ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Bharat Bandh: ಸಾರ್ವತ್ರಿಕ ಮುಷ್ಕರಕ್ಕೆ ಎಡಪಕ್ಷಗಳ ಬೆಂಬಲ, ಬೇಡಿಕೆ ಪಟ್ಟಿ ಹೀಗಿದೆ

|
Google Oneindia Kannada News

ಭಾರತ ಉಳಿಸಿ-ಜನತೆಯನ್ನು ರಕ್ಷಿಸಿ! ಕಾರ್ಪೊರೇಟ್ ಕೃಷಿ ಕಾಯ್ದೆಗಳನ್ನು ವಾಪಾಸು ಪಡೆಯಿರಿ. ರೈತರು ಹಾಗೂ ಕೂಲಿಕಾರರನ್ನು ರಕ್ಷಿಸಿರಿ! ಎಂಬ ಘೋಷಣೆಗಳಡಿಯಲ್ಲಿ ಮಾರ್ಚ್‍ 28,29-2022 ರಂದು ಎರಡು ದಿನಗಳ ಕಾಲ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಾಗೂ ಗ್ರಾಮೀಣ ಪ್ರತಿಭಟನೆಗೆ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿವೆ.

ಇದೊಂದು ರೈತ-ಕಾರ್ಮಿಕರು, ವಿದ್ಯಾರ್ಥಿ, ಯುವಜನರು ಮಹಿಳೆಯರು ಮತ್ತು ದಲಿತರು ಒಟ್ಟಾಗಿ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿ ಒಕ್ಕೂಟ ಹಾಗೂ ರಾಜ್ಯ ಸರಕಾರಗಳ ವಿರುದ್ದ ನಡೆಸುತ್ತಿರುವ ಒಂದು ಐತಿಹಾಸಿಕ ಹೋರಾಟವಾಗಿದೆ. ಇದರಲ್ಲಿ ದೇಶದ ಅತಿ ದೊಡ್ಡ ಜನ ಸಮುದಾಯ ಭಾಗಿಯಾಗಲಿದೆ. ಕರ್ನಾಟಕದಲ್ಲಿ ಈ ಚಳುವಳಿಯನ್ನು ಯಶಸ್ವಿಗೊಳಿಸಲು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ- ಕರ್ನಾಟಕ ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮುಂದಾಗಿವೆ.

ತಮಿಳುನಾಡಿನಲ್ಲಿ ತಟ್ಟಿದ ಭಾರತ್ ಬಂದ್ ಬಿಸಿ: ವಿದ್ಯಾರ್ಥಿಗಳು, ಪ್ರಯಾಣಿಕರ ಪರದಾಟತಮಿಳುನಾಡಿನಲ್ಲಿ ತಟ್ಟಿದ ಭಾರತ್ ಬಂದ್ ಬಿಸಿ: ವಿದ್ಯಾರ್ಥಿಗಳು, ಪ್ರಯಾಣಿಕರ ಪರದಾಟ

ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಾಗೂ ಗ್ರಾಮೀಣ ಪ್ರತಿಭಟನೆಗೆ ಕರ್ನಾಟಕ ರಾಜ್ಯದ ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಏಳು ಪಕ್ಷಗಳು ತಮ್ಮ ಸಂಪೂರ್ಣ ಬೆಂಬಲವನ್ನು ಘೋಷಿಸಿವೆ ಮತ್ತು ಸದರಿ ಮುಷ್ಕರ ಹಾಗೂ ಗ್ರಾಮೀಣ ಪ್ರತಿಭಟನೆಗಳಲ್ಲಿ ತಮ್ಮ ಪಕ್ಷಗಳ ಕಾರ್ಯಕರ್ತರು ಹಾಗೂ ಸದಸ್ಯರು ಬೆಂಬಲಿಗರು ಪಾಲ್ಗೊಂಡು ಯಶಸ್ವಿಗೊಳಿಸಲು ಕರೆ ನೀಡಿವೆ.

Bharat Bandh: Left Parties Extent Support to Nationwide Strike Here Are the Demands

ಹಕ್ಕೊತ್ತಾಯಗಳು

* ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ಸು ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆರೂಪಿಸಬೇಕು ಹಾಗೂ ರೈತರು ಹಾಗೂ ಕೂಲಿಕಾರರ ಮತ್ತು ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಸಂಘಗಳ ಎಲ್ಲ ಸಾಲಗಳನ್ನು ಮನ್ನ ಮಾಡಬೇಕು. ಅದೇ ರೀತಿ, ಪ್ರಕೃತಿ ವಿಕೋಪಗಳಿಂದಾಗುವ ನಷ್ಠದಿಂದಾಗಿ ಉಂಟಾಗುವ ಸಾಲವನ್ನು ಮನ್ನಾ ಮಾಡಲು ಋಣ ಮುಕ್ತ ಕಾಯ್ದೆಯನ್ನು ಜಾರಿಗೆ ತರಬೇಕು.

* ರಾಜ್ಯ ಸರ್ಕಾರ ರೈತ ವಿರೋಧಿ ಕಾಯ್ದೆಗಳಾದ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ-2020, ಎಪಿಎಂಸಿ ತಿದ್ದುಪಡಿ ಕಾಯ್ದೆ-2020 ಹಾಗೂ ಜಾನುವಾರು ಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ-2020 ಗಳನ್ನು ಮತ್ತು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯನ್ನು ವಾಪಾಸು ಪಡೆಯಬೇಕು. ಬೀಳು ಭೂಮಿ ಅಭಿವೃದ್ದಿ ಹೆಸರಿನಲ್ಲಿ ಕಾರ್ಪೊರೇಟ್ ಗುತ್ತಿಗೆ ಕೃಷಿಗೆ ಕ್ರಮವಹಿಸುವುದನ್ನು ನಿಲ್ಲಿಸಬೇಕು. ಬಡವರ ಬಗರ್ ಹುಕುಂ ಸಾಗುವಳಿ ಹಾಗೂ ಅರಣ್ಯ ಭೂಮಿ ಹಕ್ಕುಪತ್ರಗಳನ್ನು ವಿತರಿಸಬೇಕು.

Bharat Bandh: Left Parties Extent Support to Nationwide Strike Here Are the Demands

* ಕಾರ್ಪೊರೇಟ್ ಬಂಡವಾಳಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು.

* ದೇಶ ಹಾಗೂ ರಾಜ್ಯದಲ್ಲಿ ಸೌಹಾರ್ದತೆ ಸಂರಕ್ಷಣೆಗಾಗಿ ಅಗತ್ಯ ಕ್ರಮವಹಿಸಬೇಕು. ಸರಕಾರಗಳೇ ಕಾಯ್ದೆಗಳ ಮೂಲಕ ಹಾಗೂ ನೆರವುಗಳ ಮೂಲಕ ಕೋಮು ಆಧಾರದಲ್ಲಿ ತಾರತಮ್ಯ ಎಸಗುವುದನ್ನು ನಿಲ್ಲಿಸಬೇಕು. ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಲ್ಲಿ ವಿದ್ಯಾರ್ಥಿನಿಯರ ಶಿಕ್ಷಣ ಮೊಟಕುಗೊಳ್ಳದಂತೆ ಕ್ರಮವಹಿಸಬೇಕು. ಹಬ್ಬಗಳು ಹಾಗೂ ಜಾತ್ರೆಗಳ ಸಂದರ್ಭದಲ್ಲಿ ವ್ಯಾಪಾರದಲ್ಲಿ ತೊಡಗಲು ಅಲ್ಪ ಸಂಖ್ಯಾತರಿಗೆ ಅವಕಾಶ ನೀಡದೇ ತಾರತಮ್ಯ ಎಸಗುವುದನ್ನು ತಡೆಯಬೇಕು.

* ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಬೀಜ, ಕ್ರಿಮಿನಾಶಕ, ರಸಾಯನಿಕ ಗೊಬ್ಬರ ಹಾಗೂ ಅಗತ್ಯ ವಸ್ತುಗಳ ಮತ್ತು ಔಷಧಿ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯ ಅಬಕಾರಿ ತೆರಿಗೆಯನ್ನು ಕಡಿಮೆ ಮಾಡಬೇಕು.

Bharat Bandh: Left Parties Extent Support to Nationwide Strike Here Are the Demands

* ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ ರೂ.7,500 ನೇರ ನಗದು ವರ್ಗಾವಣೆ ಮಾಡಬೇಕು ಹಾಗೂ ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಆಹಾರ ಧಾನ್ಯಗಳನ್ನು ನೀಡಬೇಕು

* ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು.

* ಅಸಂಘಟಿತ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆ ಒದಗಿಸಬೇಕು. ಕೋವಿಡ್ ಲಾಕ್ಡೌನ್ ಸಂಕಷ್ಟಕ್ಕೆ ಒಳಗಾದ ಎಲ್ಲರಿಗೆ ಪರಿಹಾರ ಒದಗಿಸಬೇಕು.

* ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೆಲಸದ ದಿನಗಳನ್ನು 200 ದಿನಗಳಿಗೆ ಮತ್ತು ಕೂಲಿಯನ್ನು 750 ರೂಗಳಿಗೆ ಹೆಚ್ಚಿಸಬೇಕು. ಹೆಚ್ಚಿನ ಅನುದಾನ ಬಜೆಟ್‌ನಲ್ಲಿ ನೀಡಬೇಕು.

* ಪರಿಶಿಷ್ಠ ಜಾತಿ ಹಾಗೂ ಪಂಗಡಗಳ ಜನ ಸಂಖ್ಯೆಗನುಗುಣವಾಗಿ ಅನುದಾನ ಒದಗಿಸುವ ಉಪಯೋಜನೆಗಳ ಕಾಯ್ದೆಯನ್ನು ಕೇಂದ್ರ ಸರಕಾರ ಅಂಗೀಕರಿಸಿ ಜಾರಿಗೊಳಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ದೌರ್ಜನ್ಯ ತಡೆ ತಿದ್ದುಪಡಿ ಕಾಯ್ಯೆಯನ್ನು ಅಂಗೀಕರಿಸಬೇಕು. ಖಾಸಗೀರಂಗಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು.

Bharat Bandh: Left Parties Extent Support to Nationwide Strike Here Are the Demands

* ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಖಾಲಿ ಇರುವ ಎಲ್ಲ ಉದ್ಯೋಗಗಳನ್ನು ಭರ್ತಿ ಮಾಡಬೇಕು. ಅಲ್ಲಿಯವರೆಗೆ ವಿದ್ಯಾವಂತ ಎಲ್ಲ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ನೀಡಬೇಕು.

* ಕೋವಿಡ್‌ ಎದುರಿಸಲು ಕೆಲಸ ಮಾಡುತ್ತಿರುವ ಮುಂಚೂಣಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಮತ್ತು ವಿಮಾ ಸೌಲಭ್ಯಒದಗಿಸಬೇಕು.

* ಅಂಗನವಾಡಿ, ಆಶಾ, ಬಿಸಿಯೂಟ ಮತ್ತು ಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಟ ವೇತನ ಮತ್ತು ಸಾಮಾಜಿಕ ಭದ್ರತೆ ಜಾರಿ ಮಾಡಬೇಕು.

Recommended Video

ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿರುವ ಸ್ನೇಹಿತರು! | K L Rahul | Hardik Pandya | Oneindia Kannada

* ರಾಷ್ಟ್ರೀಯ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತುಇತರೆ ನಿರ್ಣಾಯಕ ಸಾರ್ವಜನಿಕ ಸೇವೆಗಳಿಗೆ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಬೇಕು.
* ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್.ಪಿ.ಎಸ್.) ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಪುನರ್ ಸ್ಥಾಪಿಸಬೇಕು.
* ರೂ.26 ಸಾವಿರ ಸಮಾನ ಕನಿಷ್ಟ ವೇತನಕ್ಕಾಗಿ, ಸಂಘ ಮಾನ್ಯತೆ, ಗುತ್ತಿಗೆ ಮುಂತಾದ ಖಾಯಂಯೇತರರ ಖಾಯಂಗೆ, ಅಸಂಘಟಿತರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಬೇಕು.

English summary
Bharat Bandh: A 48-hour Bharat Bandh or a nationwide strike called by various trade unions, including banking staff, to protest government policies began in several states on Monday.Here are the demands.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X