ಬಿಹಾರದಲ್ಲಿ ನಿತೀಶ್-ಮೋದಿ ಜೋಡಿಗೆ ಹಿನ್ನಡೆ; ಬಿಜೆಪಿ 1, ಆರ್‌ಜೆಡಿ 2

ಪಾಟ್ನಾ, ಮಾರ್ಚ್ 14: ಬಿಹಾರ ಉಪಚುನಾವಣೆಯಲ್ಲೂ ಬಿಜೆಪಿ ಮುಗ್ಗರಿಸಿದೆ. ಬಿಜೆಪಿ ಮತ್ತು ಜೆಡಿಯು ಮೈತ್ರಿಕೂಟಕ್ಕೆ ಇಲ್ಲಿ ಹಿನ್ನೆಡೆಯಾಗಿದ್ದು ಮೂರು ಕ್ಷೇತ್ರಗಳಲ್ಲಿ ಎರಡರಲ್ಲಿ ಆರ್.ಜೆ.ಡಿ ಜಯ ಸಾಧಿಸಿದೆ. ಒಂದರಲ್ಲಿ ಮಾತ್ರ ಬಿಜೆಪಿ ಗೆದ್ದಿದ್ದು ಮರ್ಯಾದೆ ಉಳಿಸಿಕೊಂಡಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಅರಾರಿಯಾ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆರ್.ಜೆ.ಡಿ ಅಭ್ಯರ್ಥಿ 61,988 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಲ್ಲಿ ಆರ್.ಜೆ.ಡಿ ಅಭ್ಯರ್ಥಿ 5,09,334 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ 4,47,346 ಮತಗಳನ್ನು ಪಡೆದಿದ್ದಾರೆ. ಇಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಪರವಾಗಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿದಿದ್ದರು.

2014ರಲ್ಲಿ ಇದೇ ಕ್ಷೇತ್ರದಲ್ಲಿ ಆರ್.ಜೆ.ಡಿ ಅಭ್ಯರ್ಥಿ 4,07,978 ಮತಗಳನ್ನು ಪಡೆದು ಸುಮಾರು ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

Bihar bypoll: BJP wins Bhabua and RJD wins in Araria and Jehanabad

ಇದೇ ವೇಳೆ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿಯೂ ಆರ್.ಜೆ.ಡಿ ಒಂದು ಸ್ಥಾನವನ್ನು ಗೆದ್ದುಕೊಂಡಿದ್ದು ಮತ್ತೊಂದು ಸ್ಥಾನ ಬಿಜೆಪಿ ಪಾಲಾಗಿದೆ.

ಭಬುವಾ ಕ್ಷೇತ್ರದಲ್ಲಿ ಮೈತ್ರಿಕೂಟದ ಕಡೆಯಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ರಿಂಕಿ ರಾಣಿ ಗೆಲುವು ಸಾಧಿಸಿದ್ದಾರೆ.

ಇನ್ನು ಜೆಹನಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಜನತಾ ದಳ (ಆರ್.ಜೆ.ಡಿ) ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಒಟ್ಟಾರೆ ಬಿಹಾರದಲ್ಲಿ ನಡೆದ ಮೂರು ಉಪಚುನಾವಣೆಗಳಲ್ಲಿ ಆರ್.ಜೆ.ಡಿ ಎರಡನ್ನು ಗೆದ್ದುಕೊಂಡಿದೆ.

ತಮ್ಮ ಪಕ್ಷ ಗೆಲುವು ಸಾಧಿಸುತ್ತಿದ್ದಂತೆ ಸಂಚುಕೋರರು ಸೋತಿದ್ದಾರೆ ಎಂದು ಜೈಲಿನಿಂದಲೇ ಬಿಜೆಪಿ-ಜೆಡಿಯು ವಿರುದ್ಧ ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅಬ್ಬರಿಸಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಗೆ ಮಮತಾ ಬ್ಯಾನರ್ಜಿ ಅಭಿನಂದನೆ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+