ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್‌ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ
Bihar CM: ಭಾರತದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ಮೈತ್ರಿ ಪಕ್ಷ (ಎನ್‌ಡಿಎ ಮೈತ್ರಿಕೂಟ) ಜೆಡಿಯು ಪಕ್ಷದ ಈ ನಡೆಯು ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ದಾಖಲೆಯ ಹತ್ತನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಾಲ್ಕು ತಿಂಗಳ ನಂತರ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇದು ದೇಶದಲ್ಲಿ ಪ್ರಮುಖ ರಾಜಕೀಯ ಬದಲಾವಣೆಗೆ ಕಾರಣವಾಗುವ ಮತ್ತು ಬಿಹಾರದಲ್ಲಿ ಮೊದಲ ಬಾರಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಅವಕಾಶ ಮಾಡಿಕೊಡುವ ಉದ್ದೇಶವನ್ನು ಒಳಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬೆಳಿಗ್ಗೆ 11:30ಕ್ಕೆ ಬಿಹಾರ ರಾಜ್ಯ ವಿಧಾನಸಭೆಗೆ ಆಗಮಿಸಲಿದ್ದಾರೆ. ಅವರ ಪಕ್ಷದ ನಾಯಕ ರಾಮನಾಥ್ ಠಾಕೂರ್ ಅವರು ಸಹ ಜನತಾದಳ (ಯುನೈಟೆಡ್) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾರ್ಚ್ 1ರಂದು ನಿತೀಶ್ ಕುಮಾರ್ ಅವರಿಗೆ 75 ವರ್ಷ ವಯಸ್ಸಾಗಿದೆ. ಇದಾದ ನಾಲ್ಕು ದಿನಗಳಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬಿಹಾರದ ವಿಧಾನಸಭೆ ಚುನಾವಣೆ ನಡೆಯುವ ಸಂದರ್ಭದಲ್ಲಿಯೇ ಈ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಆಯ್ಕೆಯಾಗುವ ಸಾಧ್ಯತೆ ವಿರಳ ಎಂದು ಕೆಲವರು ಹೇಳಿದ್ದರು. ಆದರೆ ಬಿಜೆಪಿ ಹಾಗೂ ಜೆಡಿಯು ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ಹೇಳಿತ್ತು. ಆದರೆ ಇದೀಗ ಚುನಾವಣೆ ನಡೆದ ನಾಲ್ಕೇ ತಿಂಗಳಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಸ ಸರ್ಕಾರದ ಕುರಿತು ಮಾತನಾಡುವ ಸಾಧ್ಯತೆ ಇದೆ. ಅಮಿತ್ ಶಾ ಅವರು ಗುರುವಾರ ಪಾಟ್ನಾದಲ್ಲಿ ಪ್ರವಾಸದಲ್ಲಿದ್ದಾರೆ ಮತ್ತು ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ಹಾಜರಿರಲಿದ್ದಾರೆ ಎಂದು ಹೇಳಲಾಗಿದೆ. ನಾಮನಿರ್ದೇಶನ ಪ್ರಕ್ರಿಯೆಯ ನಂತರ ಶಾ, ಕುಮಾರ್ ಮತ್ತು ಇತರ ಎನ್‌ಡಿಎ ನಾಯಕರ ನಡುವೆ ಸಭೆ ನಡೆಯುವ ನಿರೀಕ್ಷೆ ಇದೆ. ಇನ್ನು ಈ ಮಹತ್ವದ ಸಭೆಯಲ್ಲಿ ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಯು ಮೈತ್ರಿಕೂಟವು ಅಧಿಕಾರದಲ್ಲಿದೆ. ಇನ್ನು ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 89 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಹಾರದ ಏಕೈಕ ಅತಿದೊಡ್ಡ ಪಕ್ಷವಾಗಿ ಬದಲಾಗಿದೆ. ಹೀಗಾಗಿ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದರೆ, ಬಿಜೆಪಿ ಬಿಹಾರದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಕೇಳುವ ಸಾಧ್ಯತೆ ಇದೆ. ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ, ಜೆಡಿ(ಯು)ಗೆ ಎರಡು ಉಪಮುಖ್ಯಮಂತ್ರಿ ಹುದ್ದೆಗಳನ್ನು ನೀಡಬಹುದು.

ರಾಜ್ಯಸಭೆ ಆಯ್ಕೆಯ ಬಗ್ಗೆ ಜೆಡಿ(ಯು) ಪಕ್ಷ ಹೇಳಿದ್ದೇನು
ಇನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಜೆಡಿ(ಯು) ಪಕ್ಷ ಸಹ ದೃಢಪಡಿಸಿದೆ. ರಾಜ್ಯಸಭೆಗೆ ನಿತೀಶ್ ಕುಮಾರ್ ಅವರ ಆಯ್ಕೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಜೆಡಿ(ಯು) ಹಿರಿಯ ನಾಯಕ ಮತ್ತು ಸಚಿವ ವಿಜಯ್ ಕುಮಾರ್ ಚೌಧರಿ ಹೇಳಿದ್ದಾರೆ.
ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯು ನಿತೀಶ್ ಕುಮಾರ್ ಅವರ ಒಪ್ಪಿಗೆಯೊಂದಿಗೆ ನಡೆಯುತ್ತಿದೆ. ನಿತೀಶ್ ಕುಮಾರ್ ಏನು ಬಯಸುತ್ತಾರೋ ಅದೇ ಆಗುತ್ತದೆ. ನಿರ್ಧಾರವನ್ನು ನಿತೀಶ್ ಕುಮಾರ್ ಮಾತ್ರ ತೆಗೆದುಕೊಳ್ಳಬೇಕು ಎಂದು ಚೌಧರಿ ಹೇಳಿದ್ದಾರೆ.
ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾಗುತ್ತಿರುವ ಬಗ್ಗೆ ಕೆಲವು ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಅಸಮಾಧಾನ ಇರಬಹುದು ಎಂದು ಪಕ್ಷದ ಮೂಲಗಳು ಒಪ್ಪಿಕೊಂಡಿವೆ. ಈ ಹಿನ್ನೆಲೆಯಲ್ಲಿ, ಹಿರಿಯ ನಾಯಕರು ಜೆಡಿ(ಯು) ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಝಾ ಅವರ ನಿವಾಸದಲ್ಲಿ ಚರ್ಚೆ ನಡೆಸಲಾಗಿದೆ. ಸಭೆಯ ನಂತರ ಚೌಧರಿ ವರದಿಗಾರರನ್ನುದ್ದೇಶಿಸಿ ಮಾತನಾಡಿದ್ದು, ಇದೆಲ್ಲವೂ ನಿತೀಶ್ ಕುಮಾರ್ ಅವರ ನಿರ್ಧಾರವಾಗಿದೆ ಎಂದು ಸ್ಪಷ್ಟಪಡಿಸುವುದಕ್ಕೆ ಪ್ರಯತ್ನಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ - ಎಚ್.ಡಿ. ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ
ಇನ್ನು ಕರ್ನಾಟಕದ ಹಿರಿಯ ರಾಜಕಾರಣಿಗಳ ರಾಜ್ಯಸಭಾ ಸದಸ್ಯತ್ವ ಅವಧಿ ಸಹ ಶೀಘ್ರದಲ್ಲೇ ಮುಕ್ತಾಯವಾಗಲಿದೆ. ಕರ್ನಾಟಕದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ರಾಜ್ಯಸಭಾ ಸದಸ್ಯತ್ವ ಅವಧಿಯು ಕ್ರಮವಾಗಿ 2026ರಲ್ಲಿ ಏಪ್ರಿಲ್ ಮತ್ತು ಜೂನ್‌ನಲ್ಲಿ ಮುಕ್ತಾಯವಾಗಲಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕರ್ನಾಟಕದಿಂದ ಸ್ಪರ್ಧೆ ನಡೆಯಲಿದ್ದು, ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಮತ್ತು ವಿರೋಧ ಪಕ್ಷಗಳು ಒಂದು ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ. ಆದರೆ ಇದು ಪಕ್ಷಗಳ ಬೆಂಬಲವನ್ನು ಅವಲಂಬಿಸಿರುತ್ತದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications