ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Agnipath Bharat Bandh Live: ರೈಲ್ವೆ ನಿಲ್ದಾಣಗಳಲ್ಲಿ ಬಿಗಿ ಭದ್ರತೆ

|
Google Oneindia Kannada News

ನವದೆಹಲಿ, ಜೂನ್ 20: ಭಾರತದ ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಹೊಸದಾಗಿ ಘೋಷಿಸಿದ ಅಗ್ನಿಪಥ್ ಯೋಜನೆಯ ವಿರುದ್ಧ ದೇಶದ ಯುವ ಸಮುದಾಯ ಕೆರಳಿ ನಿಂತಿದೆ. ಕೇಂದ್ರ ಸರ್ಕಾರದ ಯೋಜನೆ ವಿರುದ್ಧ ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಲಾಗಿದೆ.

ಕಳೆದ ಜೂನ್ 16 ರಿಂದ 18 ರವರೆಗೆ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿದ್ದಕ್ಕಾಗಿ ಬಿಹಾರ ಪೊಲೀಸರು 145 ಮಂದಿ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 804 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಅಗ್ನಿಪಥ್‌ಗೆ ಸಂಬಂಧಿಸಿದಂತೆ ಸೋಮವಾರ ಭಾರತ್ ಬಂದ್‌ಗೆ ಕರೆ ನೀಡಿರುವುದರ ಮಧ್ಯೆ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಹೈ ಅಲರ್ಟ್ ಘೋಷಿಸಿದೆ. ಆರ್‌ಪಿಎಫ್‌ನ ಹಿರಿಯ ಅಧಿಕಾರಿಗಳು ಆಂತರಿಕ ಸಂವಹನ ಹೇಳಿಕೆಯನ್ನು ಹೊರಡಿಸಿದ್ದು, ಗಲಭೆಕೋರರನ್ನು ಕಟ್ಟುನಿಟ್ಟಾಗಿ ಎದುರಿಸಲು ಎಲ್ಲಾ ಘಟಕಗಳಿಗೆ ಸೂಚಿಸಲಾಗಿದೆ. ಗಲಭೆಕೋರರ ವಿರುದ್ಧ ಐಪಿಸಿಯ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

Bharat Bandh Live Updates and Latest News Against Agnipath Scheme in Kannada

ದೆಹಲಿ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಎಂಟಕ್ಕೂ ಹೆಚ್ಚು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮತ್ತು ಭಾರತ್ ಬಂದ್ ಕುರಿತು ಕ್ಷಣಕ್ಷಣದ ಮಾಹಿತಿಗಾಗಿ ಮುಂದೆ ಓದಿ.

English summary
Agnipath Bharat Bandh live updates in Kannada: A nation wide call for Bharat Bandh today has been announced against the Centre's 'Agnipath' scheme. Catch live updates, latest news in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X