ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

4 ದಿನ ಬ್ಯಾಂಕ್ ರಜೆ: ಮಾರ್ಚ್ 15 ಮತ್ತು 16ರಂದು ಭಾರತ್ ಬಂದ್

|
Google Oneindia Kannada News

ನವದೆಹಲಿ, ಮಾರ್ಚ್.11: ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇನ್ನೊಂದೇ ದಿನವಷ್ಟೇ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.

ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‌ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಇತ್ತೀಚಿಗೆ ನಡೆದ ಸಂಧಾನ ಸಭೆಯಲ್ಲಿ ಯಾವುದೇ ರೀತಿ ಸಕಾರಾತ್ಮಕ ಸ್ಪಂದನೆ ಸಿಕ್ಕಿರಲಿಲ್ಲ. ಈ ಹಿನ್ನೆಲೆ ಮಾರ್ಚ್ 15 ಮತ್ತು 16 ರಂದು ಸುಮಾರು 10 ಲಕ್ಷ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ)ತಿಳಿಸಿದೆ. ಇದಲ್ಲದೆ, ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಮರುಪರಿಶೀಲಿಸಲು ಒಂದು ವೇಳೆ ಸರ್ಕಾರವು ಒಪ್ಪಿದರೆ ಮುಷ್ಕರವನ್ನು ಮರುಪರಿಶೀಲಿಸುವುದಾಗಿ ಬ್ಯಾಂಕ್ ನೌಕರರ ಸಂಘಟನೆಗಳು ಹೇಳಿವೆ.

ಭಾರತದಲ್ಲಿ ನಾಲ್ಕು ದಿನ ನಿರಂತರ ಬ್ಯಾಂಕ್ ರಜೆ

ಭಾರತದಲ್ಲಿ ನಾಲ್ಕು ದಿನ ನಿರಂತರ ಬ್ಯಾಂಕ್ ರಜೆ

ಮಾರ್ಚ್.15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್.13 ಎರಡನೇ ಶನಿವಾರವಾಗಿದ್ದು, ಮಾರ್ಚ್.14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.

ಬ್ಯಾಂಕಿಂಗ್ ಕಾರ್ಯಗಳಿಗೆ ಸಮಸ್ಯೆ ಆಗುವ ಸಾಧ್ಯತೆ

ಬ್ಯಾಂಕಿಂಗ್ ಕಾರ್ಯಗಳಿಗೆ ಸಮಸ್ಯೆ ಆಗುವ ಸಾಧ್ಯತೆ

ಭಾರತ್ ಬಂದ್ ಅನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸ್ಟೇಟ್ ಬ್ಯಾಂಕಿನ ಎಲ್ಲಾ ಶಾಖೆಗಳು ಮತ್ತು ಕಚೇರಿಗಳಲ್ಲಿ ಸಾಮಾನ್ಯ ಕಾರ್ಯನಿರ್ವಹಣೆಗೆ ವ್ಯವಸ್ಥೆ ಮಾಡಲಾಗಿದೆ. ಅದಾಗ್ಯೂ ಮುಷ್ಕರದಿಂದ ಬ್ಯಾಂಕಿಂಗ್ ಕಾರ್ಯಗಳಿಗೆ ತೊಂದರೆ ಆಗಬಹುದು ಎಂದು ಬ್ಯಾಂಕ್ ತಿಳಿಸಿದೆ.

ಎಸ್ ಬಿಐ ಹೇಳಿಕೆಯಲ್ಲಿ ಏನಿದೆ?

ಎಸ್ ಬಿಐ ಹೇಳಿಕೆಯಲ್ಲಿ ಏನಿದೆ?

"ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) 2021ರ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ ಎಂದು ನಮಗೆ ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಸೂಚಿಸಿದೆ" ಎಂದು ಎಸ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು?

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು?

ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್ ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.

English summary
Bharat Bandh: Across India, Bank Unions Call For Strike on March 15, 16 .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X