ಭೀಮಾ ಕೊರೆಗಾಂವ್ ಹಿಂಸಾಚಾರ: ವಿಚಾರವಾದಿಗಳ ಗೃಹಬಂಧನ ವಿಸ್ತರಣೆ
ನವದೆಹಲಿ, ಸೆಪ್ಟೆಂಬರ್ 12: ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣದ ಐವರು ಆರೋಪಿ ವಿಚಾರವಾದಿಗಳ ಗೃಹಬಂಧನದ ಅವಧಿಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 17ರವರೆಗೂ ವಿಸ್ತರಿಸಿದೆ.
ಬುಧವಾರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಮೂವರು ಸದಸ್ಯರ ನ್ಯಾಯಪೀಠ ಈ ಐವರು ವಿಚಾರವಾದಿಗಳ ವಿರುದ್ಧದ ಆರೋಪದ ಮುಂದಿನ ವಿಚಾರಣೆಯನ್ನು ಸೆ. 17ಕ್ಕೆ ನಿಗದಿಪಡಿಸಿತು. ಅಲ್ಲದೆ, ಈ ಅರ್ಜಿಗಳ ಜತೆಗೆ ಜೂನ್ನಲ್ಲಿ ಬಂಧನಕ್ಕೆ ಒಳಗಾಗಿದ್ದ ಇತರೆ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸಹ ನಡೆಸಲು ಒಪ್ಪಿಕೊಂಡಿತು.
ಭೀಮಾ ಕೊರೆಗಾಂವ್ ಯುದ್ಧದ 200ನೇ ವರ್ಷಾಚರಣೆ ಪ್ರಯುಕ್ತ ಈ ವರ್ಷದ ಜನವರಿಯಲ್ಲಿ ಪುಣೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಸಂಬಂಧ ಐವರು ವಿಚಾರವಾದಿಗಳಾದ ಸುಧಾ ಭಾರದ್ವಾಜ್, ಪಿ. ವರವರ ರಾವ್, ಗೌತಮ್ ನವ್ಲಂಕ, ಅರುಣ್ ಫೆರೀರಾ ಮತ್ತು ವೆರ್ನನ್ ಗೋನ್ಸಾಲ್ವೆಸ್ ಅವರನ್ನು ಆಗಸ್ಟ್ 28ರಂದು ವಿವಿಧ ನಗರಗಳಲ್ಲಿ ಬಂಧಿಸಲಾಗಿತ್ತು.

ಭೀಮಾ ಕೊರೆಗಾಂವ್ ಹಿಂಸಾಚಾರಕ್ಕೆ ಕುಮ್ಮಕ್ಕು, ಮಾವೋವಾದಿಗಳ ಜತೆ ನಂಟು ಮತ್ತು ಮೋದಿ ಹತ್ಯೆ ಸಂಚಿನ ಪ್ರಕರಣದಲ್ಲಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು.
ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದ ಮಹಾರಾಷ್ಟ್ರ ಸರ್ಕಾರ, ಈ ಕಾರ್ಯಕರ್ತರು ನಿಷೇಧಿತ ಉಗ್ರ ಸಂಘಟನೆಯಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಸದಸ್ಯರಾಗಿದ್ದಾರೆ ಎಂದು ಆರೋಪಿಸಿತ್ತು.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಸಿಗಬಹುದು ಪಿತೃತ್ವದ ರಜೆ, ಶೀಘ್ರದಲ್ಲೇ ಕಾನೂನು ಸಾಧ್ಯತೆ... Supreme Court -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications