ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking ಕೋವಿಡ್ ಭೀತಿಯ ನಡುವೆ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 25: ಬಿಹಾರ ವಿಧಾನಸಭೆಯ ಅವಧಿಯು ಅವಧಿಯು ನ. 29ರಂದು ಅಂತ್ಯಗೊಳ್ಳುತ್ತಿದೆ. 243 ಸದಸ್ಯ ಬಲ ಇರುವ ವಿಧಾನಸಭೆಯಲ್ಲಿ 38 ಸೀಟುಗಳು ಪರಿಶಿಷ್ಟ ಜಾತಿ ಮತ್ತು ಎರಡು ಸೀಟುಗಳನ್ನು ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಲಾಗಿದೆ.

ಕೊರೊನಾ ವೈರಸ್ ಭೀತಿಯ ನಡುವೆಯೇ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ಈ ಸಂಬಂಧ ಮುಖ್ಯ ಚುನಾವಣಾಧಿಕಾರಿ ಸುನೀಲ್ ಅರೋರಾ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬಿಹಾರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ. ಕೊರೊನಾ ವೈರಸ್ ಕಾರಣದಿಂದ ಅನೇಕ ದೇಶಗಳಲ್ಲಿ ಚುನಾವಣೆಗಳನ್ನು ಮುಂದೂಡಲಾಗಿದೆ. ಜನರ ಆರೋಗ್ಯ ರಕ್ಷಣೆಗೆ ವ್ಯವಸ್ಥಿತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ನಮ್ಮ ಜೀವನದಲ್ಲಿ ಹೊಸ ಸ್ವಾಭಾವಿಕ ಸ್ಥಿತಿ ನಿರ್ಮಾಣವಾಗುತ್ತಿದೆ. ಅದಕ್ಕೆ ಅನುಗುಣವಾಗಿ ಚುನಾವಣೆ ನಡೆಸಬೇಕಿದೆ ಎಂದು ಸುನಿಲ್ ಅರೋರಾ ತಿಳಿಸಿದ್ದಾರೆ.

ಮೂರು ಹಂತದಲ್ಲಿ ಚುನಾವಣೆ

ಮೂರು ಹಂತದಲ್ಲಿ ಚುನಾವಣೆ

ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ.

ಮೊದಲ ಹಂತದ ಚುನಾವಣೆ

ಮೊದಲ ಹಂತದ ಚುನಾವಣೆ

ಮೊದಲ ಹಂತದ ಚುನಾವಣೆಗೆ ಅ. 1ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಅ. 8ರಂದು ಅಂತಿಮ ದಿನ. ಅ. 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ. 12 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.

ಎರಡನೆಯ ಹಂತದ ಚುನಾವಣೆ

ಎರಡನೆಯ ಹಂತದ ಚುನಾವಣೆ

ಎರಡನೆಯ ಹಂತದ ಅಧಿಸೂಚನೆಯನ್ನು ಅ. 8ಕ್ಕೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಅ. 16 ಕೊನೆಯ ದಿನ. ಅ. 17 ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ. 19ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ನ. 3ರಂದು ಚುನಾವಣೆ ನಡೆಯಲಿದೆ.

ಮೂರನೇ ಹಂತದ ಚುನಾವಣೆ

ಮೂರನೇ ಹಂತದ ಚುನಾವಣೆ

3ನೇ ಹಂತದ ಚುನಾವಣೆಗೆ ಅಧಿಸೂಚನೆ ಅ. 13ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಸಲು ಕೊನೆಯ ದಿನ ಅ. 20, ಅ. 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. 23 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ನವೆಂಬರ್ 7ರಂದು ಚುನಾವಣೆ ನಡೆಯಲಿದೆ. ನವೆಂಬರ್ 10ರಂದು ಈ ಮೂರೂ ಹಂತಗಳ ಚುನಾವಣೆಯ ಮತ ಎಣಿಕೆ ನಡೆಯಲಿದೆ.

ಮೊದಲ ಚುನಾವಣೆ

ಮೊದಲ ಚುನಾವಣೆ

ಕೋವಿಡ್ 19 ಪಿಡುಗಿನ ನಡುವೆ ನಡೆಯಲಿರುವ ಮೊದಲ ಚುನಾವಣೆ ಇದಾಗಿದೆ. ಬಿಹಾರ ಚುನಾವಣೆಗೆ ಅತ್ಯಂತ ಕಠಿಣ ಯೋಜನೆಯನ್ನು ತೆಗೆದುಕೊಳ್ಳಬೇಕಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಹೀಗಾಗಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಜಾಸತ್ತಾತ್ಮಕ ಹಕ್ಕಿನ ಜತೆಗೆ ಜನರ ಆರೋಗ್ಯ ಮತ್ತು ಸುರಕ್ಷತೆಯನ್ನು ರಕ್ಷಿಸುವ ಪ್ರಮಾಣಿಕ ಪ್ರಯತ್ನದ ನಡುವೆ ಸಮತೋಲನ ನಡೆಸಬೇಕಿದೆ.

ಮತದಾನದ ನಿಯಮಗಳು

ಮತದಾನದ ನಿಯಮಗಳು

ಐದು ಜನರ ತಂಡ ಮಾತ್ರ ಮನೆಯಿಂದ ಮನೆಗೆ ತೆರಳಿ ಪ್ರಚಾರ ನಡೆಸಬಹುದು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಸಲುವಾಗಿ ಒಂದು ಮತಗಟ್ಟೆಯಲ್ಲಿ ಗರಿಷ್ಠ 1,000 ಮಂದಿ ಮತ ಚಲಾಯಿಸುವಂತೆ ಮಿತಿ ಹಾಕಲಾಗಿದೆ. ಇದರಿಂದ 2015ರಲ್ಲಿ 65,337 ಇದ್ದ ಮತಗಟ್ಟೆಗಳು, ಒಂದು ಲಕ್ಷಕ್ಕೂ ಹೆಚ್ಚಾಗಲಿವೆ. 16 ಲಕ್ಷಕ್ಕೂ ಅಧಿಕ ವಲಸಿಗರು ಮತದಾನದ ಹಕ್ಕು ಪಡೆದುಕೊಳ್ಳಲಿದ್ದಾರೆ.

ಸುರಕ್ಷತಾ ಕ್ರಮಗಳು

ಸುರಕ್ಷತಾ ಕ್ರಮಗಳು

ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್‌ನಂತಹ ಸುರಕ್ಷತಾ ಸಾಧನಗಳನ್ನು ಅಧಿಕಾರಿಗಳಿಗೆ ಒದಗಿಸಲಾಗುತ್ತದೆ. ಏಳು ಲಕ್ಷ ಘಟಕಕ್ಕೂ ಹೆಚ್ಚು ಸ್ಯಾನಿಟೈಸರ್‌ಗಳ ವ್ಯವಸ್ಥೆ ಮಾಡಲಾಗಿದೆ. 46 ಲಕ್ಷ ಮಾಸ್ಕ್, 6 ಲಕ್ಷ ಪಿಪಿಇ ಕಿಟ್, 6.7 ಲಕ್ಷ ಫೇಸ್ ಶೀಲ್ಡ್, 23 ಲಕ್ಷ ಜತೆ ಕೈಗವಸುಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮತದಾರರಿಗಾಗಿ 7.2 ಕೋಟಿ ಏಕ ಬಳಕೆಯ ಕೈಗವಸುಗಳನ್ನು ಒದಗಿಸಲಾಗುತ್ತದೆ.

ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಿಸಲಾಗುತ್ತದೆ. ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗುವುದು. ಕೋವಿಡ್ ರೋಗಿಗಳು ಕೊನೆಯ ಒಂದು ಗಂಟೆಯಲ್ಲಿ ಮತದಾನ ಮಾಡಬಹುದಾಗಿದೆ. ಅವರಿಗೆ ಅಂಚೆ ಮತದಾನದ ಅವಕಾಶವನ್ನೂ ನೀಡಲಾಗಿದೆ.

ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆ

ಅಫಿಡವಿಟ್‌ಗಳನ್ನು ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿ. 80ಕ್ಕಿಂತ ಹೆಚ್ಚು ವಯಸ್ಸಾದ ಮತದಾರರಿಗೆ ಅಂಚೆ ಮತಕ್ಕೆ ಅವಕಾಶ ನೀಡಲಾಗುತ್ತದೆ. ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಜತೆ ಇಬ್ಬರು ಮಾತ್ರವೇ ತೆರಳಬಹುದು.

ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗಳು ದೈಹಿಕ ಪ್ರಚಾರಕ್ಕೆ ಸ್ಥಳಗಳನ್ನು ಗುರುತಿಸಲಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವೃತ್ತಗಳನ್ನು ಹಾಕಲಿದ್ದಾರೆ. ಸೆ. 14 ಮತ್ತು 15ರಂದು ತೆರಳಿ ಪರಿಶೀಲನೆ ನಡೆಸಿದ್ದು, ಅಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ದಿನಾಂಕದ ಘೋಷಣೆಯಾದ ತಕ್ಷಣದಿಂದಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಸಾಮಾಜಿಕ ಜಾಲತಾಣಗಳ ದುರ್ಬಳಕೆಯನ್ನು ತಡೆಯಲು ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಬಿಹಾರ ಚುನಾವಣೆಗೆ ವಿಶೇಷ ವೀಕ್ಷಕರನ್ನು ನೇಮಿಸಲಾಗುತ್ತಿದೆ. ಅಗತ್ಯಬಿದ್ದಲ್ಲಿ ಉಪ ಚುನಾವಣೆಗಳನ್ನು ನಡೆಸಲಾಗುತ್ತದೆ. ಕ್ವಾರೆಂಟೈನ್‌ನಲ್ಲಿರುವ ಕೋವಿಡ್ ರೋಗಿಗಳು ಚುನಾವಣೆಯ ಕೊನೆಯ ದಿನ ಮತ ಚಲಾಯಿಸಬಹುದು.

English summary
Bihar Assembly Election 2020: The Election Commission Of India has announces dates for Bihar assembly election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X