್ವೆಯಲ್ಲಿ ಕಳೆದ ಫೆಬ್ರವರಿ.1ರಿಂದ ಫೆಬ್ರವರಿ.21ವರೆಗೂ 2,200 ಪ್ರಯಾಣಿಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈವರೆಗೂ 3,21,000 ರೂಪಾಯಿ ದಂಡವನ್ನು ವಿಧಿಸಲಾಗಿದೆ. ಇನ್ನೊಂದು ಕಡೆ ಮುಂಬೈ ನಗರದ ಮಾರುಕಟ್ಟೆಗಳಲ್ಲಿ ಮಾಸ್ಕ್ ಹಾಕಿಕೊಳ್ಳದೇ ಇರುವ ಸಾರ್ವಜನಿಕರಿಗೆ ಪೊಲೀಸರು 200 ರೂಪಾಯಿ ದಂಡವನ್ನು ವಿಧಿಸುತ್ತಿದ್ದಾರೆ. ಇದರ ಜೊತೆಗೆ ದಂಡ ಪಾವತಿಸಿದ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ಗಳನ್ನು ವಿತರಣೆ ಮಾಡಲಾಯಿತು.

Between Feb 1 To Feb 21, Western Railway Fined 2,200 Passengers For Not Wearing Face Masks

ಭಾರತದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಇತ್ತೀಚಿಗೆ ಮತ್ತಷ್ಟು ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 14,199 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,10,05,850ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 9695 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,06,99,410 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ 24 ಗಂಟೆಗಳಲ್ಲಿ 83 ಜನರು ಪ್ರಾಣ ಬಿಟ್ಟಿದ್ದು, ಒಟ್ಟು 1,56,385 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ 1,50,055 ಸೋಂಕಿನ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
Between Feb 1 To Feb 21, Western Railway Fined 2,200 Passengers For Not Wearing Face Masks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X