ಅಧಿಕಾರಕ್ಕೆ ಬಂದರೆ ಅವರ ಎದೆಯ ಮೇಲೆ ಬುಲ್ಡೋಜರ್: ಬೆಂಗಾವಲು ವಾಹನದ ಮೇಲೆ ದಾಳಿಗೆ ಬಿಹಾರದ ಡಿಸಿಎಂ ರಿಯಾಕ್ಷನ್‌!

Bihar Election 2025: ಬಿಹಾರ ವಿಧಾನಸಭೆ ಚುನಾವಣೆ 2025ರ ಮೊದಲ ಹಂತದ ಮತದಾನವು ಗುರುವಾರ ನಡೆದಿದ್ದು. ಮೊದಲ ಹಂತದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಬಿಹಾರದ ಲಖಿಸರಾಯಿ ಜಿಲ್ಲೆಯಲ್ಲಿ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾರ ಅವರ ಬೆಂಗಾವಲು ವಾಹನದ ಮೇಲೆ ಕೆಲವರು ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಗಣಿ ಹಾಗೂ ಚಪ್ಪಲಿಗಳನ್ನು ತೂರಿದ್ದಾರೆ ಎಂದು ಹೇಳಲಾಗಿದ್ದು, ಈ ದಾಳಿಯನ್ನು ಆರ್‌ಜೆಡಿ ಪಕ್ಷವೇ ನಡೆಸಿದೆ ಎಂದು ಬಿಜೆಪಿ ಆರೋಪಿಸಿದೆ.

ಬಿಹಾರದಲ್ಲಿ ಗುರುವಾರ ನಡೆಯುತ್ತಿರುವ ಮೊದಲ ಹಂತದ ವಿಧಾನಸಭೆ ಚುನಾವಣೆಯಲ್ಲಿ 121 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ ಬರೋಬ್ಬರಿ 3.75 ಕೋಟಿ ಜನ ಮತದಾರರು ತಮ್ಮ ಮತಚಲಾಯಿಸುತ್ತಿದ್ದಾರೆ. ಆದರೆ ಮೊದಲ ಹಂತದಲ್ಲಿ ಬಹುತೇಕ ಪ್ರದೇಶದಲ್ಲಿ ಶಾಂತಿಯುತ ಮತದಾನ ನಡೆದಿದ್ದು ಕೆಲವು ಕಡೆಗಳಲ್ಲಿ ಸಣ್ಣಪುಟ್ಟ ಗಲಭೆಗಳು ವರದಿಯಾಗಿವೆ.

Bihar Election 2025 We ll Bulldoze Convoy Attackers Deputy CM Vijay Kumar Sinha s Stark Promise

ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾರ ಅವರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಲಖಿಸರಾಯಿ ವಿಧಾನಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತಿದ್ದೇನೆ. ಅಲ್ಲದೇ ಮೂರು ಬಾರಿಯ ಬಿಜೆಪಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನನ್ನ ಮೇಲಿನ ದಾಳಿಯನ್ನು ಆರ್‌ಜೆಡಿ ಪಕ್ಷದ ಬೆಂಬಲಿಗರೇ ನಡೆಸಿದ್ದಾರೆ. ನಾನು ಖೋರಿಯಾರಿ ಗ್ರಾಮಕ್ಕೆ ಭೇಟಿ ನೀಡಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಇನ್ನು ವಿಜಯ್ ಕುಮಾರ್ ಸಿನ್ಹಾರ ಅವರ ಬೆಂಗಾವಲು ವಾಹನಗಳನ್ನು ತಡೆಯಲಾಗಿದ್ದು, ವಿಜಯ್ ಕುಮಾರ್ ಸಿನ್ಹಾರ ಅವರ ವಿರುದ್ಧ ಧಿಕ್ಕಾರ ಕೂಗಲಾಗಿದೆ. ಬಿಹಾರದಲ್ಲಿ ಹೈವೋಲ್ಟೇಜ್ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿರುವಾಗ ಮತಗಟ್ಟೆಗಳಿಗೆ ಅವರು ಭೇಟಿ ನೀಡುತ್ತಿದ್ದರು ಎಂದು ಹೇಳಲಾಗಿದೆ. ಪ್ರತಿಭಟನಾಕಾರರು ಪ್ರಮುಖ ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿತ ಗೂಂಡಾಗಳು ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ್ದಾರೆ. ಇದೇ ಆರೋಪವನ್ನು ವಿಜಯ್ ಕುಮಾರ್ ಸಿನ್ಹಾರ ಅವರು ಸಹ ಮಾಡಿದ್ದಾರೆ. ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ನನ್ನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದವರ ಎದೆಯ ಮೇಲೆ ಬುಲ್ಡೋಜರ್‌ಗಳನ್ನು ಓಡಿಸುತ್ತೇವೆ ಎಂದು ವಿಜಯ್ ಕುಮಾರ್ ಸಿನ್ಹಾರ ಹೇಳಿದ್ದಾರೆ ಎಂದು ವರದಿಯಾಗಿದೆ.

ಕೆಲವು ಬೂತ್ ಮಟ್ಟದಲ್ಲಿ ಬೂತ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗುತ್ತಿದೆ. ನನ್ನ ಮತಗಟ್ಟೆ ಏಜೆಂಟ್ ಅನ್ನು ಬೂತ್‌ನಿಂದ ಹೊರಹಾಕಲಾಗಿದೆ. ಜನರಿಗೆ ಮತ ಚಲಾಯಿಸಲು ಅವಕಾಶ ನೀಡುತ್ತಿಲ್ಲ ಎನ್ನುವ ಗಂಭೀರ ಆರೋಪಗಳನ್ನೂ ಅವರು ಇದೇ ಸಂದರ್ಭದಲ್ಲಿ ಮಾಡಿದ್ದಾರೆ. ಆದಾಗ್ಯೂ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಜಿಲ್ಲೆಯಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+