Bharat Bandh August 21: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಭಾರತ್ ಬಂದ್‌ಗೆ ಕರೆ- ನಾಳೆ ಏನಿರುತ್ತೆ? ಏನಿರಲ್ಲ?
ದೆಹಲಿ ಆಗಸ್ಟ್ 20: ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ವಿರೋಧಿಸಿ ನಾಳೆ ದೇಶಾದ್ಯಂತ ಬಂದ್ ಕರೆ ನೀಡಲಾಗಿದೆ. ಆಗಸ್ಟ್ 21ರಂದು ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟಿಸಲು ನಿರ್ಧರಿಸಿದೆ. ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅನುಮತಿ ನೀಡಿದೆ. ಇದರ ವಿರುದ್ಧ ನಾಳೆ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.
ಕಳೆದ ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಒಳಗೆ ಉಪ ವರ್ಗಗಳನ್ನು ರಚಿಸಿ ನಿಜವಾಗಿ ಮೀಸಲಾತಿ ಅಗತ್ಯ ಇರುವವರಿಗೆ ಆಧ್ಯತೆ ನೀಡಬೇಕು ಎಂದು ಹೇಳಿದೆ. ಇದರಿಂದಾಗಿ ಈ ತೀರ್ಪಿನ ವಿರುದ್ಧ ನಾಳೆ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ವಿರೋಧಿಸಿ ಮತ್ತು ನ್ಯಾಯಾಲಯದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಭಾರತ್ ಬಂದ್‌ಗೆ ಕರೆ ನೀಡಲಾಗಿದೆ.

ರಾಜಸ್ಥಾನದ ಎಸ್‌ಸಿ/ಎಸ್‌ಟಿ ಗುಂಪುಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.ಅಂದ ಹಾಗೆ ಕರ್ನಾಟಕದಲ್ಲಿ ಈ ಬಂದ್ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದಾಗ್ಯೂ ಮುಜಾಗ್ರತೆ ದೃಷ್ಟಿಯಿಂದ ಪೊಲೀಸ್ ಕಣ್ಗಾವಲು ಇರಿಸಲಾಗಿದೆ. ಹಿಂಸಾಚಾರವನ್ನು ತಪ್ಪಿಸಲು ಪೊಲೀಸರನ್ನು ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗುತ್ತಿದೆ. ಪಶ್ಚಿಮ ಉತ್ತರ ಪ್ರದೇಶವನ್ನು ಹೆಚ್ಚು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿದ್ದು ಪೊಲೀಸ್ ಕಣ್ಗಾವಲಿನಲ್ಲಿ ಇಡಲಾಗಿದೆ.
ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಬಂದ್‌ಗೆ ಸಿದ್ಧತೆ ಮಾಡಿಕೊಳ್ಳವಂತೆ ಸೂಚಿಸಲಾಗಿದೆ. ಉತ್ತಮ ಸಹಕಾರಕ್ಕೆ ಅನುಕೂಲವಾಗುವಂತೆ ಬಂದ್‌ಗೆ ಕರೆ ನೀಡುವ ಗುಂಪುಗಳೊಂದಿಗೆ ಮತ್ತು ಮಾರುಕಟ್ಟೆ ಸಂಘಗಳೊಂದಿಗೆ ಸಭೆಗಳನ್ನು ಆಯೋಜಿಸಲು ನಾವು ನಮ್ಮ ಅಧಿಕಾರಿಗಳನ್ನು ಕೇಳಿದ್ದೇವೆ ಎಂದು ಡಿಜಿಪಿ ಹೇಳಿರುವುದಾಗಿ ಆಂಗ್ಲ ಪತ್ರಿಕೆ ವರದಿ ಮಾಡಿದೆ.
ಭಾರತ್ ಬಂದ್‌ಗೆ ವಿವಿಧ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳ ಬೆಂಬಲ ಸಿಗುವ ನಿರೀಕ್ಷೆಯಿದೆ. ಪಶ್ಚಿಮ ಉತ್ತರ ಪ್ರದೇಶವನ್ನು ವಿಶೇಷವಾಗಿ ಸೂಕ್ಷ್ಮ ಪ್ರದೇಶವೆಮದು ಪರಿಗಣಿಸಲಾಗಿದ್ದು, ಅಲ್ಲಿ ಪೊಲೀಸರನ್ನು ಹೆಚ್ಚಿನ ಅಲರ್ಟ್‌ನಲ್ಲಿ ಇರಿಸಲಾಗಿದೆ.
ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು ಹಿಂಪಡೆಯುವಂತೆ ಒತ್ತಾಯಿಸುವುದು ಭಾರತ್ ಬಂದ್‌ನ ಮುಖ್ಯ ಉದ್ದೇಶವಾಗಿದೆ. ಹಾಗಾದರೆ ನಾಳೆ ಏನೆಲ್ಲಾ ಇರುತ್ತವೆ? ಏನು ಇರುವುದಿಲ್ಲ ಅಂತ ನೋಡುವುದಾದರೆ, ಆಸ್ಪತ್ರೆ, ತುರ್ತು ಅಂಬ್ಯುಲೆನ್ಸ್ ಸೇವೆಗಳು, ಪೊಲೀಸ್ ಸೇವೆಗಳು ಸಕ್ರಿಯವಾಗಿರಲಿವೆ. ಅಗತ್ಯ ಔಷಧಿಗಳನ್ನು ಒದಗಿಸಲು ಫಾರ್ಮಸಿಗಳು ತೆರೆದಿರುತ್ತವೆ. ಜೊತೆಗೆ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಪಶ್ಚಿಮ ಉತ್ತರ ಪ್ರದೇಶವನ್ನು ವಿಶೇಷವಾಗಿ ಸೂಕ್ಷ್ಮವೆಂದು ಪರಿಗಣಿಸಲಾಗಿದೆ. ಈ ಕಾರಣದಿಂದಾಗಿ ಇಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.












Click it and Unblock the Notifications