Bihar Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 13 ಸಾವು; 20ಕ್ಕೂ ಹೆಚ್ಚು ಮಂದಿ ನಾಪತ್ತೆ, ದುರಂತಕ್ಕೆ ಕಾರಣವೇನು

ಬಿಹಾರದಲ್ಲಿ ಭಾರೀ ದೊಡ್ಡ ದೋಣಿ ದುರಂತ ಸಂಭವಿಸಿದೆ. ಬಿಹಾರದ ವೈಶಾಲಿ ಜಿಲ್ಲೆಯ ರಾಂಪುರ ಶ್ಯಾಮಚಂದ್ ಗ್ರಾಮದ ಬಳಿ ಮಂಗಳವಾರ ಸಂಜೆ ಗಂಗಾ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಮಧ್ಯಮ ಗಾತ್ರದ ದೋಣಿಯಲ್ಲಿ ಸುಮಾರು 25 ರಿಂದ 30 ಜನರು ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುತ್ತಿದ್ದರು. ಅವರಲ್ಲಿ ಹೆಚ್ಚಿನವರು ಹಿಂದೂ ಅಂತ್ಯಕ್ರಿಯೆಯ ಆಚರಣೆಗಳ ಭಾಗವಾಗಿ ಆಯೋಜಿಸಲಾದ ಶ್ರದ್ಧಾದಲ್ಲಿ ಭಾಗವಹಿಸುವವರಿದ್ದರು ಎಂದು ಹೇಳಲಾಗಿದೆ. ಹೆಚ್ಚು ಜನ ಇನ್ನೂ ಕಾಣೆಯಾಗಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ದೋಣಿ ದುರಂತದಲ್ಲಿ ಮೃತಪಟ್ಟವರಲ್ಲಿ ಮಕ್ಕಳು ಸಹ ಇದ್ದಾರೆ ಎಂದು ಹೇಳಲಾಗಿದೆ.

ಬಿಹಾರದ ರಾಘೋಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನದಿಯ ಒಂದು ದಡದಿಂದ ಮತ್ತೊಂದು ದಡಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿದೆ. ದೋಣಿಯಲ್ಲಿನ ಅಸಮತೋಲನದಿಂದ ಅದು ಮುಳುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಏನು ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ.

Bihar Boat Accident Several Dead Over 20 Missing After Boat Capsizes in Ganga What Caused the Tragedy

ದೋಣಿ ಮುಗಿಚಿದ ಸಂದರ್ಭದಲ್ಲಿ ಕೆಲವು ಪ್ರಯಾಣಿಕರು ಸುರಕ್ಷಿತವಾಗಿ ಈಜುವಲ್ಲಿ ಯಶಸ್ವಿಯಾದರು, ಇತರರು ಮುಳುಗಿ ಸಾವನ್ನಪ್ಪಿದರು. ಘಟನೆಯನ್ನು ನೋಡಿದ ನಂತರ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ಸೇರಿದಂತೆ ರಕ್ಷಣಾ ತಂಡಗಳು ಕಾಣೆಯಾದ ಪ್ರಯಾಣಿಕರಿಗಾಗಿ ನದಿಯಲ್ಲಿ ಹುಡುಕಾಟ ನಡೆಸುತ್ತಿವೆ.

ಕತ್ತಲೆ ಮತ್ತು ಆಳವಾದ ನೀರು ರಕ್ಷಣಾ ಪ್ರಯತ್ನಗಳಿಗೆ ಅಡ್ಡಿಯಾಗಿದೆ. ರಾಘೋಪುರ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಸೀಮಾ ಕುಮಾರಿ ಘಟನೆಯನ್ನು ದೃಢಪಡಿಸಿದರು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದಂತೆ ದೋಣಿಯು ಒಂದು ನದಿ ದಂಡೆಯಿಂದ ಮತ್ತೊಂದು ನದಿ ದಂಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು ಎಂದು ಹೇಳಲಾಗಿದೆ.

ಬಿಹಾರದ ವೈಶಾಲಿ ಜಿಲ್ಲೆಯ ಗಂಗಾ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಬಿದ್ದ ಪರಿಣಾಮ ಮಕ್ಕಳು ಸೇರಿದಂತೆ ಕನಿಷ್ಠ 13 ಜನ ಮೃತಪಟ್ಟಿದ್ದಾರೆ. ದೋಣಿಯಲ್ಲಿ 15 ರಿಂದ 20 ಜನರು ಪ್ರಯಾಣಿಸುತ್ತಿದ್ದರು ವೈಶಾಲಿಯ ರಾಘೋಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಪಘಾತದ ನಂತರ ಸ್ಥಳಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್‌ಡಿಆರ್‌ಎಫ್ ತಂಡಗಳನ್ನು ಸಹ ಪ್ರದೇಶಕ್ಕೆ ನಿಯೋಜಿಸಲಾಗಿದೆ.

ನದಿಯಲ್ಲಿ ಕಾಣೆಯಾದವರ ಹುಡುಕಾಟದಲ್ಲಿ ಸ್ಥಳೀಯ ಗ್ರಾಮಸ್ಥರು ಸಹ ಆಡಳಿತದೊಂದಿಗೆ ಸಹಕರಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಆಡಳಿತವು ಇಡೀ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಆರ್ಥಿಕ ಸಹಾಯವನ್ನು ಘೋಷಿಸಿದರು.

"ವೈಶಾಲಿಯ ರಘುಪುರದಲ್ಲಿ ನಡೆದ ದೋಣಿ ಅಪಘಾತದಲ್ಲಿ ಅಮಾಯಕರು ಸಾವನ್ನಪ್ಪಿದ ಸುದ್ದಿ ಅತ್ಯಂತ ಹೃದಯವಿದ್ರಾವಕವಾಗಿದೆ. ಈ ಕಷ್ಟದ ಸಮಯದಲ್ಲಿ, ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ದೇವರು ಅಗಲಿದವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬಗಳಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ" ಎಂದು ಚೌಧರಿ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ರಘೂಪುರ ದಿಯಾರಾ ಪ್ರದೇಶದಲ್ಲಿ ದೋಣಿ ಮುಳುಗಿ ದುರಂತ ಸಂಭವಿಸಿರುವ ಸುದ್ದಿ ತಿಳಿಯಿತು. ಈ ದುರಂತದಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು. ದೇವರು ಎಲ್ಲರನ್ನೂ ಸುರಕ್ಷಿತವಾಗಿರಿಸಲಿ. ಸ್ಥಳೀಯರು, ಆಡಳಿತ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ, ಪರಿಹಾರ, ರಕ್ಷಣಾ ಹಾಗೂ ಚಿಕಿತ್ಸೆ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರು ಹೇಳಿದ್ದಾರೆ.

ಬಿಹಾರದ ಸಮಸ್ತಿಪುರದಲ್ಲಿ ದೋಣಿ ಮಗುಚಿ ದುರಂತ ಸಂಭವಿಸಿತ್ತು

ಇನ್ನು ಈ ವರ್ಷದ ಆರಂಭದಲ್ಲಿ, ಮೇ ತಿಂಗಳಲ್ಲಿ ಬಿಹಾರದ ಸಮಸ್ತಿಪುರ ಜಿಲ್ಲೆಯ ಸುಲ್ತಾನಪುರ ದಿಯಾರಾ ಬಳಿ ಗಂಗಾ ನದಿಯಲ್ಲಿ 14 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿದ ನಂತರ ಕನಿಷ್ಠ ಮೂರು ಜನರು ಮೃತಪಟ್ಟಿದ್ದರು ಹಾಗೂ ನಾಲ್ವರು ನಾಪತ್ತೆಯಾಗಿದ್ದರು. ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+