ಇಂದು ಭಾರತ್ ಬಂದ್: ಉತ್ತರ ಭಾರತದಲ್ಲಿ ಪ್ರಕ್ಷುಬ್ದ ವಾತಾವರಣ

ಲುಧಿಯಾನಾ/ ಪಾಟ್ನಾ/ಆಗ್ರಾ, ಏಪ್ರಿಲ್ 02: ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದಂತೆ ಇತ್ತಿಚೆಗೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ವಿರೋಧಿಸಿ ದಲಿತ ಸಂಘಟನೆಗಳು ಇಂದು(ಏ. 02) ಕರೆ ನೀಡಿರುವ 'ಭಾರತ್ ಬಂದ್' ಉತ್ತರ ಭಾರತದಾದ್ಯಂತ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

1989 ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಲ್ಲಿ ತಿದ್ದುಪಡಿ ತರುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಬಂದ್ ನಡೆಯುತ್ತಿದ್ದು, ಪಂಜಾಬಿನ ಲುಧಿಯಾನಾ, ಬಿಹಾರದ ಪಾಟ್ನಾ, ಉತ್ತರ ಪ್ರದೇಶದ ಆಗ್ರಾ, ಮಧ್ಯಪ್ರದೇಶ, ಜಾರ್ಖಂಡ್, ರಾಜಸ್ಥಾನದ ಹಲವು ಸ್ಥಳಗಳಲ್ಲಿ ಗಲಭೆ ಎಬ್ಬಿಸಿವೆ.

ಈ ಕಾಯ್ದೆಯನ್ವಯ ಎಸ್ಸಿ ಮತ್ತು ಎಸ್ಟಿ ಪಂಗಡಗಳ ಮೇಲೆ ಯಾವುದೇ ರೀತಿಯ ದೌರ್ಜನ್ಯದ ದೂರು ಬಂದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಈ ಕಾಯ್ದೆ ದುರುಪಯೋಗವಾಗುತ್ತಿರುವುದನ್ನು ತಪ್ಪಿಸುವ ಸಲುವಾಗಿ ಸುಪ್ರೀಂ ಕೋರ್ಟ್, ಯಾವುದೇ ದೂರು ಬಂದರೂ ಪ್ರಾಥಮಿಕ ಡಿಎಸ್ ಪಿ ತನಿಖೆಯ ನಂತರವೇ ಕ್ರಮ ಕೈಗೊಳ್ಳುವಂತೆ ತೀರ್ಪು ನೀಡಿತ್ತು.

Bharat Bandh: Row over SC/ST Act disrupts normal life in North India

ಈ ತೀರ್ಪಿನಿಂದ ಎಸ್ಟಿ, ಎಸ್ಟಿಗಳ ಹಕ್ಕನ್ನು ಕಸಿದಂತಾಗುತ್ತದೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತವೆ ಎಂದು ದೂರಿ ವಿವಿಧ ದಲಿತಪರ ಸಂಘಟನೆಗಳು ಏ.2 ರಂದು ಭಾರತ್ ಬಂದ್ ಗೆ ಕರೆ ನೀಡಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+