ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

18 ವರ್ಷದೊಳಗಿನ ಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ

|
Google Oneindia Kannada News

ಪಾಟ್ನಾ, ಜೂನ್ 03: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯು ಮಕ್ಕಳ ಜೀವಕ್ಕೆ ಅಪಾಯಕಾರಿ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಮಕ್ಕಳಿಗೆ ಯಾವ ಲಸಿಕೆಯು ಸುರಕ್ಷಿತ ಎಂಬ ಬಗ್ಗೆ ವೈದ್ಯಕೀಯ ಪ್ರಯೋಗಗಳನ್ನು ನಡೆಸಲಾಗುತ್ತಿದೆ.

ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿರುವ ಕೊವ್ಯಾಕ್ಸಿನ್ ಲಸಿಕೆ ಮಕ್ಕಳಿಗೆ ಸುರಕ್ಷಿತವಾಗಿದೆಯೇ ಎಂಬ ಬಗ್ಗೆ ವೈದ್ಯಕೀಯ ಪ್ರಯೋಗ ನಡೆಸಲು ಭಾರತದ ಔಷಧಿ ನಿಯಂತ್ರಣ ಪ್ರಾಧಿಕಾರದಿಂದ ಅನುಮತಿ ಪಡೆದುಕೊಳ್ಳಲಾಗಿದೆ. ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯಲ್ಲಿ ಗುರುವಾರದಿಂದಲೇ ವೈದ್ಯಕೀಯ ಪ್ರಯೋಗ ಆರಂಭವಾಗಲಿದೆ.

ಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗಕ್ಕೆ ಅನುಮತಿಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ

ಭಾರತದಲ್ಲಿ ಉತ್ಪಾದಿಸಲಾಗುತ್ತಿರುವ ಕೊವ್ಯಾಕ್ಸಿನ್ ಲಸಿಕೆಯ 2 ಮತ್ತು 3ನೇ ಹಂತದ ವೈದ್ಯಕೀಯ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ ನೀಡಿದೆ. ಈ ಹಂತದಲ್ಲಿ 2 ರಿಂದ 18 ವಯೋಮಾನದವರ ಮೇಲೆ ವೈದ್ಯಕೀಯ ಪ್ರಯೋಗವನ್ನು ನಡೆಸಲಾಗುವುದು ಎಂದು ನೀತಿ ಆಯೋಗದ ಸದಸ್ಯ ವಿ ಕೆ ಪೌಲ್ ತಿಳಿಸಿದ್ದಾರೆ.

2-18 ವಯೋಮಾನದವರ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ

2-18 ವಯೋಮಾನದವರ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷದವರಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಎರಡು ಮತ್ತು ಮೂರನೇ ಹಂತದ ವೈದ್ಯಕೀಯ ಪ್ರಯೋಗ ನಡೆಸಲು ತಜ್ಞರ ಸಮಿತಿ ಶಿಫಾರಸ್ಸು ಮಾಡಿತ್ತು. ದೆಹಲಿಯ ಏಮ್ಸ್, ಪಾಟ್ನಾದ ಏಮ್ಸ್ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 525 ಮಾದರಿ ಪ್ರಯೋಗಗಳನ್ನು ನಡೆಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ವೈದ್ಯಕೀಯ ಪ್ರಯೋಗದ ಅಂಕಿ-ಅಂಶ ಸಲ್ಲಿಸುವ ಷರತ್ತು

ವೈದ್ಯಕೀಯ ಪ್ರಯೋಗದ ಅಂಕಿ-ಅಂಶ ಸಲ್ಲಿಸುವ ಷರತ್ತು

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ 2-18 ವರ್ಷದವರಿಗೆ ಸುರಕ್ಷಿತವೇ ಎಂಬ ಬಗ್ಗೆ ವಿಸ್ತೃತ ಚರ್ಚೆಯ ಬಳಿಕ ವೈದ್ಯಕೀಯ ಪ್ರಯೋಗಕ್ಕೆ ಷರತ್ತುಬದ್ಧ ಅನುಮೋದನೆ ನೀಡಲಾಗಿದೆ. 2ನೇ ಹಂತದ ವೈದ್ಯಕೀಯ ಪ್ರಯೋಗ ಹಾಗೂ ಅದರ ಫಲಿಶಾಂತಕ್ಕೆ ಸಬಂಧಿಸಿದ ದತ್ತಾಂಶವನ್ನು ಸಲ್ಲಿಸಿದ ನಂತರ ಡಿಎಸ್ಎಂಬಿ ಶಿಫಾರಸ್ಸಿನ ಮೇಲೆ 3ನೇ ಹಂತದ ಪ್ರಯೋಗಕ್ಕೆ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದೆ. ಕಳೆದ ಫೆಬ್ರವರಿ 24ರಂದು ವಿಷಯ ತಜ್ಞರ ಸಮಿತಿಯು ಈ ಬಗ್ಗೆ ಮೊದಲೇ ಚರ್ಚೆ ನಡೆಸಿದ್ದು, ಪರಿಷ್ಕೃತ ವೈದ್ಯಕೀಯ ಪ್ರಯೋಗದ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಸದ್ಯ ದೇಶದಲ್ಲಿ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡಲು ಐಸಿಎಂಆರ್ ಅನುಮೋದನೆ ನೀಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಮೂರು ಹಂತಗಳು

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಮೂರು ಹಂತಗಳು

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ದೇಶದಲ್ಲಿ 22 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ದೇಶದಲ್ಲಿ 22 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸುವುದಕ್ಕೆ ಭಾರತದಲ್ಲಿ ಅನುಮೋದನೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 138 ದಿನಗಳಲ್ಲಿ 22,08,62,449 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Bharat Biotech's Covaxin trials on children begin at Patna AIIMS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X