ಆಧಾರ್ ಕಾರ್ಡ್‌ಗೆ ಚಿಪ್: 2000 ನೋಟ್ ಚಿಪ್ ಕಥೆಯಲ್ಲ! ಏನಿದು ಹೊಸ ಚರ್ಚೆ
Aadhaar Card Chip Debate: ಕೇಂದ್ರ ಬಿಜೆಪಿ ಸರ್ಕಾರವು 2016ನೇ ಸಾಲಿನಲ್ಲಿ 2,000 ಸಾವಿರ ರೂಪಾಯಿ ನೋಟುಗಳನ್ನು ಪರಿಚಯಿಸಿತ್ತು. ದೇಶದಾದ್ಯಂತ ನೋಟ್ ಬ್ಯಾನ್ ಆದ ಮೇಲೆ ಪರಿಚಯಿಸಿದ್ದ ಈ ನೋಟಿನ ಬಗ್ಗೆ ಜನರಲ್ಲಿ ಸಹಜವಾಗಿಯೇ ಕುತೂಹಲಗಳು ಇದ್ದವು. ಅಲ್ಲದೇ 2,000 ಸಾವಿರ ರೂಪಾಯಿ ನೋಟು ಪರಿಚಯಿಸುವುದಕ್ಕೆ ಮುಖ್ಯ ಕಾರಣ 500 ಹಾಗೂ 1000 ಸಾವಿರ ರೂಪಾಯಿಗಳ ಬ್ಯಾನ್ ಆಗಿದ್ದು ಸಹ ಒಂದು. ಆದರೆ ಆ ಸಂದರ್ಭದಲ್ಲಿ 2000 ಸಾವಿರ ರೂಪಾಯಿ ನೋಟಿನಲ್ಲಿ ಚಿಪ್ ಇದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿತ್ತು.
ಇದೀಗ ಆಧಾರ್ ಕಾರ್ಡ್‌ಗೂ ಚಿಪ್ ಅಳವಡಿಸುವ ಬಗ್ಗೆ ದೇಶದಲ್ಲಿ ಹೊಸ ಚರ್ಚೆಯೊಂದು ಶುರುವಾಗಿದೆ. ಆದರೆ ಇದು 2000 ಸಾವಿರ ರೂಪಾಯಿಯ ನೋಟಿನಂತೆ ಅಲ್ಲ. ಹೌದು 2,000 ಸಾವಿರ ರೂಪಾಯಿ ನೋಟಿನಲ್ಲಿ ಚಿಪ್ ಇದೆ ಎನ್ನುವ ವದಂತಿ ಹಬ್ಬಿತ್ತು. ಆಗ ಕೆಲವೊಂದು ಮಾಧ್ಯಮಗಳು ಸಹ ಈ ವಿಷಯವನ್ನು ಸುದ್ದಿ ಮಾಡಿದ್ದವು. ಅಲ್ಲದೇ ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ಇದೀಗ ಬಿಹಾರದ ವಿಧಾನಸಭೆ ಚುನಾವಣೆಯ ಬೆನ್ನಲ್ಲೇ ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಏನಿದು ಆಧಾರ್ ಕಾರ್ಡ್‌ನಲ್ಲಿ ಚಿಪ್ ಹಾಗೂ ಬಿಹಾರ ವಿಧಾನಸಭೆ ಚುನಾವಣೆಗೂ ಇದಕ್ಕೂ ಏನು ಸಂಬಂಧ ಎನ್ನುವ ವಿವರ ಇಲ್ಲಿದೆ.

ಬಿಹಾರ ವಿಧಾನಸಭೆ ಚುನಾವಣೆಯು ಹಲವು ಕಾರಣಗಳಿಗೆ ಚರ್ಚೆಯಲ್ಲಿದೆ. ಬಿಹಾರದಲ್ಲಿ ಈ ಭಾರಿ ಜಿದ್ದಾಜಿದ್ದಿನ ಪೈಪೋಟಿ ಇದೆ. ಇದೀಗ ನ್ಯಾಯಯುತ ಚುನಾವಣೆಗಳನ್ನು ನಡೆಸಲು ಹಾಗೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ ನಕಲಿ ಮತಗಳನ್ನು ಚಲಾಯಿಸುವುದನ್ನು ತಪ್ಪಿಸುವ ಉದ್ದೇಶದಿಂದ ಆಧಾರ್ ಕಾರ್ಡ್‌ಗಳಿಗೆ ಚಿಪ್ ಅಳವಡಿಸುವುದು ಒಳ್ಳೆಯದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಒತ್ತಾಯಿಸಿದ್ದಾರೆ.
ಆಧಾರ್ ಕಾರ್ಡ್‌ಗೆ ಚಿಪ್ ಅಳವಡಿಕೆ ಎನ್ನುವುದು ಹೊಸ ಸಂಚಲನವನ್ನು ಸೃಷ್ಟಿ ಮಾಡಿದೆ. ಅಖಿಲೇಶ್ ಅವರು, ದೇಶದಾದ್ಯಂತ ಜಾತಿ ಜನಗಣತಿಯನ್ನು ಪ್ರಾರಂಭಿಸಿದರೆ, ಮೀಸಲಾತಿಯನ್ನು ಸರಿಯಾಗಿ ಜಾರಿಗೆ ತರಲಾಗುತ್ತದೆ. ಹಿಂದುಳಿದ ಸಮುದಾಯದ ಜನರ ಸಮಸ್ಯೆಗಳನ್ನು ಪರಿಹರ ಮಾಡಿದಂತೆ ಆಗುತ್ತದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಸರ್ಕಾರ ಸಮಾಜದಲ್ಲಿ ದ್ವೇಷವನ್ನು ಬಂಡವಾಳವನ್ನಾಗಿಸಿಕೊಳ್ಳಲಾಗಿದೆ. ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವನ್ನು ಮುರಿಯಲಾಗಿದೆ ಎಂದೂ ಹೇಳಿದ್ದಾರೆ.
ಆದರೆ, ಅಖಿಲೇಶ್ ಯಾದವ್ ಅವರು ಮಾತನಾಡಿರುವ ವಿಚಾರಗಳಲ್ಲೇ ಹೆಚ್ಚು ಮಹತ್ವ ಹಾಗೂ ಚರ್ಚೆಗೆ ಗ್ರಾಸವಾಗಿರುವುದು ಆಧಾರ್ ಕಾರ್ಡ್‌ಗೆ ಚಿಪ್ ಅಳವಡಿಸಬೇಕು ಎನ್ನುವುದು. ಆಧಾರ್ ಕಾರ್ಡ್‌ಗೆ ಚಿಪ್ ಅಳವಡಿಕೆ ಮಾಡುವುದು ಸುಲಭವಲ್ಲ. ಅಲ್ಲದೇ ಇದು ಕಾರ್ಯಸಾಧ್ಯವೂ ಇಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದು. ಈ ವಿಚಾರವು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಸಹ ಆಗುತ್ತಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications