Bihar Election Results: ನಾವು ಗೆಲ್ಲುತ್ತೇವೆ, ಬದಲಾವಣೆ ಬರಲಿದೆ- ತೇಜಸ್ವಿ ಯಾದವ್
Bihar Election Results: ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಈ ಕುರಿತು ಶುಕ್ರವಾರ ಬೆಳಿಗ್ಗೆ ಹೇಳಿಕೆ ನೀಡಿರುವ ಆರ್‌ಜೆಡಿ ನಾಯಕ, ಮಹಾಘಟಬಂಧನವು ಜಯ ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರು ಬಿಹಾರ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ್ದು, ಬಿಹಾರದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಆರ್‌ಜೆಡಿ ಹಾಗೂ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧವು ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
'ನಾವು ಗೆಲ್ಲುತ್ತೇವೆ. ಎಲ್ಲರಿಗೂ ಧನ್ಯವಾದಗಳು. ಬದಲಾವಣೆ ಬರಲಿದೆ. ನಾವು ಸರ್ಕಾರ ರಚಿಸುತ್ತಿದ್ದೇವೆ' ಎಂದು ಅವರು ಹೇಳಿದ್ದಾರೆ.
ಆರ್‌ಜೆಡಿ ಪಕ್ಷದ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಅವರ ಸಹೋದರಿ, ಲೋಕಸಭಾ ಸಂಸದೆ ಮಿಸಾ ಭಾರ್ತಿ ಅವರೊಂದಿಗೆ ಮತ ಎಣಿಕೆ ಪ್ರಾರಂಭವಾಗುವ ಕೆಲವೇ ನಿಮಿಷಗಳ ಮೊದಲು ತಮ್ಮ ಪಾಟ್ನಾ ಮನೆಯಿಂದ ಹೊರಬಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ಆರ್‌ಜೆಡಿ ಪಕ್ಷದ ಭದ್ರಕೋಟೆಯಾದ ರಾಘೋಪುರ್‌ನಿಂದ ತೇಜಸ್ವಿ ಯಾದವ್ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಸತೀಶ್ ಕುಮಾರ್ ಕಣಕ್ಕೆ ಇಳಿದ್ದಿದ್ದಾರೆ.
ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತದ ಚುನಾವಣೆ ನಡೆಯಿತು. ಆರ್‌ಜೆಡಿ ಕಾಂಗ್ರೆಸ್ ಮತ್ತು ಎಡಪಂಥೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಹಾಗೂ ನಿತೀಶ್ ನೇತೃತ್ವದ ಜೆಡಿಯು ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಮಂಗಳವಾರ ಹೊರಬಂದಿರುವ ಎಕ್ಸಿಟ್ ಪೋಲ್ ಪ್ರಕಾರ, ಎನ್‌ಡಿಎ ಪಕ್ಷವು ಭಾರೀ ಬಹುಮತವನ್ನು ಪಡೆದು ಅಧಿಕಾರದ ಗದ್ದುಗೆ ಏರಲಿದೆ.
#WATCH | Patna: Bihar Assembly Election Results | Mahagathbandhan's CM face and RJD leader Tejashwi Yadav says, "We are going to win. Thanks to everyone. A change is about to come. We are forming the government" pic.twitter.com/p6pVag0e96
— ANI (@ANI) November 14, 2025
ಸತತವಾಗಿ ಬಿಹಾರದಲ್ಲಿ ಅಧಿಕಾರ ನಡೆಸುತ್ತಾ ಬಂದಿರುವ ಬಿಜೆಪಿ ಮತ್ತು ಆರ್‌ಜೆಡಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೂಡ ಗೆದ್ದು ಬೀಗುವ ಆತ್ಮವಿಶ್ವಾಸ ಹೊಂದಿದೆ. ಇಂತಹ ಪರಿಸ್ಥಿತಿಯಲ್ಲಿ ದಿಢೀರ್ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ? ಎಂಬ ಅನುಮಾನ ಕೂಡ ಮೂಡಿದೆ. ಎರಡೂ ಕಡೆ ಇಂತಹ ಪರಿಸ್ಥಿತಿ ಎದುರಾದರೆ ನಿಭಾಯಿಸುವ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ನಾಯಕರು.












Click it and Unblock the Notifications