Bihar Election 2025: ಬಿಹಾರದಲ್ಲಿ ರಾಜಕೀಯ ಪಕ್ಷಗಳ ಹಣೆಬರಹ ಬರೆಯಲು ಮತದಾರ ಪ್ರಭು ಸಜ್ಜು!
ಬಿಹಾರ ಚುನಾವಣೆಗೆ ಮತದಾನ ಆರಂಭವಾಗಿದೆ, ಇಡೀ ದೇಶದ ಗಮನ ಸೆಳೆದಿರುವ ಬಿಹಾರದ ವಿಧಾನಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ಬಾರಿಯ ಬಿಹಾರ ಚುನಾವಣೆ ಹಲವು ಕಾರಣಕ್ಕೆ ಸದ್ದು ಮಾಡಿತ್ತು, ಹಾಗೇ ಕೊನೆಯ ಹಂತದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳವು ಆರೋಪ ತಲ್ಲಣ ಎಬ್ಬಿಸಿದೆ. ಇಷ್ಟೆಲ್ಲದರ ಮಧ್ಯೆ ಇದೀಗ 18 ಜಿಲ್ಲೆಗಳ 121 ಕ್ಷೇತ್ರಗಳ ಮತದಾರರು ಮೊದಲ ಹಂತದಲ್ಲಿ ತಮ್ಮ ಹಕ್ಕು ಚಲಾಯಿಸಲು ಮುಂದಾಗಿದ್ದಾರೆ.
ಲೋಕಸಭೆ ಚುನಾವಣೆ ನಂತರ ಅತಿಹೆಚ್ಚು ಕುತೂಹಲ ಕೆರಳಿಸಿರುವುದು ಬಿಹಾರದ ಈ ಎಲೆಕ್ಷನ್. ಬಿಹಾರದಲ್ಲಿ ಹಲವು ವರ್ಷಗಳಿಂದಲೂ ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗಿದ್ದು, ಸಾಲು ಸಾಲು ಗೆಲುವು ಕಂಡಿದ್ದರೂ ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂಬುದು ವಿರೋಧ ಪಕ್ಷಗಳ ನಾಯಕರ ಆರೋಪ. ಅದರಲ್ಲೂ ಕಾಂಗ್ರೆಸ್ ಮತ್ತು ಆರ್‌ಜೆಡಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಒಕ್ಕೂಟ ಬಿಜೆಪಿ & ಜೆಡಿಯು ನೇತೃತ್ವದ ಎನ್‌ಡಿಎ ವಿರುದ್ಧ ತೊಡೆತಟ್ಟಿದೆ.

ಬಿಹಾರದಲ್ಲಿ ಮತದಾನದ ಸಮಯ ಏನು?
ಹೀಗಾಗಿ ಯಾರಿಗೆ ಈ ಹೋರಾಟದಲ್ಲಿ ಗೆಲುವು? ಯಾರ ಪಾಲಿಗೆ ಸೋಲು? ಎಂಬ ಚರ್ಚೆ ಕೂಡ ಜೋರಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ತನಕವೂ ಬಿಹಾರ ವಿಧಾನಸಭೆ ಚುನಾವಣೆಯ ಮೊದಲನೇ ಹಂತದ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ತನಕ ಮಾತ್ರ ವೋಟಿಂಗ್ ನಡೆಯಲಿದೆ. ಹೀಗಾಗಿ ಎಲ್ಲಾ ಮತಗಟ್ಟೆಗಳ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಅಹಿತಕರ ಘಟನೆಗಳು ನಡೆಯದ ರೀತಿ ಕ್ರಮ ಕೈಗೊಳ್ಳಲಾಗಿದೆ.
ಪ್ರಧಾನಿ ಮೋದಿ ಅವರಿಂದ ವಿಶೇಷ ಸಂದೇಶ
ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲನೇ ಹಂತದಲ್ಲಿ ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸ್ಪೆಷಲ್ ಟ್ವೀಟ್ ಮಾಡಿದ್ದಾರೆ. 'ಬಿಹಾರದಲ್ಲಿ ಇಂದು ಪ್ರಜಾಪ್ರಭುತ್ವದ ಮೊದಲ ಹಂತವಾಗಿದೆ. ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಎಲ್ಲಾ ಮತದಾರರು ಉತ್ಸಾಹದಿಂದ ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ. ಹಾಗೂ ಇದೀಗ ಮೊದಲ ಬಾರಿ ಮತ ಚಲಾಯಿಸುತ್ತಿರುವ ರಾಜ್ಯದ ನನ್ನ ಎಲ್ಲಾ ಯುವ ಸ್ನೇಹಿತರಿಗೆ ನನ್ನ ವಿಶೇಷವಾದ ಅಭಿನಂದನೆ. ನೆನಪಿಡಿ: ಮೊದಲು ಮತ, ನಂತರ ಬ್ರೇಕ್ಫಾಸ್ಟ್!' ಎಂದು ಚುನಾವಣೆಯ ವಿಶೇಷ ಸಂದೇಶವನ್ನು ರವಾನಿಸಿದ್ದಾರೆ ಪ್ರಧಾನಿ ಮೋದಿ ಅವರು. ಈಗಾಗಲೇ ಮತದಾನ ಆರಂಭವಾಗಿದ್ದು, ಬಿಹಾರದಲ್ಲಿ ಬೆಳ್ಳಂಬೆಳಗ್ಗೆ ಮತದಾರರು ಅತ್ಯಂತ ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications