Breaking News: 12 ರಿಂದ 18 ವರ್ಷದವರಿಗೆ ಕೊವ್ಯಾಕ್ಸಿನ್ ನೀಡಲು DCGI ಅನುಮೋದನೆ

ನವದೆಹಲಿ, ಡಿಸೆಂಬರ್ 25: ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯನ್ನು 12 ಮೇಲ್ಪಟ್ಟವರಿಗೆ ನೀಡಲು ಭಾರತೀಯ ಔಷಧೀಯ ನಿಯಂತ್ರಣ ಪ್ರಾಧಿಕಾರ(DCGI)ದಿಂದ ಅನುಮೋದನೆ ಪಡದುಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದೇಶದಲ್ಲಿ 12 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನವರ ಮೇಲೆ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ ನೀಡಿದೆ. ಭಾರತ್ ಬಯೋಟೆಕ್ ಸಂಸ್ಥೆಯು ಈ ಮೊದಲು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡುವುದಕ್ಕೆ ಸಂಬಂಧಿಸಿದ ವೈದ್ಯಕೀಯ ಪ್ರಯೋಗಗಳ ಅಂಕಿ-ಅಂಶಗಳನ್ನು ಸೆಂಟ್ರಲ್ ಡ್ರಗ್ ಸ್ಟ್ಯಾಂಡರ್ಡ್ ಕಂಟ್ರೋಲ್ ಅರ್ಗನೈಸೆಷನ್(CDSCO)ಗೆ ಸಲ್ಲಿಸಲಾಗಿತ್ತು.

ಭಾರತ್ ಬಯೋಟೆಕ್ ಸಂಸ್ಥೆಯು ಸಲ್ಲಿಸಿದ ವೈದ್ಯಕೀಯ ಪ್ರಯೋಗಗಳ ಅಂಕಿ-ಅಂಶವನ್ನು CDSCO ಪರಿಶೀಲಿಸಿದೆ. ತದನಂತರದಲ್ಲಿ ವಿಷಯ ತಜ್ಞರ ಸಮಿತಿಗೆ ಸಕಾರಾತ್ಮಕ ಶಿಫಾರಸ್ಸುಗಳನ್ನು ನೀಡಿರುವ ಬೆನ್ನಲ್ಲೇ ಅನುಮೋದನೆ ಲಭಿಸಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆಯು ತಿಳಿಸಿದೆ ಎಂದು ಎಎನ್ಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ.

Bharat Biotech received approval from DCGI for emergency use of its vaccine for aged between 12-18

ನವೆಂಬರ್ 3ರಂದು ಕೊವ್ಯಾಕ್ಸಿನ್ ಲಸಿಕೆ ಬಳಕೆಗೆ WHO ಅನುಮೋದನೆ:
ನವೆಂಬರ್ 3ರ ಬುಧವಾರ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಅಂತಿಮ ಮೌಲ್ಯಮಾಪನ ಪ್ರಕ್ರಿಯೆ ನಡೆಸಿತು. ಈ ಸಭೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದಿಸುವ ಪಟ್ಟಿಗೆ ಸೇರಿಸುವಂತೆ ವಿಶ್ವ ಆರೋಗ್ಯ ಸಂಸ್ಥೆಗೆ ಶಿಫಾರಸ್ಸು ಕಳುಹಿಸಲಾಯಿತು. ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಮೇರೆಗೆ ಕೊವ್ಯಾಕ್ಸಿನ್ ಲಸಿಕೆಗೆ WHO ಅನುಮೋದನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+