4 ದಿನ ಬ್ಯಾಂಕ್ ರಜೆ: ಮಾರ್ಚ್ 15 ಮತ್ತು 16ರಂದು ಭಾರತ್ ಬಂದ್
ನವದೆಹಲಿ, ಮಾರ್ಚ್.11: ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇನ್ನೊಂದೇ ದಿನವಷ್ಟೇ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.
ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‌ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಇತ್ತೀಚಿಗೆ ನಡೆದ ಸಂಧಾನ ಸಭೆಯಲ್ಲಿ ಯಾವುದೇ ರೀತಿ ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ. ಈ ಹಿನ್ನೆಲೆ ಮಾರ್ಚ್ 15 ಮತ್ತು 16 ರಂದು ಸುಮಾರು 10 ಲಕ್ಷ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ)ತಿಳಿಸಿದೆ. ಇದಲ್ಲದೆ, ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಮರುಪರಿಶೀಲಿಸಲು ಒಂದು ವೇಳೆ ಸರ್ಕಾರವು ಒಪ್ಪಿದರೆ ಮುಷ್ಕರವನ್ನು ಮರುಪರಿಶೀಲಿಸುವುದಾಗಿ ಬ್ಯಾಂಕ್ ನೌಕರರ ಸಂಘಟನೆಗಳು ಹೇಳಿವೆ.

ಭಾರತದಲ್ಲಿ ನಾಲ್ಕು ದಿನ ನಿರಂತರ ಬ್ಯಾಂಕ್ ರಜೆ
ಮಾರ್ಚ್.15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್.13 ಎರಡನೇ ಶನಿವಾರವಾಗಿದ್ದು, ಮಾರ್ಚ್.14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.

ಬ್ಯಾಂಕಿಂಗ್ ಕಾರ್ಯಗಳಿಗೆ ಸಮಸ್ಯೆ ಆಗುವ ಸಾಧ್ಯತೆ
ಭಾರತ್ ಬಂದ್ ಅನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸ್ಟೇಟ್ ಬ್ಯಾಂಕಿನ ಎಲ್ಲಾ ಶಾಖೆಗಳು ಮತ್ತು ಕಚೇರಿಗಳಲ್ಲಿ ಸಾಮಾನ್ಯ ಕಾರ್ಯನಿರ್ವಹಣೆಗೆ ವ್ಯವಸ್ಥೆ ಮಾಡಲಾಗಿದೆ. ಅದಾಗ್ಯೂ ಮುಷ್ಕರದಿಂದ ಬ್ಯಾಂಕಿಂಗ್ ಕಾರ್ಯಗಳಿಗೆ ತೊಂದರೆ ಆಗಬಹುದು ಎಂದು ಬ್ಯಾಂಕ್ ತಿಳಿಸಿದೆ.

ಎಸ್ ಬಿಐ ಹೇಳಿಕೆಯಲ್ಲಿ ಏನಿದೆ?
"ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) 2021ರ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ ಎಂದು ನಮಗೆ ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಸೂಚಿಸಿದೆ" ಎಂದು ಎಸ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು?
ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್ ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications