ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

370ನೇ ವಿಧಿ ರದ್ದು; ಕಾಂಗ್ರೆಸ್‌ ಟೀಕಿಸಿದ ಭೂಪೇಂದ್ರ ಸಿಂಗ್ ಹೂಡಾ

|
Google Oneindia Kannada News

ನವದೆಹಲಿ , ಆಗಸ್ಟ್ 19 : "ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ. ಸರ್ಕಾರ ಸರಿಯಾಗಿದ್ದನ್ನು ಮಾಡಿದಾಗ ನಾವು ಅದನ್ನು ಒಪ್ಪಿಕೊಳ್ಳಬೇಕು" ಎಂದು ಭೂಪೇಂದ್ರ ಸಿಂಗ್ ಹೂಡಾ ಹೇಳಿದ್ದಾರೆ.

ಹರ್ಯಾಣದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಭೂಪೇಂದ್ರ ಸಿಂಗ್ ಹೂಡಾ ಹೇಳಿಕೆ ಪಕ್ಷದ ನಾಯಕರ ಅಚ್ಚರಿಗೆ ಕಾರಣವಾಗಿದೆ. "ನನ್ನ ಪಕ್ಷ ಸಣ್ಣ ಪ್ರಮಾಣದಲ್ಲಿ ದಾರಿ ತಪ್ಪಿದೆ" ಎಂದು ಅವರು ನೀಡಿರುವ ಹೇಳಿಕೆ ಹುಬ್ಬೇರುವಂತೆ ಮಾಡಿದೆ.

370ನೇ ವಿಧಿ ರದ್ದು ಮಾಡಿದ ಮೋದಿ ನಿರ್ಧಾರವನ್ನು ಹಾಡಿ ಹೊಗಳಿದ ಭಗವಾನ್370ನೇ ವಿಧಿ ರದ್ದು ಮಾಡಿದ ಮೋದಿ ನಿರ್ಧಾರವನ್ನು ಹಾಡಿ ಹೊಗಳಿದ ಭಗವಾನ್

"ಹರ್ಯಾಣದ ನಮ್ಮ ಸಹೋದರರು ಕಾಶ್ಮೀರದಲ್ಲಿ ನಿಯೋಜನೆಗೊಂಡಿದ್ದಾರೆ. ಈಗ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದರಿಂದ ಅನುಕೂಲವಾಗಿದೆ" ಎಂದು ಹೇಳಿರುವ ಹೂಡಾ, ಕೇಂದ್ರದ ತೀರ್ಮಾನವನ್ನು ಬೆಂಬಲಿಸಿದ್ದಾರೆ.

ಈ ಗಳಿಗೆಗಾಗಿ 70 ವರ್ಷದಿಂದ ಕಾದಿದ್ದೆವು: ಲಡಾಕ್ ಸಂಸದ ಸಂತಸಈ ಗಳಿಗೆಗಾಗಿ 70 ವರ್ಷದಿಂದ ಕಾದಿದ್ದೆವು: ಲಡಾಕ್ ಸಂಸದ ಸಂತಸ

Bhupinder Singh Hooda

"ಸರ್ಕಾರ ಸರಿಯಾಗಿದ್ದನ್ನು ಮಾಡಿದಾಗ ನಾವು ಅದನ್ನು ಒಪ್ಪಿಕೊಳ್ಳಬೇಕು. ಆದರೆ, ಇದನ್ನು ನಮ್ಮ ಹಲವು ಸಹೋದ್ಯೋಗಿಗಳು ವಿರೋಧಿಸುತ್ತಿದ್ದಾರೆ. ದೇಶಭಕ್ತಿ ಮತ್ತು ಆತ್ಮ ಗೌರವದ ವಿಚಾರಕ್ಕೆ ಬಂದರೆ ನಾನು ಯಾರೊಂದಿಗೂ ರಾಜಿ ಆಗುವುದಿಲ್ಲ" ಎಂದು ತಿಳಿಸಿದ್ದಾರೆ.

370 ನೇ ವಿಧಿ ರದ್ದು: ವಿಶ್ವಸಂಸ್ಥೆಗೆ ಚಾಡಿ ಹೇಳಲು ಹೊರಟಿತೇ ಚೀನಾ?370 ನೇ ವಿಧಿ ರದ್ದು: ವಿಶ್ವಸಂಸ್ಥೆಗೆ ಚಾಡಿ ಹೇಳಲು ಹೊರಟಿತೇ ಚೀನಾ?

"ನನ್ನ ಪಕ್ಷ ಸಣ್ಣ ಪ್ರಮಾಣದಲ್ಲಿ ದಾರಿ ತಪ್ಪಿದೆ. ಇದು ಹಳೆಯ ಕಾಂಗ್ರೆಸ್ ಆಗಿ ಉಳಿದಿಲ್ಲ" ಎಂದು ಭೂಪೇಂದ್ರ ಸಿಂಗ್ ಹೂಡಾ ಹೇಳಿದ್ದಾರೆ. 4 ದಶಕಗಳಿಂದ ಕಾಂಗ್ರೆಸ್‌ನಲ್ಲಿರುವ ನಾಯಕನ ಹೇಳಿಕೆ ಮುಂದಿನ ನಡೆ ಬಗ್ಗೆ ಕುತೂಹಲ ಹುಟ್ಟು ಹಾಕಿದೆ.

English summary
Congress leader and Former CM of Haryana Bhupinder Singh Hooda supported the scrapping of Article 370 and slammed own party by saying Congress has lost it's way.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X