ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ಬಂದ್‌ಗೆ ನೀರಸ ಪ್ರತಿಕ್ರಿಯೆ, ಅಲ್ಲಲ್ಲಿ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಜನವರಿ 08 : ದೇಶದ 10 ಕಾರ್ಮಿಕ ಸಂಘಟನೆಗಳು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಭಾರತ್ ಬಂದ್‌ಗೆ ಕರೆ ನೀಡಿವೆ. ಕರ್ನಾಟಕದಲ್ಲಿಯೂ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲವನ್ನು ಸೂಚಿಸಿವೆ.

ಜನವರಿ 8ರ ಬುಧವಾರ ಭಾರತ್ ಬಂದ್ಗೆ ಕರೆ ನೀಡಲಾಗಿದೆ. ವಿವಿಧ ಕಾರ್ಮಿಕ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರ ಭದ್ರತೆಯನ್ನು ಸಹ ಹೆಚ್ಚಿಸಲಾಗಿದೆ.

ಜನವರಿ 8ರ ಭಾರತ್ ಬಂದ್; ಯಾರ ಬೆಂಬಲವಿಲ್ಲಜನವರಿ 8ರ ಭಾರತ್ ಬಂದ್; ಯಾರ ಬೆಂಬಲವಿಲ್ಲ

ಬ್ಯಾಂಕ್ ಉದ್ಯೋಗಿಗಳ ಸಂಘ ಬಂದ್‌ಗೆ ಬೆಂಬಲ ನೀಡಿದೆ. ಎಸ್‌ಬಿಐ ಹೊರತುಪಡಿಸಿ ಉಳಿದ ಎಲ್ಲಾ ಬ್ಯಾಂಕ್‌ಗಳ ವಹಿವಾಟುಗಳು ಇಂದು ಸ್ಥಗಿತಗೊಳ್ಳಲಿದೆ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ವರ್ಕರ್ಸ್ ಯೂನಿಯನ್ ಬಂದ್‌ಗೆ ಬೆಂಬಲ ನೀಡಿದೆ. ಆದರೆ, ಬಸ್ ಸೇವೆ ಎಂದಿನಂತೆ ಇರಲಿದೆ.

ಭಾರತ್ ಬಂದ್: ನಿಮಗೆ ತಿಳಿದಿರಬೇಕಾದ 5 ಸಂಗತಿಗಳುಭಾರತ್ ಬಂದ್: ನಿಮಗೆ ತಿಳಿದಿರಬೇಕಾದ 5 ಸಂಗತಿಗಳು

Bharat bandh

ಪೆಟ್ರೋಲ್ ಬಂಕ್, ಹೋಟೆಲ್, ಶಾಲಾ-ಕಾಲೇಜುಗಳು ಮುಚ್ಚುವುದಿಲ್ಲ. ಒಂದು ವೇಳೆ ಪ್ರತಿಭಟನೆ ವೇಳೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದರೆ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಬಂದ್ ಕುರಿತು ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ...

bus

ಭಾರತ್ ಬಂದ್, ಯಾವ ಸೇವೆ ಲಭ್ಯ? ಯಾವ್ದು ಅಲಭ್ಯ?ಭಾರತ್ ಬಂದ್, ಯಾವ ಸೇವೆ ಲಭ್ಯ? ಯಾವ್ದು ಅಲಭ್ಯ?

Newest FirstOldest First
2:49 PM, 8 Jan

ಭಾರತ್ ಬಂದ್ ಪ್ರಯುಕ್ತ ಪಂಜಾಬ್‌ನಲ್ಲಿ ಪ್ರತಿಭಟನೆ
1:29 PM, 8 Jan

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಕಾರ್ಮಿಕರ ಹೋರಾಟ
12:32 PM, 8 Jan

ವಿವಿಧ ಕಾರ್ಮಿಕ ಸಂಘಟನೆಗಳು ಫ್ರೀಡಂಗೆ ಆಗಮಿಸಿದ್ದು ಕೆಲವೇ ಕ್ಷಣಗಳಲ್ಲಿ ಪ್ರತಿಭಟನೆ ಆರಂಭವಾಗಲಿದೆ.
11:56 AM, 8 Jan

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮೆಜೆಸ್ಟಿಕ್‌ನಲ್ಲಿ ಬಿಎಂಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
11:52 AM, 8 Jan

ನರೇಂದ್ರ ಮೋದಿ ಸರ್ಕಾರ ಜನವಿರೋಧಿಯಾಗಿದೆ ಎಂದು ಆರೋಪಿಸಿ ವಾಟಾಳ್ ನಾಗರಾಜ್ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿದರು.
11:51 AM, 8 Jan

ಭಾರತ್ ಬಂದ್ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಆಗಮಿಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್
11:27 AM, 8 Jan

ಭಾರತ್ ಬಂದ್ ಬೆಂಬಲಿಸಿ ಕೇರಳದ ತಿರುವನಂತಪುರಂನಲ್ಲಿ ಪ್ರತಿಭಟನಾ ಜಾಥಾ ನಡೆಸಲಾಗುತ್ತಿದೆ.
Advertisement
10:43 AM, 8 Jan

ಮಡಿಕೇರಿ ನಗರದ ಹೊರವಲಯದ ಚೈನ್ ಗೇಟ್ ಬಳಿ ಸರ್ಕಾರಿ ಬಸ್ಸಿಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮಡಿಕೇರಿಯಿಂದ ಮೈಸೂರಿಗೆ ಹೋಗುತ್ತಿದ್ದ ಕಲ್ಲು ತೂರಾಟ ನಡೆಸಲಾಗಿದ್ದು, ಮುಂಭಾಗ ಜಖಂಗೊಂಡಿದೆ. ಬಸ್ ಮಂಡ್ಯದ ಪಾಂಡವಪುರ ವಿಭಾಗಕ್ಕೆ ಸೇರಿದ್ದು.
10:18 AM, 8 Jan

"ನರೇಂದ್ರ ಮೋದಿ, ಅಮಿತ್ ಶಾ ಸರ್ಕಾರ ಜನವಿರೋಧಿ. ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಭಾರತ್ ಬಂದ್‌ಗೆ ಕರೆ ನೀಡಲಾಗಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
9:50 AM, 8 Jan

ಬೆಂಗಳೂರಿನ ಪೀಣ್ಯದಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನಾ ಜಾಥಾ ಆರಂಭಿಸಲು ಮುಂದಾದರು. ತಕ್ಷಣ ಪೊಲೀಸರು ಅದನ್ನು ತಡೆದರು.
9:37 AM, 8 Jan

ಕಲ್ಲು ತೂರಾಟದ ಭಯದಲ್ಲಿ ಸಿಲಿಗುರಿಯಲ್ಲಿ ಬಸ್ ಚಾಲಕ ಹೆಲ್ಮೆಟ್ ಧರಿಸಿದ್ದಾನೆ
9:35 AM, 8 Jan

ಕಲಬುರಗಿಯಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದು, ತಾತ್ಕಾಲಿಕವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
Advertisement
8:23 AM, 8 Jan

ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ಚಿತ್ರದುರ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಸರ್ಕಾರಿ, ಖಾಸಗಿ ಬಸ್, ಆಟೋಗಳ ಸಂಚಾರ ಎಂದಿನಂತೆ ಇದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಚಿತ್ರದುರ್ಗ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
8:21 AM, 8 Jan

ಭಾರತ್ ಬಂದ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಟ್ವೀಟ್
8:05 AM, 8 Jan

ಭಾರತ್ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ ಕೊಟ್ಟಿಲ್ಲ. ಚಿತ್ರಮಂದಿರಗಳು ಎಂದಿನಂತೆ ತೆರೆದಿರುತ್ತದೆ. ಚಿತ್ರ ಪ್ರದರ್ಶನ ನಡೆಯಲಿದೆ ಎಂದು ಸ್ಪಷ್ಟಪಡಿಸಲಾಗಿದೆ.
8:02 AM, 8 Jan

ಪಶ್ಚಿಮ ಬಂಗಾಳದಲ್ಲಿ ರೈಲುಗಳನ್ನು ತಡೆದು ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
7:45 AM, 8 Jan

ಮೈಸೂರಿನಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಮೀಣ ಪ್ರದೇಶಕ್ಕೆ ಸಂಚಾರ ನಡೆಸುವ ಬಸ್‌ಗಳು ನಗರದಿಂದ ಹೊರಟಿವೆ. ಅಂಗಡಿಗಳು ಸಹ ತೆರೆದಿವೆ.
7:41 AM, 8 Jan

ದಾವಣಗೆರೆ ನಗರದಲ್ಲಿ ಬೆಳಗ್ಗೆ ಜನಜೀವನ ಎಂದಿನಂತೆ ಇದೆ. ಬಸ್, ಆಟೋಗಳು ಸಂಚಾರ ನಡೆಸುತ್ತಿವೆ. ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿದ್ದು, 11ಗಂಟೆ ಬಳಿಕ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.
7:38 AM, 8 Jan

"ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿರುವ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಲ್ಲಾ ನಗರಗಳು, ಅದರಲ್ಲೂ ಬೆಂಗಳೂರಿನಲ್ಲಿ ಜನಜೀವನ ಎಂದಿನಂತೆ ಸಾಮಾನ್ಯವಾಗಿರುತ್ತದೆ ಮತ್ತು ಜನರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇರುವುದಿಲ್ಲ. ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಸಾರಿಗೆ ಕೂಡ ಸಾಮಾನ್ಯವಾಗಿರುತ್ತದೆ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
7:34 AM, 8 Jan

ಬೆಂಗಳೂರಿನಲ್ಲಿ ಪ್ರತಿಭಟನಾ ಜಾಥಾ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಸೂಚನೆ ನೀಡಲಾಗಿದೆ.
7:31 AM, 8 Jan

ಬೆಂಗಳೂರಿನ ಕೆ. ಆರ್. ಮಾರುಕಟ್ಟೆಯಲ್ಲಿ ಬೆಳಗ್ಗೆ ಹೂವು, ಹಣ್ಣುಗಳ ಖರೀದಿ ಎಂದಿನಂತೆ ಸಾಗಿದೆ.
6:57 AM, 8 Jan

ಬೆಂಗಳೂರಿನಲ್ಲಿ ಬೆಳಗ್ಗೆ ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇದೆ. ಆಟೋಗಳು ಸಹ ಸಂಚಾರ ನಡೆಸುತ್ತಿವೆ.
6:35 AM, 8 Jan

ವಿವಿಧ ಆಟೋ ಚಾಲಕರ ಸಂಘ ಬಂದ್‌ಗೆ ಬೆಂಬಲ ನೀಡಿವೆ
6:22 AM, 8 Jan

ಕೋಲಾರದಲ್ಲಿ ಹಲವು ಕಾರ್ಮಿಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಇದರಿಂದಾಗಿ ಅಂಗಡಿ-ಮುಂಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದೆ.
6:15 AM, 8 Jan

"ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರಿಗೆ ಇಂದು ರಜೆ ಕಡಿತಗೊಳಿಸಲಾಗಿದೆ. ವಾರದ ರಜೆ ಹೊರತು ಪಡಿಸಿ ಬೇರೆ ಯಾವುದೇ ರಜೆ ನೀಡಿಲ್ಲ. ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರಾದರೆ ಎಸ್ಮಾ ಕಾಯ್ದೆ ಅನ್ವಯ ಕ್ರಮವನ್ನು ಕೈಗೊಳ್ಳಲಾಗುತ್ತದೆ" ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಸಿಖಾ ಹೇಳಿಕೆ
6:13 AM, 8 Jan

ಪೆಟ್ರೋಲ್ ಬಂಕ್ ತೆರೆದಿರುತ್ತದೆ. ಹೋಟೆಲ್‌ಗಳು ಬಂದ್‌ಗೆ ಬೆಂಬಲ ನೀಡಿಲ್ಲ. ಓಲಾ, ಊಬರ್ ಸೇರಿದಂತೆ ಕ್ಯಾಬ್‌ಗಳ ಸಂಚಾರ ಎಂದಿನಂತೆ ಇರಲಿದೆ.
6:11 AM, 8 Jan

ಬೆಂಗಳೂರು ನಗರದಲ್ಲಿ ಬಿಎಂಟಿಸಿ, ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಿಲ್ಲ. ಕೆಲವು ಆಟೋ ಚಾಲಕರ ಸಂಘ ಬೆಂಬಲ ನೀಡಿದ್ದು ಆಟೋ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.
6:10 AM, 8 Jan

ಕರ್ನಾಟಕದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಖಾಸಗಿ ಶಾಲೆಗಳಿಗೆ ರಜೆ ನೀಡುವ ತೀರ್ಮಾನವನ್ನು ಶಾಲೆಗಳು ತೆಗೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.
6:01 AM, 8 Jan

ಕರ್ನಾಟಕದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಪೊಲೀಸರ ಭದ್ರತೆಯನ್ನು ಸಹ ಹೆಚ್ಚಿಸಲಾಗಿದೆ.
6:00 AM, 8 Jan

ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ನಲ್ಲಿ ಸರ್ಕಾರಿ ಸ್ವಾಮ್ಯದ ಉದ್ಯಮ, ಇಲಾಖೆಗಳ ನೌಕರರು ಪಾಲ್ಗೊಳ್ಳಬಾರದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
READ MORE

English summary
Bharat Bandh Live Updates in Kannada: Central traders unions and bank unions have called for Bharat Bandh on Jan 8th 2020. Check out the latest updates on the Bharat bandh and its impact on regular life in the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X