ಬಿಹಾರ ಚುನಾವಣೆ ಫಲಿತಾಂಶ: ನರೇಂದ್ರ ಮೋದಿಗೆ ಅಗ್ನಿ ಪರೀಕ್ಷೆ, ಯಾಕೆ ?
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಹೊಸ ಇತಿಹಾಸ ಸೃಷ್ಟಿ ಆಗಲಿದೆ. ಬಿಹಾರದಲ್ಲಿ ಈ ಬಾರಿ ಎನ್ಡಿಎ ಅಥವಾ ಮಹಾಘಟಬಂಧನ್ ಯಾವುದೇ ಮೈತ್ರಿ ಕೂಟ ಅಧಿಕಾರಕ್ಕೇರಿದರೂ ಅದು ಹೊಸ ರಾಜಕೀಯಕ್ಕೆ ಸಾಕ್ಷಿ ಆಗಲಿದೆ. ಇದಕ್ಕೆ ಮುಖ್ಯ ಕಾರಣ ಬಿಹಾರದ ರಾಜಕೀಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಗಿರುವ ಪ್ರಮುಖ ಬದಲಾವಣೆಗಳು. ದೇಶದ ಎಲ್ಲರ ಗಮನವು ಈಗ ಬಿಹಾರದ ಫಲಿತಾಂಶದ ಮೇಲಿದೆ.
ಈ ಬಾರಿಯ ಬಿಹಾರದ ವಿಧಾನಸಭೆ ಚುನಾವಣೆಯು ಐವರಿಗೆ ಅತ್ಯಂತ ಮಹತ್ವದಾಗಿದೆ. ಕೇಂದ್ರದಲ್ಲೂ ಮೈತ್ರಿ ಹೊಂದಿರುವ ಜನತಾದಳ (ಸಂಯುಕ್ತ)ಕ್ಕೆ ಬಿಹಾರದ ವಿಧಾನಸಭೆ ಚುನಾವಣೆಯು ಅಗ್ನಿ ಪರೀಕ್ಷೆ ಎಂದೇ ಪರಿಗಣಿಸಲಾಗಿದೆ. ಪೂರ್ವ ಭಾರತದ ಪ್ರಮುಖ ರಾಜ್ಯಗಳಲ್ಲಿ ಬಿಹಾರವೂ ಒಂದಾಗಿದೆ. ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿಯೂ ಹಿಂದುಳಿದಿರುವ ಈ ರಾಜ್ಯವು ಹೊಸ ಬದಲಾವಣೆಯ ನಿರೀಕ್ಷೆಯಲ್ಲಿದೆ. ಒಂದು ಕಾಲದಲ್ಲಿ ಗೂಂಡಾ ರಾಜ್ಯ, ಜಂಗಲ್ ರಾಜನ ಆಡಳಿತ ಎನ್ನುವ ಕುಖ್ಯಾತಿ ಗಳಿಸಿದ್ದ ರಾಜ್ಯವು ಇದೀಗ ಕ್ರಮೇಣ ತನ್ನ ವರ್ಚಸ್ಸು ಬದಲಾಯಿಸಿಕೊಳ್ಳುತ್ತಿದೆ. ಆದರೆ ಇದು ಪೂರ್ಣ ಪ್ರಮಾಣದಲ್ಲಿ ಆಗಿಲ್ಲ.

ಬಿಹಾರ ರಾಜ್ಯವು ಇಲ್ಲಿಯ ವರೆಗೆ 23 ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೆ ಇಂದಿಗೂ ಈ ರಾಜ್ಯದಲ್ಲಿ ಕನಿಷ್ಠ ವೇತನ, ಉದ್ಯೋಗ, ಶಿಕ್ಷಣ, ಬಡತನ ಹಾಗೂ ಅಭಿವೃದ್ಧಿ ವಿಚಾರಗಳಲ್ಲಿ ಭಾರೀ ಹಿಂದುಳಿದಿದೆ. ಅಲ್ಲದೇ ಹಲವು ರಾಜಕೀಯ ಸ್ಥಿತ್ಯಂತರಗಳು, ಅಚ್ಚರಿಯ ಬೆಳವಣಿಗೆಗಳಿಗೂ ಬಿಹಾರ ಸಾಕ್ಷಿಯಾಗಿದೆ. ಬಿಹಾರದಲ್ಲಿ ಆರಂಭದಲ್ಲಿ ಕಾಂಗ್ರೆಸ್ ಪ್ರಾಬಲ್ಯವಿತ್ತು. ಜೆಪಿ ಚಳವಳಿ ಸೇರಿ ಅನೇಕ ಆಂದೋಲನಗಳ ಬಳಿಕ ಸಮಾಜವಾದಿ ಸಿದ್ಧಾಂತ ಪ್ರಸಿದ್ಧಿ ಗಳಿಸಿತ್ತು.
ಈ ಬಾರಿಯ ಚುನಾವಣೆಯು ನಿತೀಶ್ ಕುಮಾರ್, ನರೇಂದ್ರ ಮೋದಿ, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಹಾಗೂ ಪ್ರಶಾಂತ್ ಕಿಶೋರ್ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ಪ್ರಮುಖವಾಗಿದೆ.
ಮೋದಿಗೆ ಅಗ್ನಿ ಪರೀಕ್ಷೆ: ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮೋದಿಗೆ ಅಗ್ನಿ ಪರೀಕ್ಷೆ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಬಿಹಾರದ ಎರಡನೇ ಹಂತದ ಮತದಾನ ನಡೆಯುವ ಮುಂಚೆ ನಡೆದ ದೆಹಲಿಯ ಬಾಂಬ್ ಸ್ಫೋಟ, ಬಿಹಾರದಲ್ಲಿ ಪ್ರಭಾವಿಗಳಿಗೆ ಕಡಿಮೆ ಬೆಲೆಯಲ್ಲಿ ಭೂಮಿ ದಾನ ಮಾಡಿದ ವಿಚಾರ ಹಾಗೂ ವೋಟ್ ಚೋರಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಹಾರದಲ್ಲಿ ಆಡಳಿತ ವಿರೋಧಿ ಅಲೆಯೂ ಇರುವುದರಿಂದ ಈ ಬಾರಿಯ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಚಾಲೆಂಜಿಂಗ್ ಆಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications