Bihar Exit Poll Result 2025: ಟೈಮ್ಸ್ ನೌ ಜೆವಿಸಿ ಪ್ರಕಾರ ಬಿಹಾರದಲ್ಲಿ ಈ ಪಕ್ಷಕ್ಕೆ ಪೂರ್ಣ ಬಹುಮತ
ಬಿಹಾರ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. ಎರಡು ಹಂತಗಳಲ್ಲಿ ಈ ಚುನಾವಣೆ ನಡೆದಿದ್ದು, ಅಂತಿಮ ಹಂತದ ಮತದಾನಕ್ಕೆ ಇಂದು ತೆರೆ ಬಿದ್ದಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ನವೆಂಬರ್ 14ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಎಂದಿನಂತೆ ವಿವಿಧ ಏಜೆನ್ಸಿಗಳು ಹಾಗೂ ಮಾಧ್ಯಮ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ (ಎಕ್ಸಿಟ್ ಪೋಲ್) ನಡೆಸಿದ್ದು, ಬಿಹಾರದಲ್ಲಿ ಈ ಬಾರಿ ಅಧಿಕಾರಕ್ಕೆ ಬರುವುದು ಯಾರು? ಎಂಬ ಭವಿಷ್ಯ ನುಡಿದಿವೆ. ಟೈಮ್ಸ್ ನೌ ಜೆವಿಸಿ (Times Now JVC) ಸಂಸ್ಥೆ ಕೂಡ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟಿಸಿದೆ.
ನವೆಂಬರ್ 6ರಂದು ಮೊದಲ ಹಂತದಲ್ಲಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಶೇ 65.08ರಷ್ಟು ಮತದಾನ ನಡೆದಿತ್ತು. ನವೆಂಬರ್ 11ರಂದು ಇಂದು ಎರಡನೇ ಹಂತದಲ್ಲಿ 20 ಜಿಲ್ಲೆಗಳ ಉಳಿದ 122 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಚುನಾವಣೆಗೆ ತೆರೆ ಬೀಳುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಹೊರಬಿದ್ದಿವೆ. ಬಿಹಾರದಲ್ಲಿ ಈ ಬಾರಿ ಪಟ್ಟಕ್ಕೇರುವುದು ಯಾರು? ಎಂದು ಸುಳಿವು ನೀಡಿವೆ.

ಅದರಂತೆ ಟೈಮ್ಸ್ ನೌ ಜೆವಿಸಿ ಎಕ್ಸಿಟ್ ಪೋಲ್ ಪ್ರಕಾರ ಎನ್‌ಡಿಎ 135-150 ಸ್ಥಾನಗಳನ್ನು ಪಡೆಯಲಿದೆ. ಮಹಾಘಟಬಂಧನ್‌ಗೆ 88-103 ಕ್ಷೇತ್ರಗಳಲ್ಲಿ ಗೆಲುವು ಸಿಗಲಿದೆ. ಇತರೆ 3ರಿಂದ 7 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಬಿಹಾರ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತವು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷವಾದ "ಇಂಡಿಯಾ" ಬಣಕ್ಕೆ ನಿರ್ಣಾಯಕವಾಗಿದೆ.
243 ವಿಧಾನಸಭಾ ಸ್ಥಾನಗಳಲ್ಲಿ ಒಂದು ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚಿಸಲು ಕನಿಷ್ಠ 122 ಸ್ಥಾನಗಳನ್ನು ಗೆಲ್ಲಬೇಕಿದೆ. ಅದರಂತೆ ಟೈಮ್ಸ್ ನೌ ಜೆವಿಸಿ ಎಕ್ಸಿಟ್ ಪೋಲ್ ಪ್ರಕಾರ ಎನ್‌ಡಿಎ ಒಕ್ಕೂಟಕ್ಕೆ ಪೂರ್ಣ ಬಹುಮತ ಸಿಗಲಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂಬ ಭವಿಷ್ಯ ನುಡಿದಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ(ಯು)-ಬಿಜೆಪಿ ನೇತೃತ್ವದ ಎನ್‌ಡಿಎ ಈ ಬಾರಿಯೂ ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ? ಅಥವಾ ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಕುಮಾರ್ ಅವರ 20 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಕೊನೆಗೊಳಿಸುವಲ್ಲಿ ಯಶಸ್ವಿಯಾಗುತ್ತದೆಯೇ ಎಂಬುದನ್ನು ಈ ಫಲಿತಾಂಶ ನಿರ್ಧರಿಸಲಿದೆ.
2020ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 42 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆರ್‌ಜೆಡಿ 33 ಸ್ಥಾನಗಳನ್ನು, ಜನತಾದಳ (ಯುನೈಟೆಡ್) 20 ಸ್ಥಾನಗಳನ್ನು, ಕಾಂಗ್ರೆಸ್ 11 ಮತ್ತು ಎಡಪಕ್ಷಗಳು ಒಟ್ಟಾಗಿ ಐದು ಸ್ಥಾನಗಳನ್ನು ಗೆದ್ದಿತ್ತು.
ಇಂದು ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಸಂಜೆ 5 ಗಂಟೆಯವರೆಗೆ ಶೇ 67.14 ರಷ್ಟು ಮತದಾನ ದಾಖಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಬಿಹಾರ ಚುನಾವಣೆಯ ಎರಡನೇ ಹಂತದಲ್ಲಿ ಶೇ.67.14 ರಷ್ಟು ಅತ್ಯಧಿಕ ಮತದಾನ ದಾಖಲಾಗಿದ್ದು, ಅತಿ ಹೆಚ್ಚು ಕಾಲ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications