ಭೀಮಾ ಕೋರೆಗಾಂವ್: ಬಂಧಿತ ಆರೋಪಿಗೆ ಐಎಸ್‌ಐ ನಂಟು ಆರೋಪ
ನವದೆಹಲಿ, ಅಕ್ಟೋಬರ್ 13: ಭೀಮಾ ಕೊರೆಗಾಂವ್ ಎಲ್ಗಲ್ ಪರಿಷದ್ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ತನ್ನ ಚಾರ್ಜ್‌ಷೀಟ್‌ನಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ ಅವರು ಕಾಶ್ಮೀರಿ ಪ್ರತ್ಯೇಕತಾವಾದಿಗಳು, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತು ಮಾವೊ ಉಗ್ರರೊಂದಿಗೆ ನಂಟು ಇರಿಸಿಕೊಂಡಿದ್ದರು ಎಂದು ಆರೋಪಿಸಿದೆ.
ಸುಮಾರು ಹತ್ತು ಸಾವಿರ ಪುಟಗಳ ಆರೋಪಪಟ್ಟಿ ಸಲ್ಲಿಸಿರುವ ಎನ್‌ಐಎ, ನವಲಖಾ ಮತ್ತು ಪಾಕಿಸ್ತಾನದ ಐಎಸ್‌ಐನ ಸಕ್ರಿಯ ಸದಸ್ಯ ಗುಲಾಂ ನಬಿ ಫಾಯಿ ಜತೆ ಸಂಬಂಧ ಇರುವುದು ಪತ್ತೆಯಾಗಿದ್ದಾಗಿ ಹೇಳಿದೆ.
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ನವಲಖಾ ಅವರನ್ನು ಎನ್‌ಐಎ ಬಂಧಿಸಿತ್ತು. ಕಾಶ್ಮೀರಿ ಅಮೆರಿಕನ್ ಕೌನ್ಸಿಲ್ ಉದ್ದೇಶಿಸಿದ ಭಾಷಣ ಮಾಡಲು ಅವರು 2010-11ರ ಸಮಯದಲ್ಲಿ ಅಮೆರಿಕಕ್ಕೆ ಮೂರು ಬಾರಿ ತೆರಳಿದ್ದರು. 2011ರಲ್ಲಿ ಎಫ್‌ಬಿಐನಿಂದ ಬಂಧನಕ್ಕೆ ಒಳಗಾದ ಗುಲಾಂ ನಬಿ ಫಾಯಿ ಬಿಡುಗಡೆಗಾಗಿ ಅವರ ಪರ ಅಮೆರಿಕದ ನ್ಯಾಯಾಧೀಶರೊಬ್ಬರಿಗೆ ಪತ್ರ ಬರೆದಿದ್ದರು ಎಂದು ಆರೋಪಿಸಿದೆ.

ಫಾಯಿ ಮೂಲಕ ಪಾಕಿಸ್ತಾನದ ಸೇನೆಯ ಜನರಲ್‌ಗಳಿಗೆ ನವಲಖಾ ಅವರ ಪರಿಚಯವಾಗಿತ್ತು. ಐಎಸ್‌ಐ ನಿರ್ದೇಶನದಂತೆ ಗುಲಾಂ ನಬಿ, ನವಲಖಾ ಅವರನ್ನು ನೇಮಿಸಿದ್ದ. ನವಲಖಾ ಬಳಿ ಇದ್ದ ಡಿಜಿಟಲ್ ಸಾಧನಗಳಿಂದ ವಶಪಡಿಸಿಕೊಳ್ಳಲಾದ ದಾಖಲೆಗಳಿಂದ ಅವರಿಗೆ ಮಾವೋವಾದಿಗಳು ಹಾಗೂ ಐಎಸ್‌ಐ ನಂಟು ಇರುವುದು ದೃಢಪಟ್ಟಿದೆ ಎಂದು ಎನ್‌ಐಎ ಹೇಳಿದೆ.
ಮತ್ತೊಬ್ಬ ಆರೋಪಿಯಾಗಿರುವ ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹನಿ ಬಾಬು ತಮ್ಮ ಮಾವೋವಾದಿ ಸಿದ್ಧಾಂತಗಳ ಮೂಲಕ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದರು. ದೆಹಲಿಯಲ್ಲಿನ ವಿದ್ಯಾರ್ಥಿಗಳಲ್ಲಿ, ಮುಖ್ಯವಾಗಿ ದಲಿತರು ಹಾಗೂ ಇತರೆ ವಿದ್ಯಾರ್ಥಿಗಳಲ್ಲಿ ಮಾವೋವಾದಿಗಳ ಮೇಲೆ ಅನುಕಂಪ ಬರುವಂತೆ ಮಾಡಿದ್ದರು ಎಂದು ಆರೋಪಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications