• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿಚಾರವಾದಿಗಳ ಬಂಧನ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ NHRC

|
Google Oneindia Kannada News

ನವದೆಹಲಿ, ಆಗಸ್ಟ್ 29: ಭೀಮಾ ಕೊರೆಗಾಂವ್ ಗಲಭೆಯಲ್ಲಿ ವಿಚಾರವಾದಿಗಳ ಪಾತ್ರವಿದೆ ಎಂದು ಆರೋಪಿಸಿ ಕೆಲವು ವಿಚಾರವಾದಿಗಳನ್ನು ಬಂಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಸಮಿತಿ(NHRC) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಅಲ್ಲದೆ, ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟೀಸ್ ಸಹ ನೀಡಿದೆ.

ಏನಿದು ಭೀಮಾ ಕೊರೆಗಾಂವ್ ವಿವಾದ? ವಿಚಾರವಾದಿಗಳ ಬಂಧನ ಏಕೆ?ಏನಿದು ಭೀಮಾ ಕೊರೆಗಾಂವ್ ವಿವಾದ? ವಿಚಾರವಾದಿಗಳ ಬಂಧನ ಏಕೆ?

ವಿಚಾರವಾದಿಗಳ ಬಂಧನದ ಸಮಯದಲ್ಲಿ ಪೊಲೀಸರು ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು NHRC ದೂರಿದೆ.


ಕಳೆದ ಡಿಸೆಂಬರ್-ಜನವರಿಯಲ್ಲಿ ಮಹಾರಾಷ್ಟ್ರದಲ್ಲಿ ಭೀಮಾ ಕೊರೆಗಾಂವ್ ಯುದ್ಧದ 200 ನೇ ವರ್ಷಾಚರಣೆಯ ಸಂದರ್ಭದಲ್ಲಿ ನಡೆದ ಗಲಭೆಗೂ ಮತ್ತು ಮಾವೋ ಸಿದ್ಧಾಂತದ ಅನುಯಾಯಿಗಳಾದ ಕೆಲವು ವಿಚಾರವಾದಿಗಳಿಗೂ ನಂಟಿದೆ ಎಂದು ಆರೋಪಿಸಿ ಮಹಾರಾಷ್ಟ್ರ ಪೊಲೀಸರು ವಿಚಾರವಾದಿಗಳನ್ನು ಬಂಧಿಸಿದ್ದರು.

ಆಂಧ್ರದ ಕ್ರಾಂತಿಕಾರಿ ಕವಿ ವರವರ ರಾವ್, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಲೇಖಕ ಆನಂದ ತೆಲ್ತುಂಬ್ಡೆ, ಮಾನವ ಹಕ್ಕು ಕಾರ್ಯಕರ್ತ ಅರುಣ್, ಪತ್ರಕರ್ತ ಗೌತಮ್, ಮಾನವ ಹಕ್ಕುಗಳ ಕಾರ್ಯಕರ್ತೆ ಸುಸಾನ್ ಅಬ್ರಹಾಂ, ಸಾಮಾಜಿಕ ಹೋರಾಟಗಾರ ಗೊನ್ಸಾಲ್ವಿಸ್ ಅವರುಗಳನ್ನು ಬಂಧಿಸಲಾಗಿದ್ದು, ಈ ಕ್ರಮಕ್ಕೆ ದೇಶದಾದ್ಯಂತ ವಿಚಾರವಾದಿಗಳು, ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
The National Human Rights Commission has taken a suo motu cognisance of media reports about the arrest of five activists by the Maharashtra Police. And it sends a notice to Maharshtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X