Breaking News: ಭಾರತದ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ WHO ಅನುಮೋದನೆ

ನವದೆಹಲಿ, ನವೆಂಬರ್ 3: ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಬುಧವಾರ ಅನುಮೋದನೆ ನೀಡಿದೆ. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸು ಅನ್ವಯ ಜಾಗತಿಕ ಸಂಸ್ಥೆಯು ಈ ನಿರ್ಧಾರ ತೆಗೆದುಕೊಂಡಿದೆ.

ನವೆಂಬರ್ 3ರ ಬುಧವಾರ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಅಂತಿಮ ಮೌಲ್ಯಮಾಪನ ಪ್ರಕ್ರಿಯೆ ನಡೆಸಿತು. ಈ ಸಭೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದಿಸುವ ಪಟ್ಟಿಗೆ ಸೇರಿಸುವಂತೆ ವಿಶ್ವ ಆರೋಗ್ಯ ಸಂಸ್ಥೆಗೆ ಶಿಫಾರಸ್ಸು ಕಳುಹಿಸಲಾಯಿತು. ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸಿನ ಮೇರೆಗೆ ಕೊವ್ಯಾಕ್ಸಿನ್ ಲಸಿಕೆಗೆ WHO ಅನುಮೋದನೆ ನೀಡಿದೆ.

ಭಾರತದಲ್ಲಿ ಉತ್ಪಾದಿಸುವ ಎರಡು ಕೊರೊನಾವೈರಸ್ ಲಸಿಕೆಗಳ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದೆ. ಈ ಮೊದಲು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಚ್ರಾಜೆನಿಕಾ ಸಂಸ್ಥೆಗಳು ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುವ ಕೊವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿತ್ತು. ಇದೀಗ ಅದೇ ಪಟ್ಟಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯೂ ಸಹ ಸೇರ್ಪಡೆಯಾಗಿದೆ.

ಕೊವ್ಯಾಕ್ಸಿನ್ ಲಸಿಕೆ ಪರಿಣಾಮ ಎಷ್ಟು?

ಕೊವ್ಯಾಕ್ಸಿನ್ ಲಸಿಕೆ ಪರಿಣಾಮ ಎಷ್ಟು?

ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯು ಕೊರೊನಾವೈರಸ್ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿಯಾಗಿದೆ. ಅಲ್ಲದೇ ಕೊವಿಡ್-19 ರೂಪಾಂತರ ಡೆಲ್ಟಾ ವೈರಸ್ ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿಯಾಗಿದೆ. ಜೂನ್ ತಿಂಗಳಿನಲ್ಲಿ 3ನೇ ಹಂತದ ವೈದ್ಯಕೀಯ ಪ್ರಯೋಗಗಳಿಗೆ ಸಂಬಂಧಿಸಿದಂತೆ ಅಂತಿಮ ವಿಶ್ಲೇಷಣೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಭಾರತ್ ಬಯೋಟೆಕ್ ಕಂಪನಿ ಹೇಳಿದೆ.

ಕೊವ್ಯಾಕ್ಸಿನ್ ಲಸಿಕೆ ಅನುಮೋದನೆ ಇತಿಹಾಸ

ಕೊವ್ಯಾಕ್ಸಿನ್ ಲಸಿಕೆ ಅನುಮೋದನೆ ಇತಿಹಾಸ

ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಮೊದಲು ಭಾರತದಲ್ಲಿ ವಿತರಿಸುವುದಕ್ಕೆ ಸ್ಥಳೀಯ ವೈದ್ಯಕೀಯ ನಿಯಂತ್ರಣ ಪ್ರಾಧಿಕಾರ ಅನುಮತಿ ನೀಡಿತು. ತದನಂತರದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ತುರ್ತು ಬಳಕೆಯ ಲಸಿಕೆಗಳ ಪಟ್ಟಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ಸೇರಿಸಲು ಸಂಸ್ಥೆಯು ಆಸಕ್ತಿ ತೋರಿಸಿತು. ಈ ಕುರಿತು ಕಳೆದ 2021ರ ಏಪ್ರಿಲ್ 19ರಂದು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಿಕೊಂಡಿದ್ದು, ಅಗತ್ಯ ದಾಖಲೆಗಳೊಂದಿಗೆ ಅನುಮೋದನೆ ಶಿಫಾರಸ್ಸು ಮಾಡುವಂತೆ ಅರ್ಜಿ ಸಲ್ಲಿಸಿತ್ತು.

ಕೊವ್ಯಾಕ್ಸಿನ್ ಲಸಿಕೆ ಅನುಮೋದನೆಗೂ ಮುನ್ನ ಸಭೆ

ಕೊವ್ಯಾಕ್ಸಿನ್ ಲಸಿಕೆ ಅನುಮೋದನೆಗೂ ಮುನ್ನ ಸಭೆ

ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸುವ ಭಾರತ್ ಬಯೋಟೆಕ್ ಕಂಪನಿಯಿಂದ ಸ್ಪಷ್ಟೀಕರಣಗಳನ್ನು ತಾಂತ್ರಿಕ ಸಲಹಾ ಸಮಿತಿ ಸ್ವೀಕರಿಸಿತು. ಬುಧವಾರ ಅಂತಿಮ ಹಂತದ ಸಭೆ ನಡೆಸಿದ್ದು, ಲಸಿಕೆಯಿಂದ ಆಗುವ ಅಪಾಯ ಮತ್ತು ಪ್ರಯೋಜನಗಳ ಬಗ್ಗೆ ಮೌಲ್ಯಮಾಪನ ನಡೆಸಲಾಯಿತು. ಇತ್ತೀಚಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದ WHO ವಕ್ತಾರ ಡಾ ಮಾರ್ಗರೇಟ್ ಹ್ಯಾರಿಸ್, ಕೊವ್ಯಾಕ್ಸಿನ್ ಅನ್ನು ಸಂಭಾವ್ಯ ತುರ್ತು ಬಳಕೆಯ ಪಟ್ಟಿಗೆ ಸೇರಿಸುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ದತ್ತಾಂಶವನ್ನು ತಾಂತ್ರಿಕ ಸಲಹಾ ಸಮಿತಿಯು ಪರಿಶೀಲಿಸುತ್ತಿದೆ ಎಂದು ಹೇಳಿದ್ದರು.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾಲದಲ್ಲಿ ಯಾವ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದಿಸಬೇಕು ಎಂಬುದನ್ನು ನಿರ್ಧರಿಸುವ ತಾಂತ್ರಿಕ ಸಲಹಾ ಸಮಿತಿಯು ಒಂದು ಸ್ವತಂತ್ರ ಸಲಹಾ ಸಮಿತಿ ಆಗಿದೆ. ತುರ್ತು ಬಳಕೆ ಪಟ್ಟಿಯಲ್ಲಿ ಸೇರಿಸುವುದಕ್ಕೆ ಸಂಬಂಧಿಸಿದಂತೆ ಇರುವ ಕಾರ್ಯ ವಿಧಾನದ ಅಡಿಯಲ್ಲಿ ಸಮಿತಿಯು ಕೆಲಸ ಮಾಡುತ್ತದೆ. ಯಾವ ಲಸಿಕೆಯನ್ನು ತುರ್ತು ಬಳಕೆ ಪಟ್ಟಿಗೆ ಸೇರ್ಪಡೆ ಮಾಡುವುದು ಸೂಕ್ತ ಎಂಬ ಬಗ್ಗೆ ಈ ತಾಂತ್ರಿಕ ಸಲಹಾ ಸಮಿತಿಯು ವಿಶ್ವ ಆರೋಗ್ಯ ಸಂಸ್ಥೆಗೆ ಶಿಫಾರಸ್ಸು ಮಾಡಿದೆ.

ತಾಂತ್ರಿಕ ಸಲಹಾ ಸಮಿತಿಯಿಂದ 8 ಲಸಿಕೆಗಳ ಮೌಲ್ಯಮಾಪನ

ತಾಂತ್ರಿಕ ಸಲಹಾ ಸಮಿತಿಯಿಂದ 8 ಲಸಿಕೆಗಳ ಮೌಲ್ಯಮಾಪನ

"ಸದ್ಯದ ಸಮಯದಲ್ಲಿ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಸೇರಿದಂತೆ ವಿಶ್ವ ಆರೋಗ್ಯ ಸಂಸ್ಥೆಯು ಎಂಟು ಲಸಿಕೆ ಮಾದರಿಗಳ ಮೌಲ್ಯಮಾಪನ ಮಾಡುತ್ತಿದೆ. ಭಾರತ್ ಬಯೋಟೆಕ್ ಸಂಸ್ಥೆಯು ಜುಲೈ 6ರಿಂದಲೇ ದತ್ತಾಂಶಗಳನ್ನು ಸಲ್ಲಿಸುವ ಪ್ರಕ್ರಿಯೆ ಆರಂಸಿದೆ. ನಾವು ಇದನ್ನು ಅತ್ಯಂತ ತುರ್ತು ಅಗತ್ಯ ವಿಷಯ ಎಂದುಕೊಂಡಿದ್ದೇವೆ. ಆದ್ದರಿಂದಲೇ ಏಳು ವಿಷಯಗಳ ಮೇಲೆ ಮೌಲ್ಯಮಾಪನಕ್ಕೆ ಏಳು ಬೇರೆ ಬೇರೆ ತಂಡಗಳು ಕೆಲಸ ಮಾಡುತ್ತಿದೆ. ಮಹಾನಿರ್ದೇಶಕರ ಅಡಿಯಲ್ಲಿ ಸಂಸ್ಥೆಯು ಈ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ವೇಗವಾಗಿ ಮುಗಿಸಲು ಬದ್ಧವಾಗಿದೆ. ಆದರೆ ಲಸಿಕೆಯನ್ನು ತುರ್ತು ಬಳಕೆ ಪಟ್ಟಿಗೆ ಸೇರಿಸುವ ಶಿಫಾರಸು ಪ್ರಕ್ರಿಯೆಯು ಉತ್ಪಾದಕರ ಮೇಲೆ ಅವಲಂಬಿತವಾಗಿರುತ್ತದೆ ಎಂಬುದು ಇಲ್ಲಿ ಸ್ಪಷ್ಟವಾಗಿರಬೇಕು. ವಿಶ್ವ ಆರೋಗ್ಯ ಸಂಸ್ಥೆಯಿಂದ ಸ್ವತಂತ್ರವಾಗಿರುವ ತಾಂತ್ರಿಕ ಸಲಹಾ ಸಮಿತಿಗೆ ಉತ್ಪಾದಕ ಕಂಪನಿಯು ಎಷ್ಟು ಕ್ಷಿಪ್ರಗತಿಯಲ್ಲಿ ಅಗತ್ಯ ಮಾಹಿತಿಯನ್ನು ಸಲ್ಲಿಸುತ್ತದೆಯೋ ಅಷ್ಟು ವೇಗವಾಗಿ ಶಿಫಾರಸ್ಸು ಸಿಗಲಿದೆ. ಈ ಅಂಶವನ್ನು ನಾವು ಇಲ್ಲಿ ತುಂಬಾ ಸ್ಪಷ್ಟವಾಗಿ ಹೇಳುವುದಕ್ಕೆ ಬಯಸುತ್ತೇವೆ," ಎಂದು ಡಬ್ಲ್ಯುಎಚ್‌ಒನಲ್ಲಿ ಔಷಧಿಗಳು ಮತ್ತು ಆರೋಗ್ಯ ಉತ್ಪನ್ನಗಳ ಪ್ರವೇಶದ ಸಹಾಯಕ ಮಹಾನಿರ್ದೇಶಕ ಡಾ ಮರಿಯಾಂಗೆಲಾ ಸಿಮಾವೊ ತಿಳಿಸಿದ್ದಾರೆ.

ಎಷ್ಟು ಕೊವಿಡ್-19 ಲಸಿಕೆಗಳಿಗೆ WHO ಅನುಮೋದನೆ

ಎಷ್ಟು ಕೊವಿಡ್-19 ಲಸಿಕೆಗಳಿಗೆ WHO ಅನುಮೋದನೆ

ವಿಶ್ವ ಆರೋಗ್ಯ ಸಂಸ್ಥೆಯು ಈವರೆಗೆ ಹಲವು ಕಂಪನಿಗಳು ಉತ್ಪಾದಿಸುವ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಭಾರತದ ಮಟ್ಟಿಗೆ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆ ಹಾಗೂ ಬುಧವಾರ ಅನುಮೋದನೆ ಪಡೆದ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯು ತುರ್ತು ಬಳಕೆ ಅನುಮೋದನೆ ಪಟ್ಟಿಗೆ ಸೇರ್ಪಡೆಯಾಗಿವೆ. ಇದರ ಹೊರತಾಗಿ ಫೈಜರ್, ಬಯೋನಟೆಕ್, ಜಾನ್ಸನ್ ಆಂಡ್ ಜಾನ್ಸನ್, ಮಾಡರ್ನಾ ಮತ್ತು ಸಿನೋಫಾರ್ಮಾ ಕಂಪನಿಗಳು ಉತ್ಪಾದಿಸುವ ಲಸಿಕೆಯನ್ನು ತುರ್ತು ಬಳಕೆ ಪಟ್ಟಿಗೆ ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆಯು ಅನುಮೋದನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+