ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸಿಜಿಐಗೆ 3ನೇ ಹಂತದ ವೈದ್ಯಕೀಯ ವರದಿ ಸಲ್ಲಿಸಲು ಭಾರತ್ ಬಯೋಟೆಕ್ ಸಿದ್ಧ

|
Google Oneindia Kannada News

ಹೈದ್ರಾಬಾದ್, ಜೂನ್ 22: ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಕೊವ್ಯಾಕ್ಸಿನ್ ಲಸಿಕೆ ಕುರಿತಾಗಿ ನಡೆಸಿರುವ ಮೂರನೇ ಹಂತದ ವೈದ್ಯಕೀಯ ಪ್ರಯೋಗದ ದತ್ತಾಂಶವನ್ನು ಭಾರತದ ಔಷಧೀಯ ನಿಯಂತ್ರಣ ಪ್ರಾಧಿಕಾರಕ್ಕೆ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.

ಭಾರತದಲ್ಲಿ ಅನುಮೋದನೆ ಪಡೆದಿರುವ ಮೂರು ಕೊರೊನಾವೈರಸ್ ಲಸಿಕಗಳ ಪೈಕಿ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಕೂಡಾ ಒಂದಾಗಿದೆ. ಈ ಹಿನ್ನೆಲೆ ಕೊವ್ಯಾಕ್ಸಿನ್ ಲಸಿಕೆಗೆ ಸಂಬಂಧಿಸಿದಂತೆ ಮೂರನೇ ಹಂತದ ವೈದ್ಯಕೀಯ ಪ್ರಯೋಗ ಪೂರ್ಣಗೊಳ್ಳುವುದು ಯಾವಾಗ ಎಂಬ ಬಗ್ಗೆ ಹಿಂದಿನಿಂದಲೂ ಪ್ರಶ್ನೆ ಮಾಡಲಾಗುತ್ತಿತ್ತು.

ಅಮೆರಿಕಾದಲ್ಲಿ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆ ಅರ್ಜಿ ತಿರಸ್ಕಾರ ಅಮೆರಿಕಾದಲ್ಲಿ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆ ಅರ್ಜಿ ತಿರಸ್ಕಾರ

"ಭಾರತ್ ಬಯೋಟೆಕ್ ಸಂಸ್ಥೆಯು ಕೊವ್ಯಾಕ್ಸಿನ್ ಲಸಿಕೆಗೆ ಸಂಬಂಧಿಸಿದಂತೆ ನಡೆಸಿದ ಮೂರನೇ ಹಂತದ ವೈದ್ಯಕೀಯ ಪ್ರಯೋಗ ದತ್ತಾಂಶವನ್ನು ವಾರಾಂತ್ಯದ ವೇಳೆಗೆ ಭಾರತೀಯ ಔಷಧೀಯ ನಿಯಂತ್ರಣ ಪ್ರಾಧಿಕಾರಕ್ಕೆ ಸಲ್ಲಿಸಲಿದೆ," ಎಂದು ಎಎನ್ಐ ವರದಿ ಮಾಡಿದೆ.

3ನೇ ಹಂತದ ವೈದ್ಯಕೀಯ ಪ್ರಯೋಗ ಪ್ರಾಮುಖ್ಯತೆ?

3ನೇ ಹಂತದ ವೈದ್ಯಕೀಯ ಪ್ರಯೋಗ ಪ್ರಾಮುಖ್ಯತೆ?

ಕೊವ್ಯಾಕ್ಸಿನ್ ಲಸಿಕೆಗೆ ಸಂಬಂಧಿಸಿದಂತೆ 3ನೇ ಹಂತದ ವೈದ್ಯಕೀಯ ಪ್ರಯೋಗದ ದತ್ತಾಂಶವೇ ನಿರ್ಣಾಯಕ ಎನಿಸಲಿದೆ. ಏಕೆಂದರೆ ಈ ಹಂತದಲ್ಲಿ ಲಸಿಕೆಯು ಎಷ್ಟರ ಮಟ್ಟಿಗೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ವಿವರವನ್ನು ನೀಡಲಾಗುತ್ತದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಸಹಯೋಗದೊಂದಿಗೆ ಈ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯಿಂದ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಪಡೆದುಕೊಳ್ಳುವುದಕ್ಕೆ ಮೂರನೇ ಹಂತದ ವೈದ್ಯಕೀಯ ಪ್ರಯೋಗದ ದತ್ತಾಂಶವೇ ಅತಿಮುಖ್ಯವಾಗಿರುತ್ತದೆ.

ವೈದ್ಯಕೀಯ ದತ್ತಾಂಶ ಸಲ್ಲಿಸುವ ಮುನ್ನ ಮಹತ್ವದ ಸಭೆ

ವೈದ್ಯಕೀಯ ದತ್ತಾಂಶ ಸಲ್ಲಿಸುವ ಮುನ್ನ ಮಹತ್ವದ ಸಭೆ

ಭಾರತ್ ಬಯೋಟೆಕ್ ಸಂಸ್ಥೆಯ ಆಸಕ್ತಿಯ ಅಭಿವ್ಯಕ್ತಿಗೆ ಅವಕಾಶ ನೀಡುವುದಕ್ಕೆ ವಿಶ್ವ ಆರೋಗ್ಯ ಸಂಸ್ಥೆಯು ಅನುಮತಿ ನೀಡಿತ್ತು. ಕಂಪನಿಯು 3ನೇ ಹಂತದ ವೈದ್ಯಕೀಯ ಪ್ರಯೋಗದ ದತ್ತಾಂಶ ಸಲ್ಲಿಸುವುದಕ್ಕೂ ಮೊದಲು ಅಂದರೆ ಜೂನ್ 23ರಂದು ಪೂರ್ವ ಸಭೆ ನಡೆಸಲಿದೆ. ಈ ವೇಳೆ ಮೂರನೇ ಹಂತದ ವೈದ್ಯಕೀಯ ಪ್ರಯೋಗ ಮತ್ತು ಅದರ ಪರಿಣಾಮಕಾರತ್ವದ ಬಗ್ಗೆ ಸಂಸ್ಥೆಯು ವಿಶ್ವ ಆರೋಗ್ಯ ಸಂಸ್ಥೆ ಎದುರು ಪ್ರಸ್ತಾಪಿಸುವ ಸಾಧ್ಯತೆಯಿದೆ.

ಜುಲೈ ತಿಂಗಳಿನಲ್ಲಿ ದತ್ತಾಂಶ ನೀಡುವ ಬಗ್ಗೆ ಕಂಪನಿ ಉಲ್ಲೇಖ

ಜುಲೈ ತಿಂಗಳಿನಲ್ಲಿ ದತ್ತಾಂಶ ನೀಡುವ ಬಗ್ಗೆ ಕಂಪನಿ ಉಲ್ಲೇಖ

ಭಾರತ್ ಬಯೋಟೆಕ್ ಸಂಸ್ಥೆಯು ಈ ಮೊದಲು ಔಷಧೀಯ ನಿಯಂತ್ರಣಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿತ್ತು. ತದನಂತದಲ್ಲಿ ಪೀರ್-ರಿವ್ಯೂಡ್ ಜರ್ನಲ್‌ಗಳ ಪ್ರಕಟಣೆಗೆ ಮೂರು ತಿಂಗಳ ಕಾಲಮಿತಿ ಕೇಳಲಾಗಿತ್ತು. ಅದರಂತೆ ಕೊವಾಕ್ಸಿನ್‌ನ 3ನೇ ಹಂತದ ವೈದ್ಯಕೀಯ ಪ್ರಯೋಗದ ದತ್ತಾಂಶವನ್ನು ಜುಲೈ ತಿಂಗಳಿನಲ್ಲಿ ಸಾರ್ವಜನಿಕವಾಗಿ ನೀಡಲಾಗುತ್ತದೆ ಎಂದು ಸಂಸ್ಥೆಯು ಸ್ಪಷ್ಟಪಡಿಸಿತ್ತು.

ಶೇ.81ರಷ್ಟು ಪರಿಣಾಮಕಾರತ್ವದ ಬಗ್ಗೆ ಉಲ್ಲೇಖ

ಶೇ.81ರಷ್ಟು ಪರಿಣಾಮಕಾರತ್ವದ ಬಗ್ಗೆ ಉಲ್ಲೇಖ

ಕಳೆದ ಮಾರ್ಚ್ ತಿಂಗಳಿನಲ್ಲಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸುತ್ತಿರುವ ಭಾರತ್ ಬಯೋಟೆಕ್ ಸಂಸ್ಥೆಯು ಲಸಿಕೆ ಪರಿಣಾಮಕಾರತ್ವದ ಬಗ್ಗೆ ಉಲ್ಲೇಖಿಸಿತ್ತು. ಎರಡೂ ಡೋಸ್ ಲಸಿಕೆ ಪಡೆದ ನಂತರ ಕೊವಿಡ್-19 ಸೋಂಕು ತಗುಲದ ವ್ಯಕ್ತಿಯಲ್ಲಿ ಶೇ.81ರಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಾಗಿದೆ ಎಂದು ಹೇಳಿತ್ತು. ಜನವರಿ ತಿಂಗಳಿನಲ್ಲಿ ಕೊವ್ಯಾಕ್ಸಿನ್ ಲಸಿಕೆಯ ಮೊದಲ ಮತ್ತು ಎರಡನೇ ಹಂತದ ವೈದ್ಯಕೀಯ ಪ್ರಯೋಗಗಳ ದತ್ತಾಂಶವನ್ನು ಗಮನದಲ್ಲಿ ಇಟ್ಟುಕೊಂಡು ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಭಾರತೀಯ ಔಷಧೀಯ ಪ್ರಾಧಿಕಾರ ಅನುಮೋದನೆ ನೀಡಿತ್ತು.

ಭಾರತದಲ್ಲೇ ಕೊವ್ಯಾಕ್ಸಿನ್ ಲಸಿಕೆ ಬಲು ದುಬಾರಿ

ಭಾರತದಲ್ಲೇ ಕೊವ್ಯಾಕ್ಸಿನ್ ಲಸಿಕೆ ಬಲು ದುಬಾರಿ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆಯ ಒಂದು ಡೋಸ್ ಬೆಲೆ 600 ರೂಪಾಯಿ. ಆಗಿದೆ. ಹೈದ್ರಾಬಾದಿನ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ 1 ಡೋಸ್ ಕೊವ್ಯಾಕ್ಸಿನ್ ಲಸಿಕೆಗೆ 1200 ರೂಪಾಯಿ ನಿಗದಿಗೊಳಿಸಲಾಗಿದೆ. ರಷ್ಯಾದ ಸ್ಪುಟ್ನಿಕ್-ವಿ ಲಸಿಕೆಗೆ 995 ರೂಪಾಯಿ ಆಗುತ್ತದೆ.

ಭಾರತದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಒಂದು ಡೋಸ್ ಕೊವಿಶೀಲ್ಡ್ ಲಸಿಕೆಗೆ 780 ರೂ. ರಷ್ಯಾದ ಒಂದು ಡೋಸ್ ಸ್ಪುಟ್ನಿಕ್-ವಿ ಲಸಿಕೆಗೆ 1,145 ರೂ. ನಿಗದಿಗೊಳಿಸಲಾಗಿದೆ. ಆದರೆ ಒಂದು ಡೋಸ್ ಕೊವ್ಯಾಕ್ಸಿನ್ ಲಸಿಕೆಗೆ ಸೇವಾ ಶುಲ್ಕ ಹಾಗೂ ಜಿಎಸ್ ಟಿ ಸೇರಿದಂತೆ 1,410 ರೂಪಾಯಿ ಆಗುತ್ತದೆ.

English summary
Bharat Biotech Will Submitted Phase-III Clinical Trial Data Of Covaxin Vaccine To DCGI Before Weekend.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X