Get Updates
Get notified of breaking news, exclusive insights, and must-see stories!

ಬಿಹಾರ ವಿಧಾನಸಭೆ ಚುನಾವಣೆ: ಅಚ್ಚರಿಯ ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ ವಾದ್ರಾ!

ಬಿಹಾರ ವಿಧಾನಸಭೆ ಚುನಾವಣೆ 2025ರ ಮೊದಲ ಹಂತದ ಮತದಾನ ಬಿರುಸಿನಿಂದ ನಡೆದಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಗೆ ಒಂದು ದಿನ ಬಾಕಿ ಇರುವಾಗ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಂದಾಜು 25 ಲಕ್ಷ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೂರಿದ್ದರು. ದಾಖಲೆಗಳ ಸಹಿತ ಅವರು ಪತ್ರಿಕಾಗೋಷ್ಠಿ ಮಾಡಿದ್ದರು. ಇದೀಗ ಪ್ರಿಯಾಂಕಾ ಗಾಂಧಿ ಅವರು ಸಹ ಚುನಾವಣೆ ಮುಕ್ತಾಯಕ್ಕೂ ಮುಂಚೆಯೇ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯನ್ನು ನೋಡಿದರೆ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಬಗ್ಗೆ ಪ್ರಿಯಾಂಕಾ ಗಾಂಧಿ ಅವರು ಪರೋಕ್ಷವಾಗಿ ಅನುಮಾನ ವ್ಯಕ್ತಪಡಿಸುತ್ತಿರುವಂತೆಯೂ ಇದೆ. ಆದರೆ ಅವರು ಈ ಕುರಿತು ನಿರ್ದಿಷ್ಟವಾಗಿ ಏನನ್ನೂ ಹೇಳಿಲ್ಲ. ಅಲ್ಲದೇ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಗೆಲ್ಲುವ ಭರವಸೆಯನ್ನೂ ಅವರು ವ್ಯಕ್ತಪಡಿಸಿದ್ದಾರೆ. ಹಾಗಾದರೆ ಬಿಹಾರ ವಿಧಾನಸಭೆ ಚುನಾವಣೆ ಹಾಗೂ ಫಲಿತಾಂಶದ ಬಗ್ಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದೇನು ಎನ್ನುವ ವಿವರ ನೋಡೋಣ.

Bihar Assembly Elections 2025 Priyanka Gandhi Vadra makes a surprising statement

ಬಿಹಾರ ವಿಧಾನಸಭೆ ಚುನಾವಣೆಯನ್ನ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಿದ್ದೇ ಆದರೆ ಎನ್‌ಡಿಎ ಸರ್ಕಾರವು ಪತನವಾಗುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ. ಬಿಹಾರದಲ್ಲಿ ಎರಡು ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ನವೆಂಬರ್ 06 ಗುರುವಾರದಂದು ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆದಿದೆ. ಬಿಹಾರದಲ್ಲಿ ಎರಡನೇ ಹಂತದ ವಿಧಾನಸಭೆ ಚುನಾವಣೆ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾತನಾಡಿದ್ದಾರೆ.

ಬಿಹಾರದಲ್ಲಿ ಬಡವರು, ದಲಿತರು, ಮಹಿಳೆಯರು ಹಾಗೂ ಯುವಜನರನ್ನು ಒಳಗೊಂಡಿರುವ ಹಾಗೂ ಜನಪರ ಕೆಲಸ ಮಾಡುವ ಸರ್ಕಾರವನ್ನು ನಾವು ರಚನೆ ಮಾಡಲಿದ್ದೇವೆ ಎಂದು ಜನರಿಗೆ ಅವರು ಭರವಸೆ ನೀಡಿದ್ದಾರೆ. ದೇಶದ ಅಭಿವೃದ್ಧಿಗಾಗಿ ಅಪಾರ ಕೊಡುಗೆ ನೀಡಿರುವ ಬಿಹಾರದ ಜನರ ಬಗ್ಗೆ ಎನ್‌ಡಿಎ ಸರ್ಕಾರಕ್ಕೆ ಸ್ವಲ್ಪವೂ ಗೌರವವಿಲ್ಲ ಎಂದು ಅವರು ಬಿಜೆಪಿ ಹಾಗೂ ಮಿತ್ರಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದುವರಿದು ಬಿಹಾರದಲ್ಲಿ ಅಭಿವೃದ್ಧಿಯ ಬದಲಾಗಿ ಧರ್ಮದ ಆಧಾರದ ಮೇಲೆ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸುತ್ತಿದ್ದಾರೆ. ಬಿಹಾರದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಬರೋಬ್ಬರಿ 27 ಸೇತುವೆಗಳು ಕುಸಿದಿವೆ. ಈ ರಾಜ್ಯದಲ್ಲಿನ ಕಳಪೆ ಮೂಲಸೌಕರ್ಯವೇ ಇದಕ್ಕೆ ಕಾರಣ ಎಂದು ಅವರು ದೂರಿದ್ದಾರೆ. ಬಿಹಾರದಲ್ಲಿ ಕಳಪೆ ಮೂಲಸೌಕರ್ಯವು ಮಿತಿ ಮೀರಿದೆ ಎಂದು ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+