ವಿಶೇಷ ಸೂಚನೆ: ಭಾರತದಲ್ಲಿ 2 ವರ್ಷ ಮೇಲ್ಪಟ್ಟ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ

ನವದೆಹಲಿ, ಜೂನ್ 23: "ಭಾರತದಲ್ಲಿ ಮುಂಬರುವ ಸಪ್ಟೆಂಬರ್ ತಿಂಗಳಿನಿಂದ 2 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುವುದು," ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಕೊರೊನಾವೈರಸ್ ಟಾಸ್ಕ್ ಫೋರ್ಸ್ ತಂಡದಲ್ಲಿ ಪ್ರಮುಖರು ಎನಿಸಿರುವ ಖ್ಯಾತ ಶ್ವಾಸಕೋಶಶಾಸ್ತ್ರಜ್ಞ ಡಾ.ರಂದೀಪ್ ಗುಲೇರಿಯಾ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಭಾರತ್ ಬಯೋಟೆಕ್ ಮಕ್ಕಳ ಮೇಲೆ ನಡೆಸುತ್ತಿರುವ ವೈದ್ಯಕೀಯ ಪ್ರಯೋಗದ ಅಧಿಕೃತ ದತ್ತಾಂಶ ಸಪ್ಟೆಂಬರ್ ತಿಂಗಳ ಹೊತ್ತಿಗೆ ಹೊರ ಬರಲಿದೆ. ಅದೇ ತಿಂಗಳು ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ವಿತರಣೆಗೆ ಅನುಮೋದನೆ ಪಡೆದುಕೊಂಡು ಲಸಿಕೆ ವಿತರಣೆ ಕಾರ್ಯ ಆರಂಭಿಸಲಾಗುವುದು," ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಒಂದು ವೇಳೆ ಫೈಜರ್-ಬಯೋ-ಎನ್-ಟೆಕ್ ಸಂಸ್ಥೆಯ ಕೊರೊನಾವೈರಸ್ ಲಸಿಕೆಗೆ ಅನುಮೋದನೆ ನೀಡಿದ್ದೆ ಆದರೆ 2 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೂ ಈ ಲಸಿಕೆಯನ್ನು ವಿತರಿಸುವುದಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.

ಮಕ್ಕಳ ಮೇಲೆ ವೈದ್ಯಕೀಯ ಪ್ರಯೋಗ ಆರಂಭಿಸಿರುವ ಏಮ್ಸ್

ಮಕ್ಕಳ ಮೇಲೆ ವೈದ್ಯಕೀಯ ಪ್ರಯೋಗ ಆರಂಭಿಸಿರುವ ಏಮ್ಸ್

ಕೊವ್ಯಾಕ್ಸಿನ್ ಲಸಿಕೆಯ ಎರಡು ಮತ್ತು ಮೂರನೇ ಹಂತದ ವೈದ್ಯಕೀಯ ಪ್ರಯೋಗಗಳನ್ನು ಮಕ್ಕಳು ಮತ್ತು ಯುವಕರ ಮೇಲೆ ನಡೆಸುವುದಕ್ಕೆ ಭಾರತದ ಔಷಧೀಯ ನಿಯಂತ್ರಣ ಪ್ರಾಧಿಕಾರ ಕಳೆದ ಮೇ 12ರಂದು ಭಾರತ್ ಬಯೋಟೆಕ್ ಸಂಸ್ಥೆಗೆ ಅನುಮೋದನೆ ನೀಡಿತ್ತು. ಜೂನ್ 7ರಿಂದ ನವದೆಹಲಿ ಏಮ್ಸ್ 2 ರಿಂದ 17 ವರ್ಷದ ಮಕ್ಕಳ ಮೇಲೆ ವೈದ್ಯಕೀಯ ಪ್ರಯೋಗವನ್ನು ಆರಂಭಿಸಿತ್ತು.

"ಬಯಲು ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ"

"ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಶಾಲೆಗಳ ಪುನಾರಂಭಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಾಲೆಗಳನ್ನು ಆರಂಭಿಸುವುದರಿಂದ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚುವ ಅಪಾಯವಿದೆ. ಈ ಹಿನ್ನೆಲೆ ತೆರೆದ ಪ್ರದೇಶಗಳಲ್ಲಿ ತರಗತಿಗಳನ್ನು ನಡೆಸುವುದು ಸೂಕ್ತವಾಗಿದೆ. ಬಯಲು ಪರಿಸರದಲ್ಲಿ ಸೋಂಕು ಹರಡುವಿಕೆ ಅಪಾಯ ಅಷ್ಟಾಗಿ ಇರುವುದಿಲ್ಲ," ಎಂದು ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.

ಸೆರೋ-ಸಮೀಕ್ಷೆಯಲ್ಲಿ ತಿಳಿದು ಬಂದ ಅಂಶವೇನು?

ಸೆರೋ-ಸಮೀಕ್ಷೆಯಲ್ಲಿ ತಿಳಿದು ಬಂದ ಅಂಶವೇನು?

"ಮಕ್ಕಳಲ್ಲಿ ಪ್ರತಿಕಾಯ ಶಕ್ತಿ ವೃದ್ಧಿಸುವುದಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದನ್ನು ಸೆರೋ-ಸಮೀಕ್ಷೆಯಲ್ಲಿ ಗುರುತಿಸಲಾಗಿದೆ. ಅಲ್ಲದೇ, ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುವಂತಾ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ, ಎಂದು ಡಾ. ರಂದೀಪ್ ಗುಲೇರಿಯಾ ಸ್ಪಷ್ಟಪಡಿಸಿದ್ದಾರೆ. "ಮಕ್ಕಳನ್ನು ವೈದ್ಯಕೀಯ ಪ್ರಯೋಗದಲ್ಲಿ ಬಳಸಿಕೊಂಡ ಸಂದರ್ಭದಲ್ಲಿ ಅವರಲ್ಲೂ ಪ್ರತಿಕಾಯ ಶಕ್ತಿ ವೃದ್ಧಿಸುವುದನ್ನು ಕಂಡುಕೊಳ್ಳಲಾಗಿದೆ," ಎಂದಿದ್ದಾರೆ.

2-17 ವಯೋಮಾನದವರ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ

2-17 ವಯೋಮಾನದವರ ಮೇಲೆ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷದವರಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಎರಡು ಮತ್ತು ಮೂರನೇ ಹಂತದ ವೈದ್ಯಕೀಯ ಪ್ರಯೋಗ ನಡೆಸಲು ತಜ್ಞರ ಸಮಿತಿ ಶಿಫಾರಸ್ಸು ಮಾಡಿತ್ತು. ದೆಹಲಿಯ ಏಮ್ಸ್, ಪಾಟ್ನಾದ ಏಮ್ಸ್ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 525 ಮಾದರಿ ಪ್ರಯೋಗಗಳನ್ನು ನಡೆಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ವೈದ್ಯಕೀಯ ಪ್ರಯೋಗದ ಅಂಕಿ-ಅಂಶ ಸಲ್ಲಿಸುವ ಷರತ್ತು

ವೈದ್ಯಕೀಯ ಪ್ರಯೋಗದ ಅಂಕಿ-ಅಂಶ ಸಲ್ಲಿಸುವ ಷರತ್ತು

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ 2-17 ವರ್ಷದವರಿಗೆ ಸುರಕ್ಷಿತವೇ ಎಂಬ ಬಗ್ಗೆ ವಿಸ್ತೃತ ಚರ್ಚೆಯ ಬಳಿಕ ವೈದ್ಯಕೀಯ ಪ್ರಯೋಗಕ್ಕೆ ಷರತ್ತುಬದ್ಧ ಅನುಮೋದನೆ ನೀಡಲಾಗಿದೆ. 2ನೇ ಹಂತದ ವೈದ್ಯಕೀಯ ಪ್ರಯೋಗ ಹಾಗೂ ಅದರ ಫಲಿಶಾಂತಕ್ಕೆ ಸಬಂಧಿಸಿದ ದತ್ತಾಂಶವನ್ನು ಸಲ್ಲಿಸಿದ ನಂತರ ಡಿಎಸ್ಎಂಬಿ ಶಿಫಾರಸ್ಸಿನ ಮೇಲೆ 3ನೇ ಹಂತದ ಪ್ರಯೋಗಕ್ಕೆ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದೆ. ಕಳೆದ ಫೆಬ್ರವರಿ 24ರಂದು ವಿಷಯ ತಜ್ಞರ ಸಮಿತಿಯು ಈ ಬಗ್ಗೆ ಮೊದಲೇ ಚರ್ಚೆ ನಡೆಸಿದ್ದು, ಪರಿಷ್ಕೃತ ವೈದ್ಯಕೀಯ ಪ್ರಯೋಗದ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಸದ್ಯ ದೇಶದಲ್ಲಿ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡಲು ಐಸಿಎಂಆರ್ ಅನುಮೋದನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+