ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಕ್ಕಳಿಗೆ ಕೋವ್ಯಾಕ್ಸಿನ್ ಬೂಸ್ಟರ್; ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ಕೋರಿದ ಭಾರತ್ ಬಯೋಟೆಕ್

|
Google Oneindia Kannada News

ನವದೆಹಲಿ, ಮೇ 4: ಭಾರತದಲ್ಲಿ 2 ವರ್ಷದಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಬಳಸುವುದಕ್ಕೆ ಸಂಬಂಧಿಸಿದಂತೆ ಭಾರತ್ ಬಯೋಟೆಕ್ ಸಂಸ್ಥೆಯು ವೈದ್ಯಕೀಯ ಪ್ರಯೋಗ ನಡೆಸಲು ನಿರ್ಧರಿಸಿದೆ.

ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ಬೂಸ್ಟರ್ ಡೋಸ್ ಆಗಿ ಬಳಸಲು 2 ಮತ್ತು 3ನೇ ಹಂತದ ವೈದ್ಯಕೀಯ ಪ್ರಯೋಗವನ್ನು ನಡೆಸಲು ಭಾರತ್ ಬಯೋಟೆಕ್ ಸಂಸ್ಥೆಯು ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರ(ಡಿಸಿಜಿಐ)ದ ಅನುಮತಿ ಕೋರಿದೆ.

ಮೊದಲು ಓದಿ: ಹೌದು ಭಾರತದಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆ ಪ್ರಮಾಣವಾದ್ರೂ ಎಷ್ಟು!?ಮೊದಲು ಓದಿ: ಹೌದು ಭಾರತದಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆ ಪ್ರಮಾಣವಾದ್ರೂ ಎಷ್ಟು!?

ಹೈದರಾಬಾದ್ ಮೂಲದ ಸಂಸ್ಥೆಯು ಏಪ್ರಿಲ್ 29ರಂದು ಡಿಸಿಜಿಐಗೆ ಅರ್ಜಿಯನ್ನು ಸಲ್ಲಿಸಿದ್ದು, 2 ರಿಂದ 18 ವರ್ಷ ವಯಸ್ಸಿನ ಆರೋಗ್ಯವಂತ ಸ್ವಯಂಸೇವಕರಲ್ಲಿ ಬೂಸ್ಟರ್ ಡೋಸ್‌ನಂತೆ ಕೋವ್ಯಾಕ್ಸಿನ್ ಸುರಕ್ಷತೆ, ರಿಯಾಕ್ಟೋಜೆನಿಸಿಟಿ ಮತ್ತು ಇಮ್ಯುನೊಜೆನಿಸಿಟಿಯನ್ನು ಮೌಲ್ಯಮಾಪನ ಮಾಡಲು 2 ಹಾಗೂ 3ನೇ ಹಂತದ ಪ್ರಯೋಗವನ್ನು ನಡೆಸಲು ಅನುಮತಿ ಕೋರಿದೆ ಎಂದು ಮೂಲಗಳು ತಿಳಿಸಿವೆ.

ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಬಗ್ಗೆ 6 ಕಡೆ ಪ್ರಯೋಗ

ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಬಗ್ಗೆ 6 ಕಡೆ ಪ್ರಯೋಗ

ದೆಹಲಿ ಮತ್ತು ಪಾಟ್ನಾ ಏಮ್ಸ್ ಸೇರಿದಂತೆ ಆರು ಸ್ಥಳಗಳಲ್ಲಿ ವೈದ್ಯಕೀಯ ಪ್ರಯೋಗ ಹಾಗೂ ಅಧ್ಯಯನವನ್ನು ನಡೆಸುವ ಸಾಧ್ಯತೆಯಿದೆ. ಕೋವ್ಯಾಕ್ಸಿನ್ ಅನ್ನು 6 ವರ್ಷದಿಂದ 18 ವರ್ಷದವರಿಗೂ ನೀಡುವುದಕ್ಕೆ ಮೇಲ್ಪಟ್ಟ ಎಲ್ಲರಿಗೂ ನೀಡುವುದಕ್ಕೆ ಅನುಮತಿ ನೀಡಲಾಗಿದೆ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರವು ಅನುಮೋದಿಸಿದೆ. ಅದಾಗ್ಯೂ, ಪ್ರಸ್ತುತ 15 ವರ್ಷ ಮೇಲ್ಪಟ್ಟವರಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತಿದೆ.

ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆಯು ಸುರಕ್ಷಿತ

ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆಯು ಸುರಕ್ಷಿತ

"ಮೊದಲು 12-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವ್ಯಾಕ್ಸಿನ್ ಅನ್ನು ಅನುಮೋದಿಸಲಾಗಿತ್ತು. 2-18 ವರ್ಷ ವಯಸ್ಸಿನ ಮಕ್ಕಳಿಗೆ 2 ಮತ್ತು 3ನೇ ಹಂತದ ಅಧ್ಯಯನದಲ್ಲಿ ಹೆಚ್ಚು ಸುರಕ್ಷಿತ ಹಾಗೂ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಎಂಬುದನ್ನು ಸಾಬೀತುಪಡಿಸಿದೆ," ಎಂದು ಭಾರತ್ ಬಯೋಟೆಕ್ ಸಂಸ್ಥೆ ಹೇಳಿದೆ.

ವಿವಿಧ ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ವಿವಿಧ ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕಳೆದ 2021ರ ಜನವರಿ 16ರಂದು ಮೊದಲ ಬಾರಿಗೆ ಕೋವಿಡ್-19 ಲಸಿಕೆಯ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಫೆಬ್ರವರಿ 2ರಂದು ಎರಡನೇ ಹಂತದಲ್ಲಿ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಿಸಲಾಯಿತು. ಮಾರ್ಚ್ 1ರಿಂದ ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟ ಅಸ್ವಸ್ಥತೆಯನ್ನು ಹೊಂದಿರುವವರಿಗೆ ಕೋವಿಡ್-19 ಲಸಿಕೆ ವಿತರಿಸಲು ಶುರು ಮಾಡಲಾಯಿತು. ತದನಂತರ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ವಿತರಿಸಲು ಅನುಮತಿ ನೀಡಲಾಗಿತ್ತು. ಮೇ 1ರ ನಂತರದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ವಿತರಿಸುವುದಕ್ಕೆ ಅನುಮತಿಸಲಾಗಿತ್ತು.

2022ರ ಜನವರಿ 3ರಂದು 15 ರಿಂದ 18 ವಯೋಮಾನದವರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವುದಕ್ಕೆ ಕೇಂದ್ರ ಸರ್ಕಾರವು ಅನುಮೋದನೆಯನ್ನು ನೀಡಿತು. ಇದರ ಬೆನ್ನಲ್ಲೇ ಮಾರ್ಚ್ 16ರಂದು 12 ರಿಂದ 14 ವರ್ಷದ ಮಕ್ಕಳಿಗೆ ಲಸಿಕೆ ವಿತರಿಸುವುದಕ್ಕೆ ಅನುಮತಿ ನೀಡಲಾಯಿತು. ಹೀಗೆ ಹಂತ-ಹಂತವಾಗಿ ಲಸಿಕೆ ವಿತರಣೆಗೆ ದೇಶದಲ್ಲಿ ಅನುಮತಿ ನೀಡಲಾಗಿದೆ.

ಬೂಸ್ಟರ್ ಡೋಸ್ ತೆಗೆದುಕೊಳ್ಳುವುದಕ್ಕೆ ಕೇಂದ್ರದ ಅನುಮತಿ

ಬೂಸ್ಟರ್ ಡೋಸ್ ತೆಗೆದುಕೊಳ್ಳುವುದಕ್ಕೆ ಕೇಂದ್ರದ ಅನುಮತಿ

ದೇಶದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಏಪ್ರಿಲ್ 10 ರಿಂದ ಕೋವಿಡ್-19 ಬೂಸ್ಟರ್ ಲಸಿಕೆಯನ್ನು ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈಗಾಗಲೇ ಘೋಷಿಸಿದೆ. ಮೊದಲ ಎರಡು ಅಲೆಗಳ ನಂತರ ಆರಂಭಿಸಲಾದ ಲಸಿಕೆ ವಿತರಣೆ ಅಭಿಯಾನದಿಂದ ಸಾವಿನ ಪ್ರಕರಣಗಳು ಮತ್ತು ತೀವ್ರ ಅಸ್ವಸ್ಥತೆಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಎರಡು ಡೋಸ್ ಲಸಿಕೆ ಪಡೆದುಕೊಂಡವರು ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳುವುದಕ್ಕೂ ಅನುಮತಿ ನೀಡಲಾಗಿದೆ. ಈ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ತಾವು ಎರಡನೇ ಡೋಸ್ ಪಡೆದುಕೊಂಡು 9 ತಿಂಗಳು ಕಳೆದಿದ್ದರೆ ಮೂರನೇ ಡೋಸ್ ಲಸಿಕೆಯನ್ನೂ ಪಡೆದುಕೊಳ್ಳಬಹುದು.

6 ರಿಂದ 12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್

6 ರಿಂದ 12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್

ಭಾರತದಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ವಿತರಿಸುವುದಕ್ಕೆ ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರ ಮಂಗಳವಾರ ಅನುಮೋದನೆ ನೀಡಿದೆ. ದೇಶದಲ್ಲಿ 6 ರಿಂದ 12 ವರ್ಷ ಮಕ್ಕಳನ್ನು ಕೋವಿಡ್-19 ಸೋಂಕಿನಿಂದ ರಕ್ಷಿಸವುದಕ್ಕಾಗಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಕೊವ್ಯಾಕ್ಸಿನ್ ಲಸಿಕೆಯ ಜೊತೆಗೆ ಮತ್ತೊಂದು ಲಸಿಕೆಗೂ ಅನುಮೋದನೆ ನೀಡಲಾಗಿದೆ. ಭಾರತೀಯ ಔಷಧಿ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿಯು ಬಯೋಲಾಜಿಕಲ್-ಇ ಸಂಸ್ಥೆಯ ಕೊರ್ಬೆವ್ಯಾಕ್ಸ್ ಲಸಿಕೆಯನ್ನು 5 ರಿಂದ 11 ವರ್ಷದ ಮಕ್ಕಳ ಮೇಲೆ ತುರ್ತು ಬಳಸುವುದಕ್ಕೆ ಅನುಮೋದನೆ ನೀಡಲಾಗಿದೆ. ಆ ಮೂಲಕ 5 ವರ್ಷ ಮೇಲ್ಪಟ್ಟ ಮಕ್ಕಳಿಗೂ ಕೋವಿಡ್-19 ಲಸಿಕೆಯನ್ನು ಸಮರೋಪಾದಿಯಲ್ಲಿ ನೀಡುವುದಕ್ಕೆ ಯೋಜನೆ ರೂಪಿಸಿಕೊಳ್ಳಲಾಗುತ್ತಿದೆ.

English summary
Bharat Biotech seeks DCGI Permission for phase 2/3 trial of Covaxin as booster among Kids.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X